ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ವ್ಹೀಲ್ ಬೆಸ್ ಹೊಂದಿರಲಿದೆ ಹೊಸ Tata Punch
ಬಹುನೀರಿಕ್ಷಿತ ಟಾಟಾ ಪಂಚ್(Tata Punch) ಮೈಕ್ರೊ ಎಸ್‌ಯುವಿ ಮಾದರಿಯು ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯುವ ಸಿದ್ದತೆಯಲ್ಲಿದೆ.

ಎಂಟ್ರಿ ಲೆವಲ್ ಮೈಕ್ರೊ ಎಸ್‌ಯುವಿ ಕಾರುಗಳಲ್ಲೇ ವಿನೂತನ ಫೀಚರ್ಸ್‌ಗಳನ್ನು ಹೊಂದಿರುವ ಹೊಸ ಪಂಚ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದ್ದು, ಹೊಸ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಅತ್ಯುತ್ತಮ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

ಹೊಸ ಕಾರು ಮಾರುತಿ ಸುಜುಕಿ ಮತ್ತು ಹ್ಯುಂಡೈ ಐ10 ನಿಯೋಸ್ ಮಾದರಿಯಲ್ಲಿಯೇ ವ್ಹೀಲ್ ಬೆಸ್ ಹೊಂದಿದ್ದು, ಉತ್ತಮವಾದ ಕ್ಯಾಬಿನ್ ಸ್ಥಳಾವಕಾಶ ಹೊಂದಿದೆ. ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್ ಹೊಂದಿದೆ.

ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಪಂಚ್ ಕಾರು ಮಾರಾಟಗೊಳ್ಳಲಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಹೊಸ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಮಾದರಿಯಾಗಲಿದ್ದು, 12 ಮಾದರಿಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.29 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಇದರೊಂದಿಗೆ ಹೊಸ ಪಂಚ್ ಕಾರಿನ ಫೀಚರ್ಸ್‌ಗಳು, ಕಾರಿನ ಚಾಲನಾ ಶೈಲಿ ಮತ್ತು ವಿವಿಧ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯಲಿದ್ದು, ಮಾರುಕಟ್ಟೆಯಲ್ಲಿರುವ ಪ್ರಮುಖ ಎಂಟ್ರಿ ಲೆವಲ್ ಕಾರು ಮಾದರಿಗಳಿಗೆ ಟಾಟಾ ಪಂಚ್ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಕಾರನ್ನು ಅರಿಜೊನಾ ಬ್ಲ್ಯೂ, ಡೇ ಟೋನಾ ಗ್ರೆ, ಪ್ಯೂರ್ ಸಿಲ್ವರ್, ಬ್ರೊನ್ಜ್, ಆರೇಂಜ್, ವೈಟ್ ಮತ್ತು ಸ್ಟೋನ್‌ಹೆನ್ಸ್ ಸೇರಿ ಪ್ರಮುಖ ಆರು ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸಬಹುದಾಗಿದ್ದು, ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಮಾದರಿಯನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ.

ವಿವಿಧ ಟೀಸರ್‌ಗಳ ಮೂಲಕ ಹೊಸ ಕಾರಿನ ವಿನ್ಯಾಸವನ್ನು ಈಗಾಗಲೇ ಬಹಿರಂಗಪಡಿಸಿರುವ ಟಾಟಾ ಕಂಪನಿಯು ವಿವಿಧ ಬಣ್ಣಗಳ ಆಯ್ಕೆ ಮೂಲಕ ಗ್ರಾಹಕರನ್ನು ಸೆಳೆಯುವ ತವಕದಲ್ಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆಯೊಂದಿಗೆ ಎಂಟ್ರಿ ಲೆವಲ್ ಕಾರುಗಳ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲಿದೆ.

ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಹೊಸ ಕಾರಿನ ಬಗೆಗೆ ಸಾಕಷ್ಟು ಕುತೂಹಲ ಹುಟ್ಟುಹಾಕುತ್ತಿದೆ.

ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್ ಪಡೆದುಕೊಳ್ಳಲಿರುವ ಟಾಟಾ ಪಂಚ್ ಕಾರು ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿವೆ.

ಈ ಮೂಲಕ ಪಂಚ್ ಕಾರು ಮಾದರಿಯು ಮಾರುತಿ ಇಗ್ನಿಸ್, ಹ್ಯುಂಡೈ ಸ್ಯಾಂಟ್ರೊ ಜೊತೆಗೆ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್‌ಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದೆ.


Click it and Unblock the Notifications