ಟೈಗನ್ ಕಾರು ಅನಾವರಣವನ್ನು ತಿಂಗಳಾಂತ್ಯಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಇಂದು ಅನಾವರಣಗೊಳ್ಳಬೇಕಿದ್ದ ಹೊಚ್ಚ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ಮುಂದೂಡಿಕೆ ಮಾಡಿದ್ದು, ಹೊಸ ಕಾರು ಅನಾವರಣಗೊಂಡ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಕಾರು ಅಭಿವೃದ್ದಿ ಯೋಜನೆ ಅಡಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇವುಗಳಲ್ಲಿ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕೂಡಾ ಒಂದಾಗಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಟೈಗನ್ ಎಸ್‍‍ಯುವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಬೆಲೆಯು ಕೂಡಾ ಸ್ಪರ್ಧಾತ್ಮಕವಾಗಲಿದೆ.

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಸದ್ಯ ಕಾನ್ಸೆಪ್ಟ್ ಮಾದರಿಯೊಂದಿಗೆ ಅನಾವರಣಗೊಂಡಿರುವ ಟೈಗನ್ ಎಸ್‍‍ಯುವಿಯನ್ನು ಕಾನ್ಸೆಪ್ಟ್ ಆವೃತ್ತಿ ಎಂದು ಹೇಳಲಾಗಿದ್ದು, ಈ ಎಸ್‍‍ಯುವಿ ಕಾರು ಉತ್ಪಾದನಾ ಆವೃತ್ತಿಯಲ್ಲಿ ಇನ್ನು ಹಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ.

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಮಾದರಿಯು ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍‍ಯುವಿಗಳಿಗಿಂತಲೂ ಹೆಚ್ಚಿನ ಪ್ರಮಾಣದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍‍ಬೇಸ್ ಅನ್ನು ಹೊಂದಿರಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಎಲ್‍ಇಡಿ ಟೈಲ್ ಲೈಟ್ ಹಾಗೂ ಎಲ್‍ಇ‍‍ಡಿ ಲೈಟ್ ಬಾರ್‌ಗಳನ್ನು ಹೊಂದುವ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿದೆ.

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಹಾಗೆಯೇ ಆಕರ್ಷಕವಾಗಿರುವ ಈ ಕಾರಿನ ಇಂಟಿರಿಯರ್ ಕೂಡಾ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಎಂಜಿನ್ ಸಾಮರ್ಥ್ಯ

ಹೊಸ ಟೈಗನ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದ್ದು, ನಗರ ಪ್ರದೇಶದಲ್ಲಿನ ಓಡಾಟಕ್ಕೆ ಅನುಕೂಲಕರವಾಗುವಂತೆ ಎಂಜಿನ್ ಆಯ್ಕೆ ನೀಡುತ್ತಿದೆ. ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲೂ ಜೋಡಿಸಲಾಗುತ್ತಿದೆ.

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಈ ಮೂಲಕ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಸುರಕ್ಷತೆ ನೀಡಲಾಗಿದ್ದು, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಸನ್‌ರೂಫ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಟೈಗನ್ ಕಾರು ಅನಾವರಣವನ್ನು ಮಾರ್ಚ್ 31ಕ್ಕೆ ಮುಂದೂಡಿದ ಫೋಕ್ಸ್‌ವ್ಯಾಗನ್

ಈ ತಿಂಗಳು ಕೊನೆಯಲ್ಲಿ ಅನಾವರಣಗೊಳ್ಳಲಿರುವ ಟೈಗನ್ ಉತ್ಪಾದನಾ ಮಾದರಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆಯಾಗಲಿದ್ದು, ಫೋಕ್ಸ್‌ವ್ಯಾಗನ್ ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.

Most Read Articles

Kannada
English summary
Volkswagen new Taigun SUV to Be unveiled on March 31. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X