ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿರುವ ರೆನಾಲ್ಟ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದು, ಕಂಪನಿಯು ಹೊಸ ಕಾರಿನ ಬಿಡುಗಡೆಗೂ ಮುನ್ನ ತನ್ನ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಸ್ಟಾಕ್ ಮಾಡುತ್ತಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಆಕರ್ಷಕ ವಿನ್ಯಾಸ ಹೊಂದಿರುವ ಹೊಚ್ಚ ಹೊಸ ಕಿಗರ್ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಕಿಗರ್ ಹೊಸ ಕಾರು ಮಾದರಿಯು ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡಿದೆ. ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಿಕೊಳ್ಳುತ್ತಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳನ್ನು ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿದ್ದರೂ ಎರಡು ಕಾರುಗಳು ವಿಭಿನ್ನವಾದ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ಸದ್ಯ ಮ್ಯಾಗ್ನೈಟ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಹೊಂದಿದ್ದು, ರೆನಾಲ್ಟ್ ಕಿಗರ್ ಕಾರು ಮಾದರಿಯು ಕೂಡಾ ಮಾಗ್ನೈಟ್ ಕಾರು ಮಾದರಿಯಲ್ಲೇ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆಯೊಂದಿಗೆ ಬೆಲೆಯಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ರೆನಾಲ್ಟ್ ಕಿಗರ್ ಕಾರು ಮಾದರಿಯು ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಆರಂಭದ 1 ತಿಂಗಳ ಅವಧಿಯಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಆರಂಭಿಕವಾಗಿ ರೂ. 5 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯನ್ನು 9 ಲಕ್ಷ ಬೆಲೆಗೆ ಮಾರಾಟ ಮಾಡುವ ಸಾಧ್ಯತೆಗಳಿದ್ದು, 1 ತಿಂಗಳ ನಂತರ ಮತ್ತೆ ಬೆಲೆ ಹೆಚ್ಚಳ ಮಾಡಬಹುದಾಗಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ಬೆಲೆ ಹೆಚ್ಚಳದ ನಂತರವೂ ಕಿಗರ್ ಕಾರು ಪ್ರತಿಸ್ಪರ್ಧಿ ಕಾರುಗಳ ಬೆಲೆಗಿಂತಲೂ ಆಕರ್ಷಕವಾಗಿರಲಿದ್ದು, ಬಜೆಟ್ ಬೆಲೆಯ ಕಾರು ಮಾದರಿಯಾಗಿ ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸಲಿದೆ. ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಿರುವ ಕಿಗರ್ ಆವೃತ್ತಿಯು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತದೆ.

ಹೊಸ ಕಿಗರ್ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಸ್ಪಾಯ್ಲರ್, ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ಹಾಗೆಯೇ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ಜೊತೆಗೆ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್‌ನಲ್ಲಿ ಕಂಡುಬಂದ ರೆನಾಲ್ಟ್ ಕಿಗರ್

ರೆನಾಲ್ಟ್ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಮಾದರಿಯ ಜೋಡಣೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

Most Read Articles

Kannada
English summary
New Renault Kiger Spotted At Dealerships Ahead Of Its Launch. Read in Kannada.
Story first published: Wednesday, February 3, 2021, 20:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X