ಸೆಪ್ಟೆಂಬರ್ 24ರಂದು ಬಿಡುಗಡೆಯಾಗಲಿದೆ ಬಹುನೀರಿಕ್ಷಿತ Volkswagen Taigun ಕಂಪ್ಯಾಕ್ಟ್ ಎಸ್‌ಯುವಿ

Volkswagen India ಕಂಪನಿಯು ತನ್ನ ಹೊಚ್ಚ ಹೊಸ Taigun ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ 24ರಂದು ಅಧಿಕೃತವಾಗಿ ಬಿಡುಗಡೆಗೊಳ್ಳಲಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆಯಾಗಲಿದೆ ಟೈಗನ್

ಭಾರತೀಯ ಆಟೋ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ಕಾರು ಕಂಪನಿಗಳು ತಮ್ಮ ಹೊಸ ಮಾದರಿಯ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, Volkswagen India ಕಂಪನಿಯು ಸಹ ತನ್ನ ಸಹಭಾಗಿತ್ವ ಸಂಸ್ಥೆಯಾದ Skoda ಕಂಪನಿ ಜೊತೆಗೂಡಿ ಹೊಸ ಪ್ಲ್ಯಾಟ್‌ಫಾರ್ಮ್ ಆಧರಿಸಿರುವ Taigun ಕಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡುತ್ತಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಹೊಸ Taigun ಕಾರು ಮಾದರಿಯನ್ನು Volkswagen ಕಂಪನಿಯು ಈಗಾಗಲೇ ಭಾರತದಲ್ಲಿ ಅನಾವರಣಗೊಳಿಸಿ ಬುಕ್ಕಿಂಗ್ ಸ್ವಿಕರಿಸುತ್ತಿದ್ದು, ಹೊಸ ಕಾರನ್ನು ಭಾರತದಲ್ಲೇ ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಸ್ಥಳೀಯವಾಗಿ ಉತ್ಪಾದನೆಯಾಗಿರುವ ಬಿಡಿಭಾಗಗಳ ಬಳಕೆಗೆ ಆದ್ಯತೆ ನೀಡಲಾಗಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಹೊಸ ಕಾರುಗಳ ಉತ್ಪದನೆಗಾಗಿ Skoda ಜೊತೆಗೂಡಿ ಇಂಡಿಯಾ 2.0 ಯೋಜನೆ ಆರಂಭಿಸಿರುವ Volkswagen ಕಂಪನಿಯು ಕೆಲವು ಕಾರು ಮಾದರಿಗಳನ್ನು ನೇರವಾಗಿ ವಿದೇಶಿ ಮಾರುಕಟ್ಟೆಯಿಂದ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಆರಂಭಿಸಿದ್ದು, ಇನ್ನು ಕೆಲವು ಮಾದರಿಗಳನ್ನು ಭಾರತದಲ್ಲೇ ಪೂರ್ಣಪ್ರಮಾಣದಲ್ಲಿ ನಿರ್ಮಾಣ ಮಾಡಲು ಯೋಜನೆಗೆ ಚಾಲನೆ ನೀಡಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಇದಕ್ಕಾಗಿಯೇ Skoda ಜೊತೆಗೂಡಿ ಹೊಸ ಕಾರುಗಳ ಉತ್ಪಾದನೆಗಾಗಿಯೇ ಪ್ರತ್ಯೇಕ ಉತ್ಪಾದನಾ ಪ್ಲ್ಯಾಟ್‌ಫಾರ್ಮ ತೆರೆದಿರುವ Volkswagen ಕಂಪನಿಯು Skoda ಬ್ರಾಂಡ್ ಅಡಿಯಲ್ಲಿ Kushaq ಮಾದರಿಯನ್ನು ಮತ್ತು Volkswagen ಬ್ರಾಂಡ್ ಅಡಿಯಲ್ಲಿ Taigun ಮಾದರಿಯನ್ನು ಮಾರಾಟ ಮಾಡಲು ನಿರ್ಧರಿಸಿವೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

Volkswagen ಕಂಪನಿಯ ಹೊಸ ಎಂಕ್ಯೂಬಿ ಎ0-ಇನ್ ಪ್ಲ್ಯಾಟ್‌ಫಾರ್ಮ್ ಮೇಲೆ ನಿರ್ಮಾಣಗೊಂಡಿರುವ Skoda Kushaq ಈಗಾಗಲೇ ಮಾರಾಟಗೊಳ್ಳುತ್ತಿದ್ದು, ಮಾರುಕಟ್ಟೆಯ ತಂತ್ರದ ಭಾಗವಾಗಿ Volkswagen ಕಂಪನಿಯು ಮೊದಲು c ಬಿಡುಗಡೆ ಮಾಡಿ ಕೆಲ ತಿಂಗಳ ನಂತರ Taigun ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಒಂದೇ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ Kushaq ಮತ್ತು Taigun ಕಾರುಗಳು ಬ್ರಾಂಡ್ ಬ್ಯಾಡ್ಜ್ ಮತ್ತು ಕಾರಿನ ವಿನ್ಯಾಸಗಳು ಹೊರತುಪಡಿಸಿ ಉಳಿದೆಲ್ಲಾ ತಾಂತ್ರಿಕ ವೈಶಿಷ್ಟ್ಯತೆಗಳು, ಎಂಜಿನ್ ಆಯ್ಕೆಯು ಒಂದೇ ಮಾದರಿಯಾಗಿದ್ದು, ಬೆಲೆಯು ಕೂಡಾ Kushaq ಕಾರಿಗಿಂತಲೂ ತುಸು ಕಡಿಮೆಯಾಗಿರಬಹುದು ಎನ್ನಲಾಗಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಹೊಸ Skoda Kushaq ಕಾರು ಸದ್ಯ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಹೊಂದಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ಫೋಕ್ಸ್‌ವ್ಯಾಗನ್ Taigun ಕಾರು ಕೂಡಾ Kushaq ಮಾದರಿಯಲ್ಲೇ ಬೆಲೆ ಪಡೆದುಕೊಳ್ಳಲಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಹೊಸ Taigun ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಸ್ಟ್ಯಾಂಡರ್ಡ್ ಮತ್ತು ಜಿಟಿ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

Taigun ಕಾರು ಪ್ರಮುಖ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದ್ದು, ಆರಂಭಿಕ ಮಾದರಿಗಳಲ್ಲಿ Polo ಹ್ಯಾಚ್‌ಬ್ಯಾಕ್‌ ಟರ್ಬೊದಲ್ಲಿ ಬಳಕೆ ಮಾಡಲಾಗಿರುವ 113-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ನೀಡಲಾಗಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್‌ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರಲಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತದಲ್ಲಿ ಮೊದಲ ಬಾರಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆ ಪ್ರವೇಶಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

Taigun ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್‍ಇಡಿ ಮ್ಯಾಟ್ರಿಕ್ಸ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌‌, ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್‌ಪಿಟ್‌ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್‌ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.

ಸೆಪ್ಟೆಂಬರ್ 24ರಂದು ಬಿಡುಗಡೆ ಟೈಗನ್

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳು ಟೈಗನ್ ಕಾರಿನಲ್ಲಿವೆ. 6 ಏರ್‌ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.

More from DriveSpark

Article Published On: Wednesday, August 25, 2021, 11:31 [IST]
English summary
All new volkswagen taigun to launch on 24th september details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+