ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತದಲ್ಲಿ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪನಿಯು ಕೇವಲ ದ್ವಿಚಕ್ರ ವಾಹನಗಳನ್ನು ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

2030ರ ವೇಳೆಗೆ ದೇಶಾದ್ಯಂತ ಕೇವಲ ಎಲೆಕ್ಟ್ರಿಕ್ ವಾಹನಗಳು ಮಾತ್ರ ಮಾರಾಟಗೊಳ್ಳಬೇಕೆಂಬ ಮಹತ್ವದ ಗುರಿಹೊಂದಲಾಗಿದ್ದು, ಕೇಂದ್ರ ಸರ್ಕಾರದ ನಿರ್ಣಯದಂತೆ ಆಟೋ ಉತ್ಪಾದನಾ ಕಂಪನಿಗಳು ಇವಿ ವಾಹನಗಳ ಉತ್ಪಾದನೆಯತ್ತ ಗಮನಹರಿಸಿವೆ. ಮಾರುಕಟ್ಟೆಗೆ ಈಗಾಗಲೇ ವಿವಿಧ ಹಲವು ಹೊಸ ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆ ಪ್ರವೇಶಿಸಿದ್ದು, ಓಲಾ ಕಂಪನಿಯು ತನ್ನ ಸಹ ಹೊಸ ಎಸ್ ಸರಣಿ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಬಜೆಟ್ ಬೆಲೆಯೊಂದಿಗೆ ಅತ್ಯುತ್ತಮ ಡಿಸೈನ್ ಪ್ರೇರಿತ, ಧೀರ್ಘಕಾಲಿಕ ಬ್ಯಾಟರಿ ರೇಂಜ್ ಹೊಂದಿರುವ ಸ್ಕೂಟರ್ ಬಿಡುಗಡೆ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಕಂಪನಿಯು ಭವಿಷ್ಯದಲ್ಲಿ ಬೃಹತ್ ಯೋಜನೆಗಳೊಂದಿಗೆ ಆಟೋ ಉತ್ಪಾದನಾ ವಲಯದಲ್ಲಿ ಮುಂಚೂಣಿ ಸಾಧಿಸುವ ನೀರಿಕ್ಷೆಯಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ವಿವಿಧ ವಾಹನ ಉತ್ಪಾದನಾ ಕಂಪನಿಗಳ ಸ್ಪರ್ಧೆಯ ನಡುವೆಯೂ ಮೊದಲ ಹಂತದಲ್ಲೇ ಬಜೆಟ್ ಬೆಲೆಯೊಂದಿಗೆ ಅತ್ಯಧಿಕ ಬ್ಯಾಟರಿ ರೇಂಜ್ ಹೊಂದಿರುವ ಸ್ಕೂಟರ್ ಬಿಡುಗಡೆ ಮಾಡಿರುವ ಓಲಾ ಕಂಪನಿಯು ಪ್ರಯಾಣಿಕ ಕಾರು ವಿಭಾಗಕ್ಕೂ ಹೊಸ ಎಲೆಕ್ಟ್ರಿಕ್ ಕಾರು ಉತ್ಪನ್ನಗಳೊಂದಿಗೆ ಲಗ್ಗೆಯಿಡುವ ಸುಳಿವು ನೀಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಇವಿ ಸ್ಕೂಟರ್ ಬಿಡುಗಡೆಯ ನಂತರ ಮುಂದಿನ ಯೋಜನೆ ಕುರಿತಾಗಿ ಗ್ರಾಹಕರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಓಲಾ ಸಿಇಒ ಭಾವಿಶ್ ಅಗರ್‌ವಾಲ್ ಅವರು 2023ರ ವೇಳೆಗೆ ಓಲಾ ನಿರ್ಮಾಣದ ಎಲೆಕ್ಟ್ರಿಕ್ ಕಾರನ್ನೇ ಹೊಂದುವ ಬಗ್ಗೆ ಮಾಹಿತಿ ನೀಡಿದ್ದು, ಹೊಸ ಯೋಜನೆಗಾಗಿ ಬೃಹತ್ ಪ್ರಮಾಣದ ಯೋಜನೆಯನ್ನೇ ಸಿದ್ದಗೊಳಿಸಲಾಗುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಸದ್ಯಕ್ಕೆ ಬಿಡುಗಡೆ ಮಾಡಲಾಗಿರುವ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಾಗಿ ಮಾರುಕಟ್ಟೆ ಒದಗಿಸುವುದು ಉತ್ಪಾದನಾ ಘಟಕದ ವಿಸ್ತರಣೆ ಮತ್ತು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳದ ಮೇಲೆ ಗಮನಹರಿಸುತ್ತಿದ್ದು, 2023ರ ವೇಳೆಗೆ ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ನಿರ್ಮಾಣ ಮಾಡುವ ಸಿದ್ದತೆಯಲ್ಲದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಕುರಿತ ವಿವಿಧ ಹಂತದ ಹಲವು ಮಾರುಕಟ್ಟೆ ಅಧ್ಯಯನಗಳನ್ನು ಕೈಗೊಂಡಿದ್ದು, ಕಾರುಗಳ ವಿಭಾಗದಲ್ಲಿ ವಾಣಿಜ್ಯ ಬಳಕೆಗಾಗಿ ಮತ್ತು ವ್ಯಯಕ್ತಿಕ ಬಳಕೆ ಮಾದರಿಗಳಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆಯಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಭಾರತದಲ್ಲೇ ಪೂರ್ಣ ಪ್ರಮಾಣದ ವಾಹನ ಉತ್ಪಾದನೆಯ ಗುರಿಹೊಂದಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತದಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ಇವಿ ವಾಹನಗಳನ್ನು ರಫ್ತು ಮಾಡುವ ಯೋಜನೆಯಲ್ಲಿದ್ದು, ಹೊಸ ಯೋಜನೆಗಾಗಿ ಓಲಾ ಕಂಪನಿಯು ಸುಮಾರು ರೂ. 