Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವಂತೆ ಮನವಿ ಮಾಡಿದ ಮುಖ್ಯಮಂತ್ರಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ಸಲುವಾಗಿ ಸ್ವಿಚ್ ದೆಹಲಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೆಹಲಿಯ ವಾಯುಮಾಲಿನ್ಯ ಸಮಸ್ಯೆಯನ್ನು ಪರಿಹರಿಸಲು ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ರವರು ದೊಡ್ಡ ನಿಗಮಗಳು, ವಸತಿ ಸಂಘಗಳು, ಮಾರುಕಟ್ಟೆ ಸಂಘಗಳು, ಮಾಲ್‌ಗಳು ಹಾಗೂ ಚಿತ್ರಮಂದಿರಗಳು ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸುವ ಸಲುವಾಗಿ ತಮ್ಮ ಆವರಣಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಳಿಕೊಂಡಿದ್ದಾರೆ.

ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನವನ್ನು ಖರೀದಿಸಬೇಕು ಎಂದು ಅವರು ಹೇಳಿದ್ದಾರೆ. ದೆಹಲಿ ಸರ್ಕಾರದ ಎಲೆಕ್ಟ್ರಿಕ್ ವಾಹನ ನೀತಿಯನ್ನುವಿಶ್ವದ ಅತ್ಯುತ್ತಮ ಎಲೆಕ್ಟ್ರಿಕ್ ವಾಹನ ನೀತಿಯೆಂದು ಪರಿಗಣಿಸಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ನೀತಿಯನ್ನು ಬದ್ಧತೆಯಿಂದ ನಿರ್ವಹಿಸಬೇಕೆಂದು ಅವರು ಹೇಳಿದ್ದಾರೆ. ಸ್ವಿಚ್ ದೆಹಲಿ ಅಭಿಯಾನದಡಿ ಎಲೆಕ್ಟ್ರಿಕ್ ವಾಹನಗಳಿಂದಾಗುವ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು.

ಸ್ವಚ್ಛ ಮಾಲಿನ್ಯ ರಹಿತ ದೆಹಲಿಗಾಗಿ ಎಲೆಕ್ಟ್ರಿಕ್ ವಾಹನಗಳು ಹೇಗೆ ಕೊಡುಗೆ ನೀಡುತ್ತವೆ ಎಂಬ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಪರಿಸರವನ್ನು ಕಲುಷಿತಗೊಳಿಸುವ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸಲು ಈ ಅಭಿಯಾನವನ್ನು ಕೈಗೊಳ್ಳಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಮಾಲಿನ್ಯ ರಹಿತ ದೆಹಲಿಗಾಗಿ ಸಾರ್ವಜನಿಕರು ಈ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ರಾಜ್ಯ ಸರ್ಕಾರವು ತನ್ನ ಎಲೆಕ್ಟ್ರಿಕ್ ವಾಹನ ನೀತಿಯಡಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನಗಳ ಖರೀದಿಗೆ ಸಹಾಯಧನ ನೀಡಲು ಮುಂದಾಗಿದೆ.

ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತದೆ. ದೆಹಲಿ ಸರ್ಕಾರದ ಎಲೆಕ್ಟ್ರಿಕ್ ವಾಹನ ನೀತಿಯನ್ನು 2020ರ ಆಗಸ್ಟ್ ತಿಂಗಳಿನಲ್ಲಿ ಜಾರಿಗೊಳಿಸಲಾಯಿತು.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ನೀತಿ ಜಾರಿಯಾದ ನಂತರ 6,000ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ. ದೆಹಲಿ ಸರ್ಕಾರವನ್ನು ಹೊರತುಪಡಿಸಿ ಕರ್ನಾಟಕ, ಪಶ್ಚಿಮ ಬಂಗಾಳ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.

ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿನ ವಾಯುಮಾಲಿನ್ಯದ ಸಮಸ್ಯೆಯನ್ನು ಕಡಿಮೆಗೊಳಿಸುವುದು ಮಾತ್ರವಲ್ಲದೆ ಕಚ್ಚಾ ತೈಲ ಆಮದು ಪ್ರಮಾಣವನ್ನು ಸಹಕಡಿಮೆಗೊಳಿಸಲು ಸಹಾಯ ಮಾಡಲಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುವ ವಿವಿಧ ರೀತಿಯ ತೆರಿಗೆಗಳಿಂದಾಗಿ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮುಗಿಲು ಮುಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಪಾರಾಗಲು ಹೆಚ್ಚು ಹೆಚ್ಚು ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುತ್ತಿದ್ದಾರೆ.