Just In
Don't Miss!
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live ಸ್ಕೋರ್, ಪ್ಲೇಯಿಂಗ್ XI
- News
ಮಗಳ ಶಿರಚ್ಛೇದ ಮಾಡಿ, ರುಂಡದೊಂದಿಗೆ ಪೊಲೀಸರಿಗೆ ಶರಣಾದ ತಂದೆ
- Finance
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 8.5 ರೂ. ಕಡಿತಗೊಳಿಸಬಹುದು!
- Movies
ಮೊದಲ ವಾರವೇ ಹೊರಹೋಗ್ತಾರಾ ಶುಭಾ ಪೂಂಜಾ: ನಾಮಿನೇಟ್ ಆಗಿದ್ದು ಹೇಗೆ?
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇ-ಟ್ರಾನ್ ಟೀಸರ್ ಬಿಡುಗಡೆ- ಶೀಘ್ರದಲ್ಲೇ ದೇಶಿಯ ಮಾರುಕಟ್ಟೆ ಪ್ರವೇಶಿಸಲಿದೆ ಆಡಿ ಮೊದಲ ಇವಿ ಕಾರು
ಆಡಿ ನಿರ್ಮಾಣದ ಇ-ಟ್ರಾನ್ ಎಲೆಕ್ಟ್ರಿಕ್ ಮಾದರಿಯು ಯುರೋಪ್ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟಗೊಳ್ಳುತ್ತಿದ್ದು, ಹೊಸ ಎಲೆಕ್ಟ್ರಿಕ್ ಮಾದರಿಯನ್ನು ಆಡಿ ಕಂಪನಿಯು ಭಾರತದಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಧ್ಯಮ ಗಾತ್ರದ ಕಾರುಗಳಲ್ಲಿ ಮಾತ್ರವಲ್ಲದೆ ಐಷಾರಾಮಿ ಕಾರು ಮಾದರಿಗಳು ಸಹ ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಮಾರಾಟವಾಗುತ್ತಿವೆ. ಆಡಿ ಕಂಪನಿಯು ಕೂಡಾ ಈ ನಿಟ್ಟಿನಲ್ಲಿ ಈಗಾಗಲೇ ಇ-ಟ್ರಾನ್ ಎಸ್‌ಯುವಿ ಮಾರಾಟ ಹೊಸ ದಾಖಲೆಗೆ ಕಾರಣವಾಗಿದ್ದು, ಶೀಘ್ರದಲ್ಲೇ ಭಾರತದಲ್ಲೂ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಕ್ಯೂ2 ಕಾರು ಬಿಡುಗಡೆಯ ವೇಳೆ ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆ ಬಗ್ಗೆ ಒಂದಿಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದ ಆಡಿ ಇಂಡಿಯಾ ಕಂಪನಿಯು ಇದೀಗ ಹೊಸ ಇವಿ ಕಾರಿನ ಟೀಸರ್ ಚಿತ್ರವನ್ನು ಹಂಚಿಕೊಂಡಿದ್ದು, ಹೊಸ ಕಾರು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

2019ರ ಆರಂಭದಲ್ಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿರುವ ಆಡಿ ಇ-ಟ್ರಾನ್ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿಯಾಗಿ ಮಾರಾಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು 2020ರ ಅವಧಿಯಲ್ಲಿ ಅತಿಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಯುರೋಪ್ ಮಾರುಕಟ್ಟೆಯಲ್ಲಿ ಪ್ರಸ್ತುಕ ವರ್ಷದ ಹಣಕಾಸು ಅವಧಿಯಲ್ಲಿ ಒಟ್ಟು 17,641 ಯುನಿಟ್ ಮಾರಾಟಗೊಳ್ಳುವ ಮೂಲಕ ಬೆಸ್ಟ್ ಸೆಲ್ಲಿಂಗ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿ ಹೊರಹೊಮ್ಮಿರುವ ಇ-ಟ್ರಾನ್ ಕಾರು ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ. ಇ-ಟ್ರಾನ್ ಎಲೆಕ್ಟ್ರಿಕ್ ಕಾರು ದುಬಾರಿ ಬೆಲೆ ನಡುವೆಯೂ ಭರ್ಜರಿ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಳ್ಳುತ್ತಿದ್ದು, ಅಮೆರಿಕದಲ್ಲೂ ಟೆಸ್ಲಾ ಕಾರುಗಳಿಗೂ ಉತ್ತಮ ಪೈಪೋಟಿ ನೀಡುವ ಮೂಲಕ ಕಳೆದ ವರ್ಷಕ್ಕಿಂತ ಶೇ.50ರಷ್ಟು ಬೆಳವಣಿಗೆ ಸಾಧಿಸಿದೆ.

ಇದೀಗ ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗಿರುವ ಇ-ಟ್ರಾನ್ ಕಾರು ಈಗಾಗಲೇ ಪ್ರದರ್ಶನಗೊಳ್ಳುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯ ಸುಳಿವು ನೀಡಿದ್ದು, ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯ ಯೋಜನೆಯಲ್ಲಿ ವಿಳಂಬವಾಗಿದೆ.

ವಿನೂತನ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಇ-ಟ್ರಾನ್ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, 95kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಗಂಟೆಗೆ 200ಕಿ.ಮಿ ಟಾಪ್ ಸ್ಪೀಡ್ ಪಡೆದುಕೊಂಡಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಡಿಸಿ ಫಾಸ್ಟ್ ಚಾರ್ಜರ್ ಮೂಲಕ ಅಥವಾ 400 ವೊಲ್ಟ್ಸ್ ಹೋಮ್ ಚಾರ್ಜರ್‌ನೊಂದಿಗೆ 95kWh ಬ್ಯಾಟರಿಯನ್ನು ಕೇವಲ 30 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಮಾಡಿಕೊಳ್ಳಬಹುದಾಗಿದ್ದು, ಪ್ರತಿ ಚಾರ್ಜ್‌ಗೆ 430ಕಿ.ಮೀ ಅಧಿಕ ಮೈಲೇಜ್ ಹಿಂದಿರುಗಿಸುತ್ತದೆ.

ಈ ಮೂಲಕ 5.7 ಸೇಕೆಂಡುಗಳಲ್ಲಿ 100 ಕಿ.ಮಿ ಗರಿಷ್ಠ ವೇಗ ಸಾಧಿಸುವ ಇ-ಟ್ರಾನ್ ಕಾರು ಟೆಸ್ಲಾ ಎಕ್ಸ್, ಜಾಗ್ವಾರ್ ಐಫೆಸ್ ಮತ್ತು ಮರ್ಸಿಡಿಸ್ ಬೆಂಝ್ ಇಕ್ಯೂಸಿ ಕಾರುಗಳಿಗೆ ಪ್ರತಿಸ್ಪರ್ಧಿಯಾಗಲಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಭಾರತದಲ್ಲಿ ಬಿಡುಗಡೆಯಾಗಲಿರುವ ಇ-ಟ್ರಾನ್ ಕಾರು ಯುರೋಪ್ ಮಾರುಕಟ್ಟೆಯಲ್ಲಿ ಮಾದರಿಗಿಂತಲೂ ತುಸು ಬದಲಾವಣೆ ಪಡೆದುಕೊಳ್ಳಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 85 ಲಕ್ಷದಿಂದ ರೂ. 1 ಕೋಟಿ ಇರಬಹುದೆಂದು ಅಂದಾಜಿಸಲಾಗಿದೆ.