ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಬಜೆಟ್ ಕಾರು ಮಾರಾಟದಲ್ಲಿ ಮೈಕ್ರೊ ಎಸ್‌ಯುವಿ ಕಾರು ಮಾದರಿಯು ಹೊಸ ನೀರಿಕ್ಷೆಯಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊನ್ನೆಯಷ್ಟೇ ನ್ಯೂ ಜನರೇಷನ್ ಸಫಾರಿ ಮಾದರಿಯೊಂದಿಗೆ ಪ್ರೀಮಿಯಂ ಎಸ್‌ಯುವಿ ವಿಭಾಗಕ್ಕೂ ಪ್ರವೇಶಿಸಿದ್ದು, ಸಫಾರಿ ನಂತರ ಮೈಕ್ರೊ ಎಸ್‍ಯುವಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಟಾಟಾ ಕಂಪನಿಯು ಹೊಸ ಯೋಜನೆಯೆಂತೆ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಎಸ್‌ಯುವಿ ಕಾರುಗಳ ಸರಣಿ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮೈಕ್ರೊ ಎಸ್‌ಯುವಿ ಮಾದರಿಯ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರು ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಹೊಸ ಕಾರು ಬಜೆಟ್ ಕಾರು ಮಾದರಿಯಲ್ಲಿರುವ ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10 ರಷ್ಟು ಪಾಲು ಹೊಂದುವ ಗುರಿಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ಸೌಲಭ್ಯ ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಅಧಿಕೃತ ಹೆಸರನ್ನು ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್‌ಯುವಿ ಕಾರು

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Article Published On: Tuesday, March 2, 2021, 11:30 [IST]
English summary
Tata HBX Micro SUV Launch Confirmed For This Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+