ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಯಲ್ಲಿದ್ದು ಹೊಸ ಟೈಗನ್ ಕಾರು ಭಾರತದಲ್ಲಿ ಮಾತ್ರ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯ ಸಿದ್ದತೆಯಲ್ಲಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಟೈಗನ್ ಕಾರು ಮಾದರಿ ಉತ್ಪಾದನಾ ಮಾದರಿಯನ್ನು ಈಗಾಗಲೇ ಅನಾವರಣಗೊಳಿಸಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತದಿಂದಲೇ ಹೊಸ ಕಾರನ್ನು ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಮಾಡುವ ಯೋಜನೆಯಲ್ಲಿದೆ. ಇದಕ್ಕೆ ಪೂರಕವಾಗಿ ಫೋಕ್ಸ್‌ವ್ಯಾಗನ್ ಕಂಪನಿಯು ಪುಣೆ ಹೊರವಲಯದಲ್ಲಿ ಲೆಫ್ಟ್ ಹ್ಯಾಂಡ್ ಡ್ರೈವ್ ಸೌಲಭ್ಯ ಹೊಂದಿರುವ ಟೈಗನ್ ಕಾರು ಮಾದರಿಯನ್ನು ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಕಂಡುಬಂದಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ವಿದೇಶಿ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿರುವ ಟೈಗನ್ ಮಾದರಿಯು ಭಾರತದಲ್ಲಿ ಬಿಡುಗಡೆಯಾಗುವ ಮಾದರಿಯಲ್ಲೇ ವಿನ್ಯಾಸ ಮತ್ತು ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಲೆಫ್ಟ್ ಹ್ಯಾಂಡ್‌ಗಳನ್ನು ಮಧ್ಯ ಪ್ರಾಚ್ಯ ಮತ್ತು ಲ್ಯಾಟಿನ್ ಅಮೆರಿಕಾ ರಾಷ್ಟ್ರಗಳಿಗಾಗಿ ಅಭಿವೃದ್ದಿಪಡಿಸಿರಬಹುದು ಎನ್ನಲಾಗಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಟೈಗನ್ ಕಾರು ಎಲ್‍ಇಡಿ ಪೊಜೆಕ್ಟರ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಮತ್ತು ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಪಡೆದುಕೊಂಡಿದೆ. ಸ್ಪೋರ್ಟಿ ವಿನ್ಯಾಸಕ್ಕೆ ಪೂರಕವಾಗಿ ಬೂಟ್ ಲಿಡ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಬ್ಲ್ಯಾಕ್ ಔಟ್ ರೂಫ್, ಹಿಂಬದಿಯಲ್ಲಿ ಕ್ರೊಮ್ ಆಕ್ಸೆಂಟ್ ನೀಡಲಾಗಿದ್ದು, ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಉತ್ಪಾದನೆಗೊಳಿಸಲಾಗಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಆಕರ್ಷಕವಾಗಿರುವ ಹೊಸ ಕಾರಿನ ಇಂಟಿರಿಯರ್ ಕೂಡಾ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದ್ದು, ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಪಡೆದುಕೊಂಡಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಹಾಗೆಯೇ ವೆಂಟಿಲೆಟೆಡ್ ಸೀಟ್, ಎಲೆಕ್ಟ್ರಿಕ್ ಸನ್‌ರೂಫ್, ಬಾಡಿ ಕ್ಲಾಡಿಂಗ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಚಾರ್ಜರ್ ಹೊಂದಿದ್ದು, ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿಯೊಂದಿಗೆ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್(ಹೈಎಂಡ್ ಮಾದರಿಯಲ್ಲಿ), 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಇನ್ನು ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಟೈಗನ್ ಎಸ್‍‍ಯುವಿಗಳಿಗಿಂತಲೂ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರು ಹೆಚ್ಚಿನ ಮಟ್ಟದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍‍ಬೇಸ್ ಅನ್ನು ಹೊಂದಿರಲಿದೆ.

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಹೊಸ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು ಹೊಸದಾಗಿ ಅಭಿವೃದ್ದಿಪಡಿಸಲಾಗಿರುವ 148-ಬಿಎಚ್‌ಪಿ ಸಾಮರ್ಥ್ಯದ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲಿ ಜೋಡಿಸಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಿಂದಲೇ ರಫ್ತುಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್ ಕಂಪ್ಯಾಕ್ಟ್ ಎಸ್‍‌ಯುವಿ

ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಬೆಲೆಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ .14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Volkswagen Taigun Left-Hand Drive Model Spotted Testing In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X