ಪ್ರತಿ ಚಾರ್ಜ್‌ಗೆ 448 ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಇ-ಟ್ರಾನ್ ಬುಕ್ಕಿಂಗ್ ಆರಂಭಿಸಿದ ಆಡಿ

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಆಡಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿರುವ ಇ-ಟ್ರಾನ್ ಎಸ್‌ಯುವಿಯನ್ನು ಭಾರತದಲ್ಲೂ ಮುಂದಿನ ತಿಂಗಳು 22ರಂದು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಖರೀದಿಗೆ ಕಂಪನಿಯು ರೂ.5 ಲಕ್ಷ ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಎಲೆಕ್ಟ್ರಿಕ್ ವಾಹನಗಳ ಮಾರಾಟವು ಜಾಗತಿಕವಾಗಿ ಕಳೆದ ಕೆಲ ತಿಂಗಳಿನಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಮಧ್ಯಮ ಗಾತ್ರದ ಕಾರುಗಳಲ್ಲಿ ಮಾತ್ರವಲ್ಲದೆ ಐಷಾರಾಮಿ ಕಾರು ಮಾದರಿಗಳು ಸಹ ಎಲೆಕ್ಟ್ರಿಕ್ ಆವೃತ್ತಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಜರ್ಮನ್ ಕಾರು ಉತ್ಪಾದನಾ ಕಂಪನಿ ಆಡಿ ಕೂಡಾ ಈ ನಿಟ್ಟಿನಲ್ಲಿ ತನ್ನ ಜನಪ್ರಿಯ ಇ-ಟ್ರಾನ್ ಎಸ್‌ಯುವಿ ಮಾದರಿಯನ್ನು ಇದೀಗ ಅಂತಿಮವಾಗಿ ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದವಾಗಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಯುರೋಪ್‌ನಲ್ಲಿ ಜನಪ್ರಿಯವಾಗಿರುವ ಇ-ಟ್ರಾನ್ ಮಾದರಿಯನ್ನು ಈ ವರ್ಷದ ಆರಂಭದಲ್ಲೇ ಭಾರತದಲ್ಲೂ ಬಿಡುಗಡೆಯ ಸಿದ್ದತೆಯಲ್ಲಿದ್ದ ಆಡಿ ಕಂಪನಿಯು ಕೋವಿಡ್ ಪರಿಣಾಮ ಬಿಡುಗಡೆ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡುತ್ತಾ ಇದೀಗ ಜುಲೈ 22ರಂದು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಹೊಸ ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಈಗಾಗಲೇ ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿರುವ ಆಡಿ ಕಂಪನಿಯು ಹೊಸ ಕಾರಿನ ಟೆಸ್ಟ್ ಡ್ರೈವ್ ಮಾದರಿಗಳನ್ನು ಆಯ್ದ ಡೀಲರ್ಸ್‌ಗಳಲ್ಲಿ ಪ್ರದರ್ಶನಗೊಳಿಸಲಾಗುತ್ತಿದ್ದು, ಆಸಕ್ತ ಗ್ರಾಹಕರು ಹೊಸ ಕಾರನ್ನು ಚಾಲನೆ ಮಾಡಬಹುದಾಗಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

2019ರ ಆರಂಭದಲ್ಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿರುವ ಆಡಿ ಇ-ಟ್ರಾನ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿಯಾಗಿ ಮಾರಾಟಗೊಂಡಿದ್ದು, ಕಳೆದ ವರ್ಷ ಅತಿಹೆಚ್ಚು ಬೇಡಿಕೆ ಪಡೆದುಕೊಂಡ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಇ-ಟ್ರಾನ್ ಎಲೆಕ್ಟ್ರಿಕ್ ಕಾರು ದುಬಾರಿ ಬೆಲೆ ನಡುವೆಯೂ ಭರ್ಜರಿ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಳ್ಳುತ್ತಿದ್ದು, ಅಮೆರಿಕದಲ್ಲೂ ಟೆಸ್ಲಾ ಕಾರುಗಳಿಗೂ ಉತ್ತಮ ಪೈಪೋಟಿ ನೀಡುವ ಮೂಲಕ ಶೇ.50ರಷ್ಟು ಬೆಳವಣಿಗೆ ಸಾಧಿಸಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ವಿನೂತನ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಇ-ಟ್ರಾನ್ ಕಾರು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ 95kWh ಲೀಥಿಯಂ ಅಯಾನ್ ಬ್ಯಾಟರಿ ಹೊಂದಿರುವ ಇ-ಟ್ರಾನ್ ಕಾರು ಪ್ರತಿ ಗಂಟೆಗೆ 200ಕಿ.ಮಿ ಟಾಪ್ ಸ್ಪೀಡ್ ಪಡೆದುಕೊಂಡಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಡಿಸಿ ಫಾಸ್ಟ್ ಚಾರ್ಜರ್ ಮೂಲಕ ಅಥವಾ 400 ವೊಲ್ಟ್ಸ್ ಹೋಮ್ ಚಾರ್ಜರ್‌ನೊಂದಿಗೆ 95kWh ಬ್ಯಾಟರಿಯನ್ನು ಕೇವಲ 30 ನಿಮಿಷಗಳಲ್ಲಿ ಶೇ.80 ರಷ್ಟು ಚಾರ್ಜ್ ಮಾಡಿಕೊಳ್ಳಬಹುದಾಗಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 448 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಹಾಗೆಯೇ ಹೊಸ ಕಾರಿನಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಹಲವಾರು ಫೀಚರ್ಸ್‌ಗಳಿದ್ದು, ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, 20-ಇಂಚಿನ ಅಲಾಯ್ ವೀಲ್ಹ್, ಫೋರ್ ಜೋನ್ ಕ್ಲೈಮೆಟ್ ಕಂಟ್ರೋಲ್, ಕಾರ್ ಕನೆಕ್ಟೆಡ್ ಟೆಕ್ನಾಲಜಿ, ಪನೊರಮಿಕ್ ಸನ್‌ರೂಫ್ ಸೇರಿದಂತೆ ಸುರಕ್ಷತೆಗೂ ಹಲವಾರು ಹೊಸ ಫೀಚರ್ಸ್‌ಗಳನ್ನು ನೀಡಲಾಗಿದೆ.

ಇ-ಟ್ರಾನ್ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭಿಸಿದ ಆಡಿ

ಭಾರತದಲ್ಲಿ ಬಿಡುಗಡೆಯಾಗಲಿರುವ ಇ-ಟ್ರಾನ್ ಕಾರು ಯುರೋಪ್ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ತುಸು ಬದಲಾವಣೆ ಪಡೆದುಕೊಳ್ಳಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 90 ಲಕ್ಷದಿಂದ ರೂ. 1 ಕೋಟಿ ಇರಬಹುದೆಂದು ಅಂದಾಜಿಸಲಾಗಿದೆ.

More from DriveSpark

Article Published On: Tuesday, June 29, 2021, 13:39 [IST]
English summary
Audi e-Tron SUV & Sportback Bookings Begin In India. Read in Kannada.
Read more on ಆಡಿ audi
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+