ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್

ಸ್ಕೋಡಾ ಇಂಡಿಯಾ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ತನ್ನ ಬಹುನೀರಿಕ್ಷಿತ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಕುಶಾಕ್ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಸದ್ಯ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿ ಮಾರಾಟ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ದತೆ ನಡೆಸಿದ್ದು, ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿಯ ಟೈಗನ್ ಕಾರು ಮಾದರಿಯೊಂದಿಗೂ ಹಲವು ತಾಂತ್ರಿಕ ಅಂಶಗಳನ್ನು ಎರವಲು ಪಡದುಕೊಳ್ಳಲಿದೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಆದರೆ ತಾಂತ್ರಿಕವಾಗಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಮಾದರಿಗಿಂತಲೂ ದುಬಾರಿ ಬೆಲೆ ಪಡೆದುಕೊಳ್ಳಲಿರುವ ಸ್ಕೋಡಾ ಕುಶಾಕ್ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍‍ಯುವಿಯ ಮಾದರಿಯನ್ನು ಆಧರಿಸಿ ಹೊಸ ಕಾರು ಅಭಿವೃದ್ದಿಗೊಂಡಿದೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಹೊಸ ಎಸ್‍‍ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಹೊಂದಿದ್ದು, ಡ್ಯುಯಲ್ ಹೆಡ್‍‍ಲ್ಯಾಂಪ್‍, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಕುಶಾಕ್ ಎಸ್‍‍ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್‍‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍‍‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, 360 ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೌಲಭ್ಯವಿದೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಎಂಜಿನ್ ಮಾದರಿಗೆ ಅನುಗುಣವಾಗಿ ಕಾರಿನ ತಾಂತ್ರಿಕ ಅಂಶಗಳನ್ನು ಹೊಂದಿರಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್‌ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಎಂಜಿನ್ ಮತ್ತು ಪರ್ಫಾಮೆನ್ಸ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ. 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್‌ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್‍‌ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್‌‌ಯುವಿ ಕಾರಿನಲ್ಲಿಯೇ ಪವರ್‍‌ಫುಲ್ ಕಾರು ಮಾದರಿಯಾಗಿರಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಈ ಕಂಪ್ಯಾಕ್ಟ್ ಎಸ್‌ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರೀಮಿಯಂ ಫೀಚರ್ಸ್‌ ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ ಕುಶಾಕ್

ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಫೆಬ್ರುವರಿ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಮಾದರಿಯು ಜಾಗತಿಕ ಮಾರುಕಟ್ಟೆಗಳಿಗಾಗಿ ಅನಾವರಣಗೊಳ್ಳಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Kushaq Is Likely To Get Number Of Features. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X