Just In
Don't Miss!
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live ಸ್ಕೋರ್, ಪ್ಲೇಯಿಂಗ್ XI
- News
ಮಗಳ ಶಿರಚ್ಛೇದ ಮಾಡಿ, ರುಂಡದೊಂದಿಗೆ ಪೊಲೀಸರಿಗೆ ಶರಣಾದ ತಂದೆ
- Finance
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 8.5 ರೂ. ಕಡಿತಗೊಳಿಸಬಹುದು!
- Movies
ಮೊದಲ ವಾರವೇ ಹೊರಹೋಗ್ತಾರಾ ಶುಭಾ ಪೂಂಜಾ: ನಾಮಿನೇಟ್ ಆಗಿದ್ದು ಹೇಗೆ?
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅನಾವಾರಣವಾಗಲಿದೆ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿ
ಟೊಯೊಟಾ ಕಂಪನಿಯು ತನ್ನ ಹೊಸ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ತಲೆಮಾರಿನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಪ್ರಮುಖ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಿದೆ.

ಟೊಯೊಟಾದ ಜಾಗತಿಕವಾಗಿ ಜನಪ್ರಿಯವಾಗಿರುವ ಲ್ಯಾಂಡ್ ಕ್ರೂಸರ್ ತನ್ನ 70ನೇ ವಾರ್ಷಿಕೋತ್ಸವವನ್ನು ಇದೇ ವರ್ಷದ ಆಗಸ್ಟ್ 1 ರಂದು ಆಚರಿಸಲಿದೆ. ಇದೇ ದಿನ ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಬಹುದು. ಬಹುದೀರ್ಘ ಕಾಲದಿಂದಲೂ ಟೊಯೊಟಾ ಲ್ಯಾಂಡ್ ಕ್ರೂಸರ್ ಜನಪ್ರಿಯ ಎಸ್‍ಯುವಿಯಾಗಿದೆ. ಇನ್ನು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಟೊಯೊಟಾ ತನ್ನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಬಿಡುಗಡೆಗೊಳಿಸಿತ್ತು.

ಕಳೆದ ಕೆಲವು ವರ್ಷಗಳಿಗಿಂದ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿದೆ. ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿಯಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಹಿಂದಿನ ಮಾದರಿ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ 4.5-ಲೀಟರ್ ವಿ8 ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.5-ಲೀಟರ್ ಟರ್ಬೋಚಾರ್ಜ್ಡ್ ವಿ6 ಪೆಟ್ರೋಲ್ ಎಂಜಿನ್ ಮತ್ತು ಅದರ ಹೈಬ್ರಿಡ್ ರೂಪಾಂತರವನ್ನು ಆಯ್ದ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಬಹುದು.

ಇನ್ನು ಇದರೊಂದಿಗೆ 3.3-ಲೀಟರ್ ಆರು-ಪಾಟ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಲ್ಯಾಡರ್ ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಅನ್ನು ಕಂಪನಿಯ ಟಿಎನ್‌ಜಿಎ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಹೊಂದಿರುತ್ತದೆ. ಹೊಸ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯ ತೂಕದಲ್ಲಿ ಗಮನಾರ್ಹವಾಗಿ ಇಳಿಕೆಯಾಗಬಹುದು. ಇನ್ನು ಪವರ್ ಮತ್ತು ಟಾರ್ಕ್ ಅಂಕಿ ಅಂಶದಲ್ಲಿ ಕೂಡ ಇಳಿಕೆಯಾಗುವ ಸಾಧ್ಯತೆಗಳಿದೆ.

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಹೊಸ ವಿನ್ಯಾಸವನ್ನು ಹೊಂದಿರುತ್ತದೆ. ಈ ಎಸ್‍ಯುವಿಯಲ್ಲಿ ಹೊಸ ಟ್ರೆಪೆಜಾಯಿಡಲ್ ಗ್ರಿಲ್ ಅನ್ನು ಅಳವಡಿಸಬಹುದು. ಇನ್ನು ಇಂಟಿರಿಯರ್ ನಲ್ಲಿ ಹೊಸ ಫೀಚರ್ಸ್‍ಗಳನ್ನು ಒಳಗೊಂಡಿರುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೆಚ್ಚು ಐಷಾರಾಮಿಯಾಗಿರಲಿದೆ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ. ಹಿಂದಿನ ತಲೆಮಾರಿಯಂತೆ ಹೊಸ ತಲೆಮಾರಿನ ಟೊಯೊಟಾ ಲ್ಯಾಂಡ್ ಕ್ರೂಸರ್ ಹಿಂದಿನ ಮಾದರಿಯಂತೆ ಅಸಾಧಾರಣ ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿರಬಹುದು.

ಅನೇಕ ಮಾರುಕಟ್ಟೆಗಳಲ್ಲಿ, ಲ್ಯಾಂಡ್ ಕ್ರೂಸರ್ 200 ಎಸ್‍ಯುವಿಯನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಮಾದರಿಯನ್ನು ಬದಲಾಯಿಸಿ ಹೆಚ್ಚು ಐಷಾರಾಮಿ ಫೀಚರ್ ಗಳೊಂದಿಗೆ ಲ್ಯಾಂಡ್ ಕ್ರೂಸರ್ 300 ಎಸ್‍ಯುವಿಯನ್ನು ಬಿಡುಗಡೆಗೊಳಿಸಲಾಗುತ್ತದೆ ಎಂದು ನಿರೀಕ್ಷಿಸುತ್ತೇವೆ.