ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳಿಗಾಗಿ ಬುಕ್ಕಿಂಗ್ ಆರಂಭ

ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಇಂಧನಗಳ ಬೆಲೆ ಪರಿಣಾಮ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲಾಗುತ್ತಿದ್ದು, ಬಹುತೇಕ ವಾಹನ ಮಾರಾಟ ಕಂಪನಿಗಳು ಕೂಡಾ ಭವಿಷ್ಯದ ವಾಹನ ಮಾದರಿಗಳ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿವೆ.

ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳಿಗಾಗಿ ಬುಕ್ಕಿಂಗ್ ಆರಂಭ

ಹೊಸ ಕಾರುಗಳ ಮಾರಾಟದಲ್ಲಿ ಈಗಾಗಲೇ ಹಲವಾರು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ಸಹ ತನ್ನ ಪ್ರಮುಖ ಕಾರುಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಗಮನಸೆಳೆಯುತ್ತಿದೆ.

ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳಿಗಾಗಿ ಬುಕ್ಕಿಂಗ್ ಆರಂಭ

ಪ್ರಮುಖ ಕಾರುಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಆವೃತ್ತಿಯನ್ನು ಮಾರಾಟ ಮಾಡುತ್ತಿರುವ ಟಾಟಾ ಕಂಪನಿಯು ಮೊದಲ ಬಾರಿಗೆ ಟಿಗೋರ್ ಮತ್ತು ಟಿಯಾಗೋ ಮಾದರಿಗಳಲ್ಲಿ ಸಿಎನ್‌ಜಿ(CNG) ಆವೃತ್ತಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳಿಗಾಗಿ ಬುಕ್ಕಿಂಗ್ ಆರಂಭ

ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‍ಜಿ) ತಂತ್ರಜ್ಞಾನವನ್ನು ಅಳವಡಿಸಿ ಈಗಾಗಲೇ ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಅಳವಡಿಸಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಸಿಎನ್‌ಜಿ ಆವೃತ್ತಿಗಳು ಅತಿ ಕಡಿಮೆ ಮಾಲಿನ್ಯ ಉತ್ಪತ್ತಿಯೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸುತ್ತವೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಸಿಎನ್‍ಜಿ ತಂತ್ರಜ್ಞಾನ ಪ್ರೇರಿತ ವಾಹನ ಮಾರಾಟದಲ್ಲಿ ಈಗಾಗಲೇ ಮಾರುತಿ ಸುಜುಕಿ ಕಂಪನಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ವಾಹನಗಳಿಗೆ ಪೂರಕವಾಗಿ ಸಿಎನ್‌ಜಿ ಪೂರೈಕೆಯ ಕೇಂದ್ರಗಳನ್ನು ಸಹ ಹೆಚ್ಚಿಸುತ್ತಿರುವುದು ಹೊಸ ಮಾದರಿಗಳತ್ತ ಗ್ರಾಹಕರು ಗಮನಹರಿಸುತ್ತಿದ್ದಾರೆ.

ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳಿಗಾಗಿ ಬುಕ್ಕಿಂಗ್ ಆರಂಭ

ಈ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಟಿಯಾಗೋ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಟಿಗೋರ್ ಆವೃತ್ತಿಗಳಲ್ಲಿ ಸಿಎನ್‌ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಶೀಘ್ರದಲ್ಲೇ ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಹೊಸ ಸಿಎನ್‌ಜಿ ಟಿಯಾಗೋ ಮತ್ತು ಟಿಗೋರ್ ಕಾರುಗಳು ಮುಂಬರುವ ಡಿಸೆಂಬರ್ ಹೊತ್ತಿಗೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರಿಗಾಗಿ ಈಗಾಗಲೇ ಪ್ರಮುಖ ಟಾಟಾ ಡೀಲರ್ಸ್‌ಗಳು ಬುಕ್ಕಿಂಗ್ ಆರಂಭಿಸಿದ್ದಾರೆ.

ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳಿಗಾಗಿ ಬುಕ್ಕಿಂಗ್ ಆರಂಭ

ಸಿಎನ್‌ಜಿ ಮಾದರಿಗಳಿಗಾಗಿ ಕಂಪನಿಯು ಇನ್ನು ಅಧಿಕೃತ ಬುಕ್ಕಿಂಗ್ ಆರಂಭ ಮಾಡಿಲ್ಲವಾದರೂ ಆಸಕ್ತ ಗ್ರಾಹಕರು ಹೊಸ ಕಾರು ಶೀಘ್ರದಲ್ಲೇ ಬಿಡುಗಡೆಯಾಗಬಹುದೆಂಬ ನೀರಿಕ್ಷೆಯೊಂದಿಗೆ ಬುಕ್ಕಿಂಗ್ ಸಲ್ಲಿಕೆ ಮಾಡುತ್ತಿದ್ದು, ಹೊಸ ಆವೃತ್ತಿಗಳು ಪೆಟ್ರೋಲ್ ಮಾದರಿಗಿಂತಲೂ ರೂ. 1 ಲಕ್ಷದಷ್ಟು ದುಬಾರಿಯಾಗಿರಲಿವೆ ಎನ್ನಬಹುದು.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಟಿಯಾಗೋ ಮತ್ತು ಟಿಗೋರ್ ಕಾರುಗಳ ಟಾಪ್ ಎಂಡ್ ಮಾದರಿಗಳಲ್ಲಿ ಹೊಸ ಸಿಎನ್‌ಜಿ ಮಾದರಿಯನ್ನು ಅಳವಡಿಸಬಹುದಾಗಿದ್ದು, ಹೊಸ ಆವೃತ್ತಿಗಳು ಉತ್ತಮ ಮೈಲೇಜ್ ಜೊತೆಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿವೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಬಿಎಸ್ 6 ಜಾರಿ ನಂತರ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಡೀಸೆಲ್ ಎಂಜಿನ್ ಸ್ಥಗಿತದ ನಂತರ ಪೆಟ್ರೋಲ್ ಮಾದರಿಗಳನ್ನು ಸಹ ಮುಂಬರುವ ಕೆಲವೇ ವರ್ಷಗಳಲ್ಲಿ ಹಂತ-ಹಂತವಾಗಿ ಸ್ಥಗಿತಗೊಳಿಸುವ ನಿರ್ಧರಿಸಿರುವ ಕಾರು ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ನೈಸರ್ಗಿಕ ಅನಿಲಗಳಿಂದ ಚಾಲನೆ ಮಾಡಬಹುದಾದ ವಿವಿಧ ತಂತ್ರಜ್ಞಾನ ಪ್ರೇರಣೆಯ ವಾಹನಗಳನ್ನು ಬಿಡುಗಡೆ ಮಾಡುವ ಇರಾದೆಯಲ್ಲಿವೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಇನ್ನು ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಟಾಟಾ ಮೋಟಾರ್ಸ್ ಕಂಪನಿಯು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೊಸದಾಗಿ ಪರಿಚಯಿಸಲಿರುವ ಸಿಎನ್‌ಜಿ ಆಯ್ಕೆಯು ಹೊಸ ಕಾರಿನ ಮಾರಾಟವನ್ನು ಹೆಚ್ಚಿಸಲಿದೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಸಿಎನ್‌ಜಿ ಆವೃತ್ತಿಯನ್ನು ಟಿಗೋರ್ ಮತ್ತು ಟಿಯಾಗೋ ಕಾರಿನ ಮಧ್ಯಮ ಕ್ರಮಾಂಕದ ಮಾದರಿಗಳಲ್ಲಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಕಾರು ಮಾದರಿಗಳು ಸ್ಟ್ಯಾಂಡರ್ಡ್ ಮಾದರಿಗಿಂತ ತುಸು ದುಬಾರಿಯಾದರೂ ಉತ್ತಮ ಇಂಧನ ದಕ್ಷತೆಯೊಂದಿಗೆ ನಿರ್ವಹಣಾ ವೆಚ್ಚವನ್ನು ತಗ್ಗಿಸಲಿವೆ.

ಟಾಟಾ ಮೋಟಾರ್ಸ್ ಪ್ರಮುಖ ಡೀಲರ್ಸ್‌ ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಬುಕ್ಕಿಂಗ್ ಆರಂಭ

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.04 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.64 ಲಕ್ಷದಿಂದ ರೂ. 7.81 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರುಗಳು ಸಿಎನ್‌ಜಿ ಕಿಟ್ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಲ್ಲಿಯೇ ಬಹುತೇಕ ತಾಂತ್ರಿಕ ಅಂಶಗಳನ್ನು ಹೊಂದಿರಲಿದ್ದು, ಮಾಲಿನ್ಯ ತಗ್ಗಿಸುವುವಲ್ಲಿ ಸಿಎನ್‌ಜಿ ಕಾರುಗಳು ಪ್ರಮುಖ ಪಾತ್ರವಹಿಸಲಿವೆ.

Article Published On: Friday, October 22, 2021, 12:29 [IST]
English summary
All new tata tiago cng unofficial bookings opened details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+