ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ಇಂಡಿಯಾ ತನ್ನ ಬಹುನಿರೀಕ್ಷಿತ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಆಡಿ ಕ್ಯೂ5(Audi Q5) ಫೇಸ್‌ಲಿಫ್ಟ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

2020ರ ಜೂನ್ ತಿಂಗಳಿನಲ್ಲಿ ಜಾಗತಿಕ ಮಟ್ಟದಲ್ಲಿ ಪಾದಾರ್ಪಣೆ ಮಾಡಿದ ಆಡಿ ಕ್ಯೂ5(Audi Q5) ಫೇಸ್‌ಲಿಫ್ಟ್ ಮಾದರಿಯು ಸುಧಾರಿತ ಸ್ಟೈಲಿಂಗ್, ಟೆಕ್-ಲೋಡೆನ್ ಇಂಟಿರಿಯರ್ ಮತ್ತು ಟರ್ಬೊ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. ಇತ್ತೀಚೆಗೆ ಆಡಿ ಇಂಡಿಯಾ ಕಂಪನಿಯು ತನ್ನ ಉತ್ಪಾದನಾ ಸ್ಥಾವರದಲ್ಲಿ ನವೀಕರಿಸಿದ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯ ಸ್ಥಳೀಯ ಉತ್ಪಾದನೆಯನ್ನು ಔರಂಗಾಬಾದ್‌ನಲ್ಲಿ ಆರಂಭಿಸಿದೆ. ಇದೀಗ ಈ ಐಷಾರಾಮಿ ಎಸ್‍ಯುವಿ ಖರೀದಿಗಾಗಿ ಪ್ರಿ-ಬುಕ್ಕಿಂಗ್ ಪ್ರಾರಂಭಿಸಿದ್ದಾರೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿ ಸ್ಪೋರ್ಟಿ ಪಾತ್ರವನ್ನು ಸಂಯೋಜಿಸುತ್ತದೆ ಮತ್ತು ವ್ಯಾಪಕವಾದ ಇನ್ಫೋಟೈನ್ಮೆಂಟ್ ಮತ್ತು ಅಸಿಸ್ಟ್ ಆಯ್ಕೆಗಳೊಂದಿಗೆ ಬರುತ್ತದೆ" ಎಂದು ಕಾರ್ ತಯಾರಕರು ಹೇಳುತ್ತಾರೆ. ದೇಶದಲ್ಲಿ ಬಿಎಸ್ 6 ಮಾಲಿನ್ಯ ನಿಯಮ ಜಾರಿಯಾಗುವ ವೇಳೆ ಆಡಿ ಕಂಪನಿಯು ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಎಸ್‌ಯುವಿಯ ಹೊಸ ಮಾದರಿಯನ್ನು ಭಾರತದಲ್ಲಿ ಸ್ಥಳೀಯವಾಗಿ ಜೋಡಿಸಲಾಗುವುದು ಮತ್ತು ಇದರ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.55 ಲಕ್ಷದಿಂದ ಪ್ರಾರಂಭವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ನವೀಕರಿಸಿದ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಇತ್ತೀಚೆಗೆ ಬಹಿರಂಗವಾಗಿವೆ. ಇದರ ಇಂದಿನ ಮಾದರಿಗೆ ಹೋಲಿಸಿದರೆ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಆದರೆ ದೊಡ್ಡ ಬದಲಾವಣೆಯನ್ನು ಕಂಡುಬಂದಿಲ್ಲ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಈ ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.0 ಲೀಟರ್ ಟಿಎಫ್ಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 261 ಬಿಹೆಚ್‍ಪಿ ಪವರ್ ಮತ್ತು 370 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮ್ಯರ್ಥ ಹೊಂದಿರುತ್ತದೆ,

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಹೊಸ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಹೊಸ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಸಣ್ಣ ಗ್ರಿಲ್ ಮತ್ತು ನವೀಕರಿಸಿದ ಬಂಪರ್ ಹೆಚ್ಚು ಸ್ಪೋರ್ಟಿ ಲುಕ್ ನಿಂದ ಕೂಡಿದೆ. ಇದರ ಪ್ರೊಫೈಲ್‌ನ ಬದಲಾವಣೆಗಳು ಮರುವಿನ್ಯಾಸಗೊಳಿಸಲಾದ ಸೈಡ್ ಸ್ಕರ್ಟ್‌ಗಳಿಗೆ ಸೀಮಿತವಾಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಐಷಾರಾಮಿ ಎಸ್‍ಯುವಿಯ ಹಿಂಭಾಗದಲ್ಲಿ ಹೊಸ ಡಿಫ್ಯೂಸರ್ ಮತ್ತು ಸೂಕ್ಷ್ಮವಾಗಿ ನವೀಕರಿಸಿದ ಟೈಲ್‌ಗೇಟ್‌ನೊಂದಿಗೆ ಹೊಸ ಬಂಪರ್ ಅನ್ನು ಅಳವಡಿಸಲಾಗಿದೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇನ್ನು ಭಾರತದಲ್ಲಿ ಈ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಈ ಐಷಾರಾಮಿ ಕಾರಿನ ಡ್ಯಾಶ್‌ಬೋರ್ಡ್‌ನ ವಿನ್ಯಾಸವು ಬಹುತೇಕ ಒಂದೇ ಆಗಿದ್ದರೆ, ದೊಡ್ಡ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುವ ಸಾಧ್ಯತೆಗಳಿದೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇದರೊಂದಿಗೆ 12.3-ಇಂಚಿನ ಕಾನ್ಫಿಗರ್ ಮಾಡಬಹುದಾದ ಕಲರ್ ಟಿಎಫ್‌ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್(ವರ್ಚುವಲ್ ಕಾಕ್‌ಪಿಟ್) ಹೊಂದಿರಲಿದೆ. ಇದು ಹಿಂದಿನದಕ್ಕಿಂತ 10 ಪಟ್ಟು ಹೆಚ್ಚು ಕಂಪ್ಯೂಟಿಂಗ್ ಶಕ್ತಿಯನ್ನು ಹೊಂದಿದೆ. ಇನ್ನು ಹೆಡ್-ಅಪ್ ಡಿಸ್ ಪ್ಲೇ ಮತ್ತು ಆಂಬಿಯೆಂಟ್ ಲೈಟಿಂಗ್ ಅನ್ನು ಒಳಗೊಂಡಿರುತ್ತದೆ. ಈ ಹೊಸ ಆಡಿ ಕ್ಯೂ5 ಎಸ್‍ಯುವಿ 360 ಡಿಗ್ರಿ ಪಾರ್ಕಿಂಗ್ ಸೆನ್ಸರ್‌ಗಳು, 18 ಇಂಚಿನ ಅಲಾಯ್ ವ್ಹೀಲ್ ಗಳು, ಕೀ ಲೆಸ್ ಎಂಟ್ರಿ, ಡ್ಯುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್, ಇಬಿಡಿ, ಇಎಸ್‌ಪಿ, ಟಿಸಿ ಮತ್ತು ಮುಂತಾದ ಸ್ಟ್ಯಾಂಡರ್ಡ್ ಫೀಚರ್ ಗಳನ್ನು ಕೂಡ ಹೊಂದಿರಲಿವೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಇನ್ನು ಆಡಿ ತನ್ನ ಆರ್‌ಎಸ್5 ಸ್ಪೋರ್ಟ್‌ಬ್ಯಾಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಸ್ಪೋರ್ಟ್‌ಬ್ಯಾಕ್ ಕಾರು ಇಂಗೋಲ್ಸ್ಟಾಟ್ ಆಧಾರಿತ ಕಂಪನಿಯ ವಿಸ್ತರಿಸುವ ಐಷಾರಾಮಿ ಪೋರ್ಟ್ಫೋಲಿಯೊದ ಭಾಗವಾಗಿದೆ. ಈ ಹೊಸ ಆಡಿ ಆರ್‌ಎಸ್5 ಸ್ಪೋರ್ಟ್‌ಬ್ಯಾಕ್ ಕಾರು ನಾರ್ಡೊ ಗ್ರೇ, ಟರ್ಬೊ ಬ್ಲೂ, ಟ್ಯಾಂಗೋ ರೆಡ್, ಮಿಥೋಸ್ ಬ್ಲ್ಯಾಕ್, ಗ್ಲೇಸಿಯರ್ ವೈಟ್, ನವರಾ ಬ್ಲೂ, ಸೊನೊಮಾ ಗ್ರೀನ್ ಮತ್ತು ಡೇಟೋನಾ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ,

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಈ ಆಡಿ ಆರ್‌ಎಸ್5 ಸ್ಪೋರ್ಟ್‌ಬ್ಯಾಕ್ ಕಾರಿನಲ್ಲಿ ವಿ6 2.9-ಲೀಟರ್ ಟ್ವಿನ್-ಟರ್ಬೊ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಟಿಪ್ಟ್ರಾನಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಬ್ರಾಂಡ್‌ನ ಕ್ವಾಟ್ರೊ ಪರ್ಮನೆಂಟ್ ಆಲ್-ವೀಲ್ ಡ್ರೈವ್ ಮೂಲಕ ಸೆಲ್ಫ್-ಲಾಕಿಂಗ್ ಸೆಂಟರ್ ಡಿಫರೆನ್ಷಿಯಲ್‌ನೊಂದಿಗೆ ಎಲ್ಲಾ ನಾಲ್ಕು ವ್ಭೀಲ್ ಗಳೊಂದಿಗೆ ಪವರ್ ಅನ್ನು ಕಳುಹಿಸಲಾಗುತ್ತದೆ. ಈ ಎಂಜಿನ್ ನೊಂದಿಗೆ 6,700 ಆರ್‌ಪಿಎಂನಲ್ಲಿ 443 ಬಿಹೆ‍ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 600 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂಡಿದೆ. ಈ ಆರ್‌ಎಸ್5 ಸ್ಪೋರ್ಟ್‌ಬ್ಯಾಕ್ ಕಾರು 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

ಹೊಸ Audi Q5 ಫೇಸ್‌ಲಿಫ್ಟ್ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಆರಂಭ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾದ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.0-ಲೀಟರ್ ಟಿಡಿಐ ಡೀಸೆಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಆದರೆ ಇದು ಭಾರತದಲ್ಲಿ ಪರಿಚಯವಾಗುತ್ತದೆಯೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ. ಈ 2022ರ ಆಡಿ ಕ್ಯೂ5 ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು ಎಕ್ಸ್3, ಲ್ಯಾಂಡ್ ರೋವರ್ ಡಿಸ್ಕವರಿ ಸ್ಪೋರ್ಟ್ ಮತ್ತು ಮರ್ಸಿಡಿಸ್ ಬೆಂಝ್ ಜಿಎಲ್‌ಸಿ ಎಸ್‍ಯುವಿಗಳಿಗೆ ಪೈಫೋಟಿ ನೀಡಲಿದೆ,

More from DriveSpark

Article Published On: Tuesday, October 19, 2021, 16:44 [IST]
English summary
Audi india started booking for new q5 facelift suv launch soon details
Read more on ಆಡಿ audi
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+