Just In
- 52 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 3 hrs ago
ಎಕ್ಸ್‌ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್‌ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಮಂಗಳೂರು; ಇಂದಿನಿಂದ ರಂಝಾನ್ ಉಪವಾಸ ಆಚರಣೆ
- Sports
19 ವರ್ಷದ ಈ ಬ್ಯಾಟ್ಸ್ಮನ್ ಬಾರಿಸಿರೋ 8 ಐಪಿಎಲ್ ಸಿಕ್ಸರ್ ಸಾಮಾನ್ಯದ್ದಲ್ಲ!
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇದೇ ತಿಂಗಳು 24ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ ಟೈಗನ್
ದೇಶಿಯ ಮಾರುಕಟ್ಟೆಯಲ್ಲಿ ಕಾರು ಮಾರಾಟ ಭಾರೀ ಬದಲಾವಣೆ ಪರಿಚಯಿಸುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಟಿ-ರಾಕ್ ನಂತರ ಟೈಗನ್ ಕಾರು ಬಿಡುಗಡೆಗೆ ಸಿದ್ದತೆ ನಡೆಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಕಾರು ಅಭಿವೃದ್ದಿ ಯೋಜನೆ ಅಡಿ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇವುಗಳಲ್ಲಿ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕೂಡಾ ಒಂದಾಗಿದ್ದು, ಕಂಪನಿಯು ಈ ತಿಂಗಳು 24ರಂದು ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಲಿದೆ.

ಹೊಸ ಟೈಗನ್ ಎಸ್‍ಯುವಿ ಕಾರು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಸದ್ಯ ಕಾನ್ಸೆಪ್ಟ್ ಮಾದರಿಯೊಂದಿಗೆ ಅನಾವರಣಗೊಂಡಿರುವ ಟೈಗನ್ ಎಸ್‍ಯುವಿಯನ್ನು ಕಾನ್ಸೆಪ್ಟ್ ಆವೃತ್ತಿ ಎಂದು ಹೇಳಲಾಗಿದ್ದು, ಈ ಎಸ್‍ಯುವಿ ಕಾರು ಉತ್ಪಾದನಾ ಆವೃತ್ತಿಯಲ್ಲಿ ಇನ್ನು ಹಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ.

ಟೈಗನ್ ಕಂಪ್ಯಾಕ್ಟ್ ಎಸ್‍ಯುವಿ ಮಾದರಿಯು ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍ಯುವಿಗಳಿಗಿಂತಲೂ ಹೆಚ್ಚಿನ ಪ್ರಮಾಣದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍ಬೇಸ್ ಅನ್ನು ಹೊಂದಿರಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಎಲ್‍ಇಡಿ ಟೈಲ್ ಲೈಟ್ ಹಾಗೂ ಎಲ್‍ಇಡಿ ಲೈಟ್ ಬಾರ್‌ಗಳನ್ನು ಹೊಂದುವ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿದೆ.

ಹಾಗೆಯೇ ಆಕರ್ಷಕವಾಗಿರುವ ಈ ಕಾರಿನ ಇಂಟಿರಿಯರ್ ಕೂಡಾ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ ಟಚ್ ಸ್ಕ್ರೀನ್ ಇನ್ಫೋಟೆನ್‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍ಗಳನ್ನು ಹೊಂದಿದೆ.

ಎಂಜಿನ್ ಸಾಮರ್ಥ್ಯ
ಹೊಸ ಟೈಗನ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದ್ದು, ನಗರ ಪ್ರದೇಶದಲ್ಲಿನ ಓಡಾಟಕ್ಕೆ ಅನುಕೂಲಕರವಾಗುವಂತೆ ಎಂಜಿನ್ ಆಯ್ಕೆ ನೀಡುತ್ತಿದೆ. ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲೂ ಜೋಡಿಸಲಾಗುತ್ತಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಈ ಮೂಲಕ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಸುರಕ್ಷತೆ ನೀಡಲಾಗಿದ್ದು, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಸನ್‌ರೂಫ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

ಈ ತಿಂಗಳು ಕೊನೆಯಲ್ಲಿ ಅನಾವರಣಗೊಳ್ಳಲಿರುವ ಟೈಗನ್ ಉತ್ಪಾದನಾ ಮಾದರಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆಯಾಗಲಿದ್ದು, ಫೋಕ್ಸ್‌ವ್ಯಾಗನ್ ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇನ್ನು ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಎಂಕ್ಯೂಬಿ-ಎ 0-ಇನ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ್ದು, ಹೊಸ ಅತ್ಯಾಧುನಿಕ ಸುರಕ್ಷತಾ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.