Just In
- 8 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 10 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 10 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 11 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬ್ರೆಜಿಲ್: ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 3462 ಮಂದಿ ಸಾವು!
- Lifestyle
ಗುರುವಾರದ ದಿನ ಭವಿಷ್ಯ: ಈ ದಿನ ಹೇಗಿದೆ ನಿಮ್ಮ ರಾಶಿಫಲ
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟಾಟಾ ಬಹುನೀರಿಕ್ಷಿತ ಮೈಕ್ರೊ ಎಸ್ಯುವಿ ಕಾರು
ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಬಜೆಟ್ ಕಾರು ಮಾರಾಟದಲ್ಲಿ ಮೈಕ್ರೊ ಎಸ್ಯುವಿ ಕಾರು ಮಾದರಿಯು ಹೊಸ ನೀರಿಕ್ಷೆಯಲ್ಲಿದೆ.

ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊನ್ನೆಯಷ್ಟೇ ನ್ಯೂ ಜನರೇಷನ್ ಸಫಾರಿ ಮಾದರಿಯೊಂದಿಗೆ ಪ್ರೀಮಿಯಂ ಎಸ್ಯುವಿ ವಿಭಾಗಕ್ಕೂ ಪ್ರವೇಶಿಸಿದ್ದು, ಸಫಾರಿ ನಂತರ ಮೈಕ್ರೊ ಎಸ್ಯುವಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಟಾಟಾ ಕಂಪನಿಯು ಹೊಸ ಯೋಜನೆಯೆಂತೆ ಹೆಚ್ಬಿಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಎಸ್ಯುವಿ ಕಾರುಗಳ ಸರಣಿ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮೈಕ್ರೊ ಎಸ್ಯುವಿ ಮಾದರಿಯ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರು ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಹೊಸ ಕಾರು ಬಜೆಟ್ ಕಾರು ಮಾದರಿಯಲ್ಲಿರುವ ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10 ರಷ್ಟು ಪಾಲು ಹೊಂದುವ ಗುರಿಹೊಂದಿದೆ.

ಎಂಟ್ರಿ ಲೆವಲ್ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ಸೌಲಭ್ಯ ಹೊಂದಿದೆ.

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಅಧಿಕೃತ ಹೆಸರನ್ನು ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್ಯುವಿ ಭರ್ಜರಿ ಪೈಪೋಟಿ ನೀಡಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್ಲ್ಯಾಂಪ್ ಸೆಟ್ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.