ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯವಿ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಬಿಡುಗಡೆಯ ನಂತರ ಪ್ರತಿದಿನ ಸರಾಸರಿ 1 ಸಾವಿರ ಬುಕ್ಕಿಂಗ್ ಪಡೆದುಕೊಳ್ಳುತ್ತಿದೆ.

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಹೊಸ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಯಾದ ನಂತರ ಇದುವರೆಗೆ ಸುಮಾರು 36 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನ ವಿತರಣೆಯನ್ನು ತೀವ್ರಗೊಳಿಸಲಾಗಿದೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿರುವ ಸೂರ್ಯ ನಿಸ್ಸಾನ್ ಡೀಲರ್ಸ್ ಮೂಲಕ ಸುಮಾರು 100 ಯುನಿಟ್ ಮ್ಯಾಗ್ನೈಟ್ ಕಾರನ್ನು ಒಂದೇ ದಿನದಲ್ಲಿ ವಿತರಣೆ ಮಾಡಲಾಗಿದ್ದು, ಹೊಸ ಕಾರು ಖರೀದಿಗೆ ಭಾರೀ ಬೇಡಿಕೆ ಹರಿದುಬರುತ್ತಿದೆ.

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಹೊಸ ಕಾರು ಕಳೆದ ವಾರ ಬೆಲೆ ಹೆಚ್ಚಳ ಪಡೆದುಕೊಂಡ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಪಡೆದುಕೊಂಡಿದ್ದು, ಆರಂಭಿಕ ಆವೃತ್ತಿಯು ಮಾತ್ರ ರೂ. 50 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಮ್ಯಾಗ್ನೈಟ್ ಕಾರಿನ ಆರಂಭಿಕ ಮಾದರಿಯ ಬೆಲೆ ಹೆಚ್ಚಳ ಹೊರತಾಗಿ ಇನ್ನುಳಿದ ಆವೃತ್ತಿಗಳ ಬೆಲೆಯನ್ನು ಮೊದಲಿನಂತೆಯೇ ಮುಂದುವರಿಸಲಾಗಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಂಡ ನಂತರ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ. ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿ ಹೊಂದಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರನ್ನು ಕೂಡಾ ಸೆಳೆಯುತ್ತಿದೆ.

Article Published On: Saturday, January 16, 2021, 20:35 [IST]
English summary
Bangalore Dealer Delivers 100 Nissan Magnite In A Single Day. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+