ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಬಹುನೀರಿಕ್ಷಿತ ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಹೊಸ ಪಂಚ್(Punch) ಮೈಕ್ರೊ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು ಅಕ್ಟೋಬರ್ 4ರಂದು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಟಾಟಾ ಪಂಚ್ ಕಾರು ಮಾದರಿಯು ಅನಾವರಣಗೊಂಡ ನಂತರ ದಸರಾ ವೇಳೆಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಖರೀದಿಗೆ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಬುಕ್ಕಿಂಗ್ ದಾಖಲಾಗುತ್ತಿದೆ. ಹೊಸ ಕಾರಿನ ಫೀಚರ್ಸ್, ಕಾರಿನ ಚಾಲನಾ ಶೈಲಿ ಮತ್ತು ವಿವಿಧ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯುತ್ತಿದ್ದು, ಮಾರುಕಟ್ಟೆಯಲ್ಲಿರುವ ಪ್ರಮುಖ ಎಂಟ್ರಿ ಲೆವಲ್ ಕಾರುಗಳು ಟಾಟಾ ಪಂಚ್ ಮಾದರಿಯ ಜನಪ್ರಿಯತೆಗೆ ಮಾರಾಟದಲ್ಲಿ ಹಿನ್ನಡೆ ಅನುಭವಿಸಲಿವೆ ಎನ್ನಲಾಗಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಎಂಟ್ರಿ ಲೆವಲ್ ಕಾರುಗಳಲ್ಲೇ ವಿನೂತನ ಫೀಚರ್ಸ್ ಮತ್ತು ಎಂಜಿನ್ ಆಯ್ಕೆ ಹೊಂದಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನ ಎಂಜಿನ್ ಮಾಹಿತಿ ಹೊರತುಪಡಿಸಿ ಇನ್ನುಳಿದ ಬಹುತೇಕ ಫೀಚರ್ಸ್‌ಗಳನ್ನು ಬಹಿರಂಗಪಡಿಸಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಕಾರು ಅನಾವರಣದ ಸಂದರ್ಭದಲ್ಲೇ ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳಲಿರುವ ಟಾಟಾ ಮೋಟಾರ್ಸ್ ಕಂಪನಿಯು ಅಂದೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೂ ಚಾಲನೆ ನೀಡಲಿದ್ದು, ಅನಾವರಣಗೊಳಿಸಿದ ಕೆಲ ದಿನಗಳ ನಂತರ ಹೊಸ ಕಾರಿನ ಬೆಲೆ ಮಾಹಿತಿಯನ್ನು ಹಂಚಿಕೊಳ್ಳಲಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಹೊಸ ಕಾರಿನ ವಿವಿಧ ಟೀಸರ್‌ಗಳ ಮೂಲಕ ಕಾರಿನ ವಿನ್ಯಾಸವನ್ನು ಈಗಾಗಲೇ ಬಹಿರಂಗಪಡಿಸಿರುವ ಟಾಟಾ ಕಂಪನಿಯು ವಿವಿಧ ಬಣ್ಣಗಳ ಆಯ್ಕೆ ಮೂಲಕ ಗ್ರಾಹಕರನ್ನು ಸೆಳೆಯುವ ತವಕದಲ್ಲಿದ್ದು, ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಹೊಸ ಪಂಚ್ ಕಾರು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಹೊಸ ಕಾರು ಆಕರ್ಷಕ ವಿನ್ಯಾಸ, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ನಗರ ಪ್ರದೇಶದಲ್ಲಿನ ಸಂಚಾರಕ್ಕೆ ಅತ್ಯುತ್ತಮವಾಗಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಕಾರ್ಯಕ್ಷಮತೆಯೊಂದಿಗೆ ಎಂಟ್ರಿ ಲೆವಲ್ ಕಾರುಗಳ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯು ಎಂಟ್ರಿ ಲೆವಲ್ ಕಾರು ಮಾದರಿಯಲ್ಲೇ ಹಲವಾರು ಹೊಸ ಸುಧಾರಿತ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, ಹೊಸ ಕಾರಿನ ಕುರಿತು ಈಗಾಗಲೇ ಒಂದೊಂದೆ ಮಾಹಿತಿ ಹಂಚಿಕೊಳ್ಳುತ್ತಿರುವ ಕಂಪನಿಯು ಹೊಸ ಕಾರಿನ ಬಗೆಗೆ ಸಾಕಷ್ಟು ಕುತೂಹಲ ಹುಟ್ಟುಹಾಕುತ್ತಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್ ಪಡೆದುಕೊಳ್ಳಲಿರುವ ಟಾಟಾ ಪಂಚ್ ಕಾರು ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಪಂಚ್ ಕಾರಿನಲ್ಲಿ ವಿಭಜಿತವಾಗಿರುವ ಹೆಡ್‌ಲ್ಯಾಂಪ್ ಸೆಟ್ಅಪ್, ಹ್ಯುಮಿನಿಟಿ ಲೈನ್ ಗ್ರಿಲ್, ಬಂಪರ್‌ಗೆ ಹೊಂದಿಕೊಂಡಿರುವ ಬಾಡಿ ಕ್ಲಾಡಿಂಗ್, ವ್ಹೀಲ್ ಆರ್ಚ್, ಹೊರಭಾಗದಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ, 16-ಇಂಚಿನ ಅಲಾಯ್ ವ್ಹೀಲ್, ಕ್ರಿಸ್ ಲೈನ್ ಹೊಂದಿರುವ ಬ್ಯಾನೆಟ್, ರೂಫ್ ರೈಲ್ಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಹಾಗೆಯೇ ಹೊಸ ಕಾರಿನಲ್ಲಿ ಟಾಟಾ ಕಂಪನಿಯು ಡ್ಯುಯಲ್ ಟೋನ್ ಇಂಟಿರಿಯರ್ ಜೊತೆಗೆ 7.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕ್ವಾರಿಷ್ ಏರ್ ಕಾನ್ ವೆಂಟ್ಸ್, ತ್ರಿ ಸ್ಪೋಕ್ ಪ್ಲ್ಯಾಟ್ ಬಾಟಮ್ ಸ್ಟೀರಿಂಗ್ ವೀಲ್ಹ್, ಹ್ವಾಕ್ ಕಂಟ್ರೋಲ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಡಿಜಿಟಲ್ ಟಾಚೊ ಮೀಟರ್, ಅನಲಾಗ್ ಸ್ಪೀಡೋ ಮೀಟರ್ ಸೇರಿದಂತೆ ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರಿನಲ್ಲಿ ಎಬಿಎಸ್ ಜೊತೆ ಇಬಿಡಿ, ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಷರ್ ಮಾನಿಟಿಂಗ್ ಸಿಸ್ಟಂ, ಹೈ ಸ್ಪೀಡ್ ಅಲರ್ಟ್ ಸೌಲಭ್ಯಗಳಿಲಿವೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.2-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿವೆ.

ಅಕ್ಟೋಬರ್ 4ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ Tata Punch

ಈ ಮೂಲಕ ಪಂಚ್ ಕಾರು ಮಾರುತಿ ಇಗ್ನಿಸ್, ಹ್ಯುಂಡೈ ಸ್ಯಾಂಟ್ರೊ ಜೊತೆಗೆ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳ ಎಂಟ್ರಿ ಲೆವಲ್ ವೆರಿಯೆಂಟ್‌ಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

Most Read Articles

Kannada
English summary
All new tata punch micro suv revealed on october 4th in india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X