ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಆಡಿ ಇಂಡಿಯಾ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ಇ-ಟ್ರಾನ್ ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಮುಂದಿನ ತಿಂಗಳು ಜುಲೈ 22ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಧ್ಯಮ ಗಾತ್ರದ ಕಾರುಗಳಲ್ಲಿ ಮಾತ್ರವಲ್ಲದೆ ಐಷಾರಾಮಿ ಕಾರು ಮಾದರಿಗಳು ಸಹ ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಮಾರಾಟವಾಗುತ್ತಿವೆ. ಆಡಿ ಕಂಪನಿಯು ಕೂಡಾ ಈ ನಿಟ್ಟಿನಲ್ಲಿ ಈಗಾಗಲೇ ಯುರೋಪ್ ಮಾರುಕಟ್ಟೆಗಳಲ್ಲಿ ಇ-ಟ್ರಾನ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಇದೀಗ ಅಂತಿಮವಾಗಿ ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದವಾಗಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇ-ಟ್ರಾನ್ ಕಾರು ಮಾದರಿಯನ್ನು ಈ ವರ್ಷದ ಆರಂಭದಲ್ಲೇ ಬಿಡುಗಡೆಯ ಸಿದ್ದತೆಯಲ್ಲಿದ್ದ ಆಡಿ ಕಂಪನಿಯು ಕೋವಿಡ್ ಪರಿಣಾಮ ಬಿಡುಗಡೆ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಬಿಡುಗಡೆ ಮಾಡುವ ನಿರ್ಧಾರದೊಂದಿಗೆ ಮುಂದಿನ ತಿಂಗಳು 22ರಂದು ರಸ್ತೆಗಿಳಿಸುತ್ತಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಈಗಾಗಲೇ ಕೆಲವು ಮಾಹಿತಿಗಳನ್ನು ಹಂಚಿಕೊಂಡಿರುವ ಆಡಿ ಇಂಡಿಯಾ ಕಂಪನಿಯು ಹೊಸ ಕಾರಿನ ಟೆಸ್ಟ್ ಮಾದರಿಗಳನ್ನು ಆಯ್ದ ಡೀಲರ್ಸ್‌ಗಳಲ್ಲಿ ಪ್ರದರ್ಶನಗೊಳಿಸಲಾಗುತ್ತಿದ್ದು, ಶೀಘ್ರದಲ್ಲೇ ಹೊಸ ಕಾರಿನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭಗೊಳ್ಳಲಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

2019ರ ಆರಂಭದಲ್ಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿರುವ ಆಡಿ ಇ-ಟ್ರಾನ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿಯಾಗಿ ಮಾರಾಟಗೊಂಡಿದ್ದು, ಕಳೆದ ವರ್ಷ ಅತಿಹೆಚ್ಚು ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಯುರೋಪ್ ಮಾರುಕಟ್ಟೆಯಲ್ಲಿಯೇ ಹೊಸ ಕಾರು ಕಳೆದ ವರ್ಷ ಒಟ್ಟು 17,641 ಯುನಿಟ್ ಮಾರಾಟಗೊಳ್ಳುವ ಮೂಲಕ ಬೆಸ್ಟ್ ಸೆಲ್ಲಿಂಗ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇ-ಟ್ರಾನ್ ಎಲೆಕ್ಟ್ರಿಕ್ ಕಾರು ದುಬಾರಿ ಬೆಲೆ ನಡುವೆಯೂ ಭರ್ಜರಿ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಳ್ಳುತ್ತಿದ್ದು, ಅಮೆರಿಕದಲ್ಲೂ ಟೆಸ್ಲಾ ಕಾರುಗಳಿಗೂ ಉತ್ತಮ ಪೈಪೋಟಿ ನೀಡುವ ಮೂಲಕ ಶೇ.50ರಷ್ಟು ಬೆಳವಣಿಗೆ ಸಾಧಿಸಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ವಿನೂತನ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಇ-ಟ್ರಾನ್ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ 95kWh ಲೀಥಿಯಂ ಅಯಾನ್ ಬ್ಯಾಟರಿ ಹೊಂದಿರುವ ಇ-ಟ್ರಾನ್ ಕಾರು ಪ್ರತಿ ಗಂಟೆಗೆ 200ಕಿ.ಮಿ ಟಾಪ್ ಸ್ಪೀಡ್ ಪಡೆದುಕೊಂಡಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಡಿಸಿ ಫಾಸ್ಟ್ ಚಾರ್ಜರ್ ಮೂಲಕ ಅಥವಾ 400 ವೊಲ್ಟ್ಸ್ ಹೋಮ್ ಚಾರ್ಜರ್‌ನೊಂದಿಗೆ 95kWh ಬ್ಯಾಟರಿಯನ್ನು ಕೇವಲ 30 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಮಾಡಿಕೊಳ್ಳಬಹುದಾಗಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ 5.7 ಸೇಕೆಂಡುಗಳಲ್ಲಿ 100 ಕಿ.ಮಿ ಗರಿಷ್ಠ ವೇಗ ಸಾಧಿಸುವ ಹೊಸ ಇ-ಟ್ರಾನ್ ಕಾರು ಟೆಸ್ಲಾ ಎಕ್ಸ್, ಜಾಗ್ವಾರ್ ಐಪೆಸ್ ಮತ್ತು ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರುಗಳಿಗೆ ಉತ್ತಮ ಪ್ರತಿಸ್ಪರ್ಧಿಯಾಗಲಿದೆ.

ಭಾರತದಲ್ಲಿ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಬಿಡುಗಡೆಯಾಗಲಿರುವ ಇ-ಟ್ರಾನ್ ಕಾರು ಯುರೋಪ್ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ತುಸು ಬದಲಾವಣೆ ಪಡೆದುಕೊಳ್ಳಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 80 ಲಕ್ಷದಿಂದ ರೂ. 90 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
Read more on ಆಡಿ audi
English summary
Audi E-tron India Launch Details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X