2,400 ಕೋಟಿ ಬಂಡವಾಳ ಹೂಡಿಕೆ ಮಾಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಓಲಾ ಕಂಪನಿಯು ಹೊಸ ವಾಹನ ಉತ್ಪಾದನಾ ಘಟಕವನ್ನು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣ ಮಾಡಿದ್ದು, ಹೊಸ ಘಟಕವು ದೇಶದ ಅತ್ಯಾಧುನಿಕ ವಾಹನ ಉತ್ಪಾದನಾ ಘಟಕಗಳಲ್ಲಿ ಒಂದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಾಹನಗಳ ಬಿಡಿಭಾಗಗಳನ್ನು ಜೋಡಣೆ ಮಾಡಲು ಸುಮಾರು 5 ಸಾವಿರ ರೋಬೋಟ್‌ಗಳನ್ನು ಹೊಸ ಘಟಕದಲ್ಲಿ ನಿಯೋಜಿಸಲಾಗುತ್ತಿದ್ದು, ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿರುವ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳು ಉತ್ಪಾದನೆಯಾಗಲಿವೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಮೇಕ್ ಇನ್ ಇಂಡಿಯಾ ಫಾರ್ ವರ್ಲ್ಡ್ ಅಭಿಯಾನದಡಿ ಭಾರತದಲ್ಲೇ ಉತ್ಪಾದಿಸಿ ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಗೆ ಚಾಲನೆ ನೀಡಿರುವ ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಲ್ಯಾಟಿನ್ ಅಮೆರಿಕ, ಆಫ್ರಿಕಾ ರಾಷ್ಟ್ರಗಳಲ್ಲೂ ಮಾರಾಟ ಮಾಡಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ಸಹ ಅತ್ಯಧಿಕ ಬ್ಯಾಟರಿ ರೇಂಜ್ ಹೊಂದಿರುವ ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರುಗಳನ್ನು ಬಜೆಟ್ ಬೆಲೆಯಲ್ಲಿ ನಿರ್ಮಣ ಮಾಡಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳ ವಿಭಾಗದಲ್ಲಿ ತ್ರಿ ಚಕ್ರ ವಾಹನಗಳು, ಫ್ಲಿಟ್ ವಾಹನಗಳ ಜೊತೆ ವ್ಯಯಕ್ತಿಕ ಬಳಕೆಯ ಕಾರುಗಳು ಬಿಡುಗಡೆಯಾಗಲಿದ್ದು, 2025ರ ವೇಳೆಗೆ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹಲವು ಕಂಪಂನಿಗಳನ್ನು ಹಿಂದಿಕ್ಕಿ ಮುನ್ನುಗ್ಗುವ ಸಿದ್ದತೆಯಲ್ಲಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಇನ್ನು ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಅಧಿಕ ಮೈಲೇಜ್ ರೇಂಜ್ ಮತ್ತು ಕೈಗೆಟುಕುವ ಬೆಲೆಗಳಲ್ಲಿ ಬಿಡುಗಡೆಗೊಳಿಸಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಎಸ್1 ಮತ್ತು ಎಸ್1 ಪ್ರೊ ವೆರಿಯೆಂಟ್‌ಗಳನ್ನು ಖರೀದಿ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಹೊಸ ಎಸ್1 ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಹೊಸ ಸ್ಕೂಟರ್ ಬೆಲೆಯು ಕೆಲವು ರಾಜ್ಯಗಳಲ್ಲಿ ಹೆಚ್ಚುವರಿ ಸಬ್ಸಡಿ ನೀಡುತ್ತಿರುವ ಹಿನ್ನಲೆಯಲ್ಲಿ ಸಬ್ಸಡಿ ಹೊಂದಿರದ ರಾಜ್ಯಗಳಿಂತೂ ತುಸು ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಎಸ್1 ವೆರಿಯೆಂಟ್‌ನಲ್ಲಿ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, 8.5kW ಎಲೆಕ್ಟ್ರಿಕ್ ಮೋಟಾರ್ ಮೂಲಕ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾತ್ರವಲ್ಲ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೂ ಸಿದ್ದವಾದ ಓಲಾ

ಈ ಮೂಲಕ ಎಸ್1 ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ನೀಡಲಿದ್ದು, ಹೋಂ ಚಾರ್ಜರ್ ಮೂಲಕ ಪೂರ್ತಿಯಾಗಿ ಚಾರ್ಜ್ ಆಗಲು 7 ಗಂಟೆ ತೆಗೆದುಕೊಳ್ಳುತ್ತದೆ.

Most Read Articles

Kannada
English summary
All new ola electric car confirmed for india soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X