Just In
- 22 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎರಡು ಪೆಟ್ರೋಲ್ ಎಂಜಿನ್ ಮತ್ತು ಮೂರು ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ ಎಂಜಿ ಹೊಸ ಕಾರು
ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಐದನೇ ಕಾರು ಮಾದರಿಯಾಗಿ ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯೊಂದನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಸೆಗ್ಮೆಂಟ್ ಕಾರು ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಪವರ್ಫುಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.
ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ಜೆಡ್ಎಸ್ ಪೆಟ್ರೋಲ್ ಮಾದರಿಯಾಗಿ ಪರೀಕ್ಷೆ ಕೈಗೊಂಡಿದ್ದು, ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
2020ರ ಫೆಬ್ರವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಎಂಜಿ ಹೊಸ ಕಾರು ಮಾದರಿಯು ಈ ವರ್ಷದ ಮೂರನೇ ತ್ರೈಮಾಸಿಕ ವೇಳೆಗೆ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರು ಆರಂಭಿಕವಾಗಿ ರೂ.10 ಲಕ್ಷದೊಳಗೆ ಬೆಲೆ ಹೊಂದಿರಲಿದೆ.
ಸದ್ಯಕ್ಕೆ ಹೊಸ ಕಾರಿನ ತಾಂತ್ರಿಕ ಮಾಹಿತಿಗಳನ್ನು ಸದ್ಯಕ್ಕೆ ಬಹಿರಂಗಪಡಿಸಲು ನಿರಾಕರಿಸಿರುವ ಎಂಜಿ ಕಂಪನಿಯ ಹೊಸ ಕಾರಿನಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳನ್ನು ಅಳವಡಿಸಿ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದ್ದು, ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದೆ.
ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು. ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.
ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.
ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಹೊಸ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.
MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು
ಹೊಸ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.
ಈ ಮೂಲಕ ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಹೊಸ ಕಾರು 4,314-ಎಂಎಂ ಉದ್ದ, 1,890-ಎಂಎಂ ಅಗಲ, 1,611-ಎಂಎಂ ಎತ್ತರ ಮತ್ತು 2,589-ಎಂಎಂ ವೀಲ್ಹ್ಬೆಸ್ ಪಡೆದುಕೊಂಡಿದ್ದು, ಹೆಚ್ಚಿನ ಮಟ್ಟದ ಸ್ಥಳೀಯ ಬಿಡಿಭಾಗಗಳೊಂದಿಗೆ ಉತ್ಪಾದನೆಗೊಂಡಿರುವುದರಿಂದ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ.