ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಸಹ ಆರಂಭಗೊಂಡಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಚ್ಚ ಹೊಸ ಟೈಗನ್ ಕಾರು ಖರೀದಿಗಾಗಿ ಫೋಕ್ಸ್‌ವ್ಯಾಗನ್ ಕಂಪನಿಯು ರೂ.25 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಕಾರನ್ನು ಮುಂದಿನ ತಿಂಗಳು ಸೆಪ್ಟೆಂಬರ್ ಮೂರನೇ ವಾರದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ಫೀಚರ್ಸ್ ಒಳಗೊಂಡಿದ್ದು, ಬೆಲೆಯಲ್ಲಿ ಪ್ರತಿಸ್ಪರ್ಧಿ ಮಾದರಿಗಳಿಂತಲೂ ತುಸು ದುಬಾರಿ ಎನ್ನಿಸಲಿದ್ದರೂ ಬಲಿಷ್ಠ ಎಂಜಿನ್ ಆಯ್ಕ ಮತ್ತು ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರನ್ನು ಸೆಳೆಯಲಿವೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಹೊಸ ಕಾರುಗಳ ಉತ್ಪದನೆಗಾಗಿ ಸ್ಕೋಡಾ ಜೊತೆಗೂಡಿ ಇಂಡಿಯಾ 2.0 ಯೋಜನೆ ಆರಂಭಿಸಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಕೆಲವು ಕಾರು ಮಾದರಿಗಳನ್ನು ನೇರವಾಗಿ ವಿದೇಶಿ ಮಾರುಕಟ್ಟೆಯಿಂದ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡಲಿದ್ದರೆ ಇನ್ನು ಕೆಲವು ಮಾದರಿಗಳನ್ನು ಭಾರತದಲ್ಲೇ ಪೂರ್ಣಪ್ರಮಾಣದಲ್ಲಿ ನಿರ್ಮಾಣ ಮಾಡಲು ನಿರ್ಧರಿಸಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇದಕ್ಕಾಗಿಯೇ ಸ್ಕೋಡಾ ಜೊತೆಗೂಡಿ ಹೊಸ ಕಾರುಗಳಿಗಾಗಿಯೇ ಪ್ರತ್ಯೇಕ ಉತ್ಪಾದನಾ ಪ್ಲ್ಯಾಟ್‌ಫಾರ್ಮ ತೆರೆದಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಸ್ಕೋಡಾ ಬ್ರಾಂಡ್ ಅಡಿಯಲ್ಲಿ ಕುಶಾಕ್ ಮಾದರಿಯನ್ನು ಮತ್ತು ಫೋಕ್ಸ್‌ವ್ಯಾಗನ್ ಬ್ರಾಂಡ್ ಅಡಿಯಲ್ಲಿ ಟೈಗನ್ ಮಾರಾಟ ಮಾಡಲು ನಿರ್ಧರಿಸಿವೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಫೋಕ್ಸ್‌ವ್ಯಾಗನ್ ಕಂಪನಿಯ ಎಂಕ್ಯೂಬಿ ಎ0-ಇನ್ ಪ್ಲ್ಯಾಟ್‌ಫಾರ್ಮ್ ಮೇಲೆ ನಿರ್ಮಾಣಗೊಂಡಿರುವ ಸ್ಕೋಡಾ ಕುಶಾಕ್ ಈಗಾಗಲೇ ಮಾರಾಟಗೊಳ್ಳುತ್ತಿದ್ದು, ಮಾರುಕಟ್ಟೆಯ ತಂತ್ರದ ಪರಿಣಾಮ ಟೈಗನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಇದೀಗ ಬಿಡುಗಡೆ ಮಾಡುತ್ತಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಒಂದೇ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ಕುಶಾಕ್ ಮತ್ತು ಟೈಗನ್ ಕಾರುಗಳು ಬ್ರಾಂಡ್ ಬ್ಯಾಡ್ಜ್ ಮತ್ತು ಕಾರಿನ ವಿನ್ಯಾಸಗಳು ಹೊರತುಪಡಿಸಿ ತಾಂತ್ರಿಕ ವೈಶಿಷ್ಟ್ಯತೆ, ಎಂಜಿನ್ ಆಯ್ಕೆಯು ಒಂದೇ ಮಾದರಿಯಾಗಿದ್ದು, ಬೆಲೆಯು ಕೂಡಾ ಕುಶಾಕ್ ಕಾರಿಗಿಂತಲೂ ತುಸು ಹೆಚ್ಚುಕಡಿಮೆ ಇರಬಹುದಾಗಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಸ್ಕೋಡಾ ಕುಶಾಕ್ ಕಾರು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಹೊಂದಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಕೂಡಾ ಕುಶಾಕ್ ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಟೈಗನ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಸ್ಟ್ಯಾಂಡರ್ಡ್ ಮತ್ತು ಜಿಟಿ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಟೈಗನ್ ಕಾರು ಪ್ರಮುಖ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದ್ದು, ಆರಂಭಿಕ ಮಾದರಿಗಳಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ ಟರ್ಬೊದಲ್ಲಿ ಬಳಕೆ ಮಾಡಲಾಗಿರುವ 113-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ನೀಡಲಾಗಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್‌ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರಲಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತದಲ್ಲಿ ಮೊದಲ ಬಾರಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆ ಪ್ರವೇಶಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಟೈಗನ್ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್‍ಇಡಿ ಮ್ಯಾಟ್ರಿಕ್ಸ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌‌, ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್‌ಪಿಟ್‌ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್‌ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳು ಟೈಗನ್ ಕಾರಿನಲ್ಲಿವೆ. 6 ಏರ್‌ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.

Most Read Articles

Kannada
English summary
All new volkswagen taigun compact suv official india launch timeline
Story first published: Friday, August 13, 2021, 0:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X