Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- News
ಸಮೀಕ್ಷೆ: ಅಸ್ಸಾಂನಲ್ಲಿ ಕಾಂಗ್ರೆಸ್ ಮಣಿಸಿ ಬಿಜೆಪಿ ಅಧಿಕಾರಕ್ಕೆ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಗಾಗಿ ಸಿದ್ದವಾದ ಸ್ಕೋಡಾ ಇಂಡಿಯಾ
ಸ್ಕೋಡಾ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ವಿಷನ್-ಇನ್ ಕಾನ್ಸೆಪ್ಟ್ ಮಾದರಿಯನ್ನು ಕುಶಾಕ್ ಹೆಸರಿನೊಂದಿಗೆ ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರಿನ ಟೀಸರ್ ಚಿತ್ರವನ್ನು ಮೊದಲ ಬಾರಿಗೆ ಅಧಿಕೃತ ವೆಬ್‌ತಾಣದಲ್ಲೂ ಪ್ರಕಟಿಸುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಬಿಡಗಡೆಯ ಸುಳಿವು ನೀಡಿದೆ.

ವಿಷನ್-ಇನ್ ಕಾನ್ಸೆಪ್ಟ್ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಇದೇ ತಿಂಗಳಾಂತ್ಯಕ್ಕೆ ಅನಾವರಣಗೊಳಿಸಲಿರುವ ಸ್ಕೋಡಾ ಕಂಪನಿಯು ಹೊಸ ಕಾರಿನ ಅಧಿಕೃತ ಹೆಸರನ್ನು ಅನಾವರಣಗೊಳಿಸಲಿದ್ದು, ಕಾರು ಅನಾವರಣಗೊಳಿಸಿದ ಮುಂದಿನ ಕೆಲವೇ ವಾರಗಳಲ್ಲಿ ಹೊಸ ಕಾರಿನ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಕುಶಾಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿರುವ ಹೊಸ ಕಾರು ಮಧ್ಯಮ ಕ್ರಮಾಂಕ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕಳೆದ ವರ್ಷದ ಮಧ್ಯಂತರದಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಆಟೋ ಉತ್ಪಾದನೆಯಲ್ಲಾದ ಕುಂಠಿತದಿಂದಾಗಿ ಹೊಸ ಕಾರಿನ ಬಿಡುಗಡೆ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ.

ಹೊಸ ಕುಶಾಕ್ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಇನ್ನು ಕೂಡಾ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿರುವ ಸ್ಕೋಡಾ ಕಂಪನಿಯು ಈ ತಿಂಗಳಾಂತ್ಯಕ್ಕೆ ಉತ್ಪಾದನಾ ಪ್ರಕ್ರಿಯೆ ಕೈಗೊಳ್ಳುವ ಸಾಧ್ಯತೆಗಳಿವೆ.

ಉತ್ಪಾದನಾ ಆವೃತ್ತಿಯ ಅನಾವರಣ ಸಂದರ್ಭದಲ್ಲೇ ಹೊಸ ಕಾರಿನ ಅಧಿಕೃತ ಹೆಸರು ಮತ್ತು ಎಂಜಿನ್ ಆಯ್ಕೆಯ ಮಾಹಿತಿ ಲಭ್ಯವಾಗಲಿದ್ದು, ಹೊಸ ವಿಷನ್-ಇನ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍ಯುವಿಯ ಮಾದರಿಯನ್ನು ಆಧರಿಸಿದ್ದು, ಹೊಸ ಎಸ್‍ಯುವಿಯು ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಿಸಲಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಎಸ್‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.

ಎಂಜಿನ್ ಸಾಮರ್ಥ್ಯ
ಹೊಸ ಕುಶಾಕ್ ಕಾರಿನಲ್ಲಿ ಸಾಮಾನ್ಯ ಮಾದರಿಯಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಎಂಜಿನ್ ಆಯ್ಕೆಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಲಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.
MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು

ಇದರೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳುವಬಹುದಾಗಿದ್ದು, ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದೆ.