ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಜರ್ಮನ್ ಆಟೋ ಕಂಪನಿ ಆಡಿ ತನ್ನ ಭವಿಷ್ಯ ಯೋಜನೆಗಳಿಗೆ ಚಾಲನೆ ನೀಡುವ ಮೂಲಕ ವಾಹನ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಮುಂದಿನ ಕೆಲವೇ ವರ್ಷಗಳಲ್ಲಿ ತನ್ನ ಪ್ರಮುಖ ಕಾರು ಮಾದರಿಗಳಲ್ಲಿನ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ಮಾದರಿಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಮಾಲಿನ್ಯ ತಡೆಗಾಗಿ ಈಗಾಗಲೇ ಮುಂದುವರಿದ ಹಲವು ರಾಷ್ಟ್ರಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ವಾಹನಗಳ ಬಳಕೆ ಮೇಲೆ ಹಲವಾರು ನಿರ್ಬಂಧಗಳನ್ನು ವಿಧಿಸುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ಇದಕ್ಕೆ ಪೂರಕವಾಗಿ ಭವಿಷ್ಯದ ವಾಹನ ಮಾದರಿಗಳ ಮೇಲೆ ಗಮನಹರಿಸಿರುವ ಆಟೋ ಉತ್ಪಾದನಾ ಕಂಪನಿಗಳು ಕೂಡಾ ಇಂಧನ ಚಾಲಿತ ವಾಹನಗಳ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುತ್ತಿವೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಆಡಿ ಕಂಪನಿಯು ಕೂಡಾ ಈಗಾಗಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಸಂಖ್ಯೆಯನ್ನು ತಗ್ಗಿಸುತ್ತಿದ್ದು, ಪೆಟ್ರೋಲ್ ಮಾದರಿಗಳಲ್ಲಿ ಮಾತ್ರ ಮಾರಾಟ ಮಾಡುತ್ತಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

2022ರಿಂದ ಇನ್ನುಳಿದ ಕಾರು ಮಾದರಿಗಳಲ್ಲೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹಂತ-ಹಂತವಾಗಿ ಸ್ಥಗಿತಗೊಳಿಸಲಿದ್ದು, 2026ರಿಂದ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ಕಾರುಗಳ ಮೇಲೆ ಗಮನಹರಿಸಲು ನಿರ್ಧರಿಸಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಉತ್ಪಾದನೆ ಮತ್ತು ಮಾರಾಟದ ಮೇಲೆ ಕಠಿಣ ನಿರ್ಬಂಧ ವಿಧಿಸಿರುವ ಪರಿಣಾಮ ಯುರೋಪ್ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ತೀವ್ರಗತಿಯ ಬೆಳವಣಿಗೆ ಕಾಣುತ್ತಿದ್ದು, ಆಡಿ ಈಗಾಗಲೇ ತನ್ನ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‌ಯುವಿ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

2019ರ ಆರಂಭದಲ್ಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿರುವ ಆಡಿ ಇ-ಟ್ರಾನ್ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿಯಾಗಿ ಮಾರಾಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಹೆಚ್ಚು 2020ರ ಅವಧಿಯಲ್ಲಿ ಬೇಡಿಕೆ ಪಡೆದುಕೊಂಡಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಯುರೋಪ್ ಮಾರುಕಟ್ಟೆಯಲ್ಲಿ ಪ್ರಸ್ತುಕ ವರ್ಷದ ಹಣಕಾಸು ಅವಧಿಯಲ್ಲಿ ಒಟ್ಟು 17,641 ಯುನಿಟ್ ಮಾರಾಟಗೊಳ್ಳುವ ಮೂಲಕ ಬೆಸ್ಟ್ ಸೆಲ್ಲಿಂಗ್ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಯುರೋಪ್ ಮಾರುಕಟ್ಟೆಯಲ್ಲಿ ಸಾಂಪ್ರಾಯಿಕ ವಾಹನಗಳಿಂದ ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ನಿರ್ವಹಣೆಗಿಂತಲೂ ಅತಿ ಸುಲಭವಾಗಿರುವ ಎಲೆಕ್ಟ್ರಿಕ್ ವಾಹನಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿವೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಐಸ್‌ಲ್ಯಾಂಡ್‌ನಲ್ಲಿ ಈ ವರ್ಷದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಪ್ರತಿಶತ 93ರಷ್ಟು ಪಾಲನ್ನು ತನ್ನದಾಗಿಸಿಕೊಂಡಿರುವ ಇ-ಟ್ರಾನ್ ಕಾರು ನಾರ್ವೆಯಲ್ಲಿ ಶೇ. 92ರಷ್ಟು, ಸ್ವಿಡನ್‌ನಲ್ಲಿ ಶೇ. 12ರಷ್ಟು ಮಾರಾಟ ಪಾಲನ್ನು ತನ್ನದಾಗಿಸಿಕೊಂಡಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಇ-ಟ್ರಾನ್ ಎಲೆಕ್ಟ್ರಿಕ್ ಕಾರು ದುಬಾರಿ ಬೆಲೆ ನಡುವೆಯೂ ಭರ್ಜರಿ ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಳ್ಳುತ್ತಿದ್ದು, ಅಮೆರಿಕದಲ್ಲೂ ಟೆಸ್ಲಾ ಕಾರುಗಳಿಗೂ ಉತ್ತಮ ಪೈಪೋಟಿ ನೀಡುವ ಕಳೆದ ವರ್ಷಕ್ಕಿಂತ ಶೇ.50ರಷ್ಟು ಬೆಳವಣಿಗೆ ಸಾಧಿಸಿದೆ.

ಡೀಸೆಲ್ ಕಾರುಗಳ ಉತ್ಪಾದನೆಯನ್ನ ಸಂಪೂರ್ಣವಾಗಿ ಬಂದ್ ಮಾಡಲಿದೆ ಆಡಿ

ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗಿರುವ ಇ-ಟ್ರಾನ್ ಕಾರು ಈಗಾಗಲೇ ಪ್ರದರ್ಶನಗೊಳ್ಳುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯ ಸುಳಿವು ನೀಡಿದ್ದು, ಈ ವರ್ಷದ ಮಾರ್ಚ್ ನಂತರ ಬಿಡುಗಡೆಯಾಗಬೇಕಿದ್ದ ಹೊಸ ಕಾರು ಕರೋನಾ ವೈರಸ್ ಪರಿಣಾಮ ಮುಂದೂಡಿಕೆ ಮಾಡಲಾಗಿದೆ.

Most Read Articles

Kannada
Read more on ಆಡಿ audi
English summary
Audi Planning To Stop Petrol And Diesel Cars Production By 2026. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X