ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ​​ಆಫ್ ಇಂಡಿಯಾ (ARAI) ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಗಳನ್ನು ಚಾರ್ಜ್ ಮಾಡಲು ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುವ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುವಂತೆ ARAI ಗೆ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಮಹೇಂದ್ರ ನಾಥ್ ಪಾಂಡೆ ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಈ ಚಾರ್ಜರ್‌ನ ಮೂಲಮಾದರಿಯನ್ನು ಅಭಿವೃದ್ಧಿಪಡಿಸಲಾಗಿದ್ದು, ಹೊಸ ಉತ್ಪನ್ನವು 2022ರ ಡಿಸೆಂಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ, ARAI ಅಭಿವೃದ್ಧಿಪಡಿಸಿರುವ ಹೊಸ ಫಾಸ್ಟ್ ಚಾರ್ಜರ್‌ನ ಬಗ್ಗೆ ಹೆಚ್ಚು ವಿವರಗಳನ್ನು ಹಂಚಿಕೊಳ್ಳಲಾಗಿಲ್ಲ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು ಹಾಗೂ ನಾಲ್ಕು ಚಕ್ರ ವಾಹನಗಳ ಚಾರ್ಜಿಂಗ್ ಸಮಯವನ್ನು ಕಡಿಮೆ ಮಾಡಲು ಸಂಶೋಧನೆ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ARAI ಅಭಿವೃದ್ಧಿಪಡಿಸಿದ ಫಾಸ್ಟ್ ಚಾರ್ಜರ್ ಅನ್ನು ಭಾರತದಾದ್ಯಂತ 70,000 ಪೆಟ್ರೋಲ್ ಬಂಕ್'ಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಹೆದ್ದಾರಿಗಳಲ್ಲಿ 25 ಕಿ.ಮೀ ಅಂತರದಲ್ಲಿ ಹಾಗೂ ನಗರಗಳಲ್ಲಿ 3 ಕಿ.ಮೀ ಅಂತರದಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗುವುದು. ಇಲಾಖೆಯ ಈ ಯೋಜನೆಯ ಬಗ್ಗೆ ಉದ್ಯಮದ ಪ್ರಮುಖರಿಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಈ ಸಭೆಯಲ್ಲಿ ಎಂಟು ರಾಜ್ಯಗಳ ಸಾರಿಗೆ ಸಚಿವರು, 19 ರಾಜ್ಯಗಳ ಉನ್ನತ ಅಧಿಕಾರಿಗಳು ಹಾಗೂ ವಾಹನ ಉದ್ಯಮದ ಪ್ರಮುಖರು ಭಾಗವಹಿಸಿದ್ದರು. ಈ ಸಭೆಯಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಹಾಗೂ ಹೂಡಿಕೆಗಳನ್ನು ಆಕರ್ಷಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಲಾಗಿದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಚಾರ್ಜಿಂಗ್ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಇದಕ್ಕಾಗಿ ದೇಶದ 70 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲು ಯೋಜನೆ ಸಿದ್ಧಪಡಿಸಲಾಗಿದೆ. ಚಾರ್ಜಿಂಗ್ ಕೇಂದ್ರಗಳನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ಮೆಟ್ರೋ ನಗರಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಾಗುತ್ತದೆ. ಈ ಯೋಜನೆ ಯಶಸ್ವಿಯಾದ ನಂತರ ಇತರ ನಗರಗಳಲ್ಲೂ ತೆರೆಯಲಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಜನರು ಹಿಂದೇಟು ಹಾಕಲು ಚಾರ್ಜಿಂಗ್ ಸ್ಟೇಷನ್‌ಗಳು ಸಂಖ್ಯೆಯಲ್ಲಿ ಇಲ್ಲದೇ ಇರುವುದು ಸಹ ಒಂದು ಪ್ರಮುಖಕಾರಣವಾಗಿದೆ. ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವವರಿಗೆ ಎದುರಾಗುವ ದೊಡ್ಡ ಸವಾಲು ಎಂದರೆ, ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡುವುದು. ಪ್ರಯಾಣದ ಸಮಯದಲ್ಲಿ ಚಾರ್ಜ್ ಮುಗಿದು, ಹತ್ತಿರದಲ್ಲಿ ಯಾವುದೇ ಚಾರ್ಜಿಂಗ್ ಸ್ಟೇಷನ್ ಇಲ್ಲದಿದ್ದರೆ, ಚಾಲಕನು ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಪ್ರತಿ ಪೆಟ್ರೋಲ್ ಬಂಕ್ ನಲ್ಲಿ ಚಾರ್ಜಿಂಗ್ ಸ್ಟೇಷನ್ ತೆರೆದರೆ, ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಈಗ ಹೊಸ ಪೆಟ್ರೋಲ್ ಬಂಕ್ ನಿರ್ಮಿಸುವಾಗ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ ನಿರ್ಮಿಸುವುದು ಕಡ್ಡಾಯವಾಗಿದೆ.ಈಗಾಗಲೇ ಚಾಲನೆಯಲ್ಲಿರುವ ಪೆಟ್ರೋಲ್ ಬಂಕ್ ಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆದಾಗ ದೊಡ್ಡ ಬದಲಾವಣೆಯಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಅಂದಾಜಿನ ಪ್ರಕಾರ, ದೇಶದಲ್ಲಿ ಸುಮಾರು 70,000 ಪೆಟ್ರೋಲ್ ಬಂಕ್ ಗಳಿವೆ. ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆದರೆ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಾಕಷ್ಟು ಮೂಲಸೌಕರ್ಯಗಳು ಇಲ್ಲದೇ ಇರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಇತ್ತೀಚೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹಾಗೂ ಭಾರತ್ ಪೆಟ್ರೋಲಿಯಂ ಕಂಪನಿಗಳು ತಮ್ಮ ಪೆಟ್ರೋಲ್ ಬಂಕ್ ಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವುದಾಗಿ ಮಾಹಿತಿ ನೀಡಿವೆ. ಇಂಡಿಯನ್ ಆಯಿಲ್ ಮುಂದಿನ 3 ವರ್ಷಗಳಲ್ಲಿ 10,000 ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲು ನಿರ್ಧರಿಸಿದ್ದರೆ, ಭಾರತ್ ಪೆಟ್ರೋಲಿಯಂ ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ 7,000 ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವುದಾಗಿ ಹೇಳಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಭಾರತವು ತನ್ನ ಶಕ್ತಿಯ ಬೇಡಿಕೆಗಳನ್ನು ಪೂರೈಸಲು ನವೀಕರಿಸಬಹುದಾದ ಶಕ್ತಿಯನ್ನು ಬಳಸುವ ಬಗ್ಗೆ ಕೆಲಸ ಮಾಡುತ್ತಿದೆ. ಭಾರತವು, ಚೀನಾ ಹಾಗೂ ಅಮೆರಿಕಾ ದೇಶಗಳ ನಂತರ ವಿಶ್ವದ ಮೂರನೇ ಅತಿದೊಡ್ಡ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ದೇಶವಾಗಿದೆ. ಭಾರತದಲ್ಲಿ ವಿಶ್ವದ ಒಟ್ಟು ಕಾರ್ಬನ್ ಡೈ ಆಕ್ಸೈಡ್ ಉತ್ಪಾದನೆಯ ಸುಮಾರು 7% ಹೊರ ಹೊಮ್ಮುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿ ಫಾಸ್ಟ್ ಚಾರ್ಜರ್‌ಗಳನ್ನು ಅಭಿವೃದ್ಧಿಪಡಿಸುತ್ತಿದೆ ARAI

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲು ಕಾರಣವೆಂದರೆ ಅವುಗಳ ನಿರ್ವಹಣಾ ವೆಚ್ಚ. ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳಿಗಿಂತ ಕಡಿಮೆ ಯಾಂತ್ರಿಕ ಭಾಗಗಳನ್ನು ಹೊಂದಿದ್ದು, ಅವುಗಳನ್ನು ಸುಲಭವಾಗಿ ನಿರ್ವಹಿಸಬಹುದು. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಇವಿ ತಯಾರಕ ಕಂಪನಿಗಳನ್ನು ಸಹ ಪ್ರೋತ್ಸಾಹಿಸುತ್ತಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Arai developing fast ev chargers to reduce charging time details
Story first published: Monday, December 6, 2021, 19:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X