ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿದ ರೆನಾಲ್ಟ್
ರೆನಾಲ್ಟ್ ಕಂಪನಿಯ ತನ್ನ ಬಹುನೀರಿಕ್ಷಿತ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಉತ್ಪಾದನಾ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುತಕೊಂಡಿರಲಿದೆ.

ಹೊಸ ಕಾರು ಮಾದರಿಯು ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ನಂತರ ರೆನಾಲ್ಟ್ ಕಿಗರ್ ಕಾರು ಕೂಡಾ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಕಿಗರ್ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿರುವ ರೆನಾಲ್ಟ್ ಕಂಪನಿಯು ಫೆಬ್ರುವರಿ ಆರಂಭದಲ್ಲಿ ಬುಕ್ಕಿಂಗ್ ಆರಂಭಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದೆ.

ರೆನಾಲ್ಟ್ ಹೊಸ ಕಿಗರ್ ಕಾರು ಮಾದರಿಯು ವಿಭಿನ್ನವಾದ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ನಾಲ್ಕು ಮೀಟರ್‌ಗಿಂತಲೂ ಕಡಿಮೆ ಉದ್ದಳತೆಯೊಂದಿಗೆ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

ಹೊಸ ಕಾರಿನಲ್ಲಿ ಕಾನ್ಸೆಪ್ಟ್ ಮಾದರಿಯಲ್ಲೇ ಶೇ.80 ತಾಂತ್ರಿಕ ಅಂಶಗಳನ್ನು ಉತ್ಪಾದನಾ ಮಾದರಿಯಲ್ಲೂ ಅಳವಡಿಸಿಕೊಳ್ಳಲು ಯತ್ನಿಸಿರುವ ರೆನಲ್ಟ್ ಕಂಪನಿಯು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತದೆ.

ಹಾಗೆಯೇ ಹೊಸ ಕಿಗರ್ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಸ್ಪಾಯ್ಲರ್, ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದೆ.

ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದ್ದು, ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಜೊತೆಗೆ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೌಲಭ್ಯಗಳಿವೆ.

ಕಿಗರ್ ಉದ್ದಳತೆ
ರೆನಾಲ್ಟ್ ಹೊಸ ಕಿಗರ್ ಕಾರು 3991 ಎಂಎಂ ಉದ್ದ, 1750 ಎಂಎಂ ಅಗಲ, 1600 ಎಂಎಂ ಎತ್ತರ, 2500 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಅತ್ಯುತ್ತಮ ಆಸನ ಸೌಲಭ್ಯಹೊಂದಿದ್ದು, 405-ಲೀಟರ್ ಸಾಮರ್ಥ್ಯದ ಬೂಟ್‌ಸ್ಪೆಸ್ ಸೌಲಭ್ಯವು ಕಂಪ್ಯಾಕ್ಟ್ ಎಸ್‌ಯುವಿ ಖರೀದಿದಾರರ ಪ್ರಮುಖ ಆಕರ್ಷಣೆಯಾಗಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಂಜಿನ್ ಮತ್ತು ಪರ್ಫಾಮೆನ್ಸ್
ರೆನಾಲ್ಟ್ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಮಾದರಿಯ ಜೋಡಣೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಹೊಸ ಕಾರಿನಲ್ಲಿ ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಡ್ರೈವ್ ಮೋಡ್‌ಗಳು ಕಾರು ಚಾಲನೆಯನ್ನು ಮತ್ತಷ್ಟು ಸರಳಗೊಳಿಸಲಿದ್ದು, ಒಟ್ಟು ಆರು ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಆಯ್ದ ಮಾದರಿಗಳಲ್ಲಿ ಡ್ಯುಯಲ್ ಬಣ್ಣವನ್ನು ನೀಡಲಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಈ ಮೂಲಕ ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿರುವ ಹೊಸ ಕಿಗರ್ ಕಾರು ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.5.50 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.


Click it and Unblock the Notifications








