Just In
- 16 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 53 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಂದೇ ದಿನದಲ್ಲಿ 100 ಯುನಿಟ್ ಮ್ಯಾಗ್ನೈಟ್ ಕಾರು ವಿತರಣೆ ಮಾಡಿದ ಬೆಂಗಳೂರಿನ ನಿಸ್ಸಾನ್ ಡೀಲರ್
ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ಯವಿ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಬಿಡುಗಡೆಯ ನಂತರ ಪ್ರತಿದಿನ ಸರಾಸರಿ 1 ಸಾವಿರ ಬುಕ್ಕಿಂಗ್ ಪಡೆದುಕೊಳ್ಳುತ್ತಿದೆ.

ಹೊಸ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಯಾದ ನಂತರ ಇದುವರೆಗೆ ಸುಮಾರು 36 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನ ವಿತರಣೆಯನ್ನು ತೀವ್ರಗೊಳಿಸಲಾಗಿದೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿರುವ ಸೂರ್ಯ ನಿಸ್ಸಾನ್ ಡೀಲರ್ಸ್ ಮೂಲಕ ಸುಮಾರು 100 ಯುನಿಟ್ ಮ್ಯಾಗ್ನೈಟ್ ಕಾರನ್ನು ಒಂದೇ ದಿನದಲ್ಲಿ ವಿತರಣೆ ಮಾಡಲಾಗಿದ್ದು, ಹೊಸ ಕಾರು ಖರೀದಿಗೆ ಭಾರೀ ಬೇಡಿಕೆ ಹರಿದುಬರುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಕಾರು ಕಳೆದ ವಾರ ಬೆಲೆ ಹೆಚ್ಚಳ ಪಡೆದುಕೊಂಡ ನಂತರ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಪಡೆದುಕೊಂಡಿದ್ದು, ಆರಂಭಿಕ ಆವೃತ್ತಿಯು ಮಾತ್ರ ರೂ. 50 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಮ್ಯಾಗ್ನೈಟ್ ಕಾರಿನ ಆರಂಭಿಕ ಮಾದರಿಯ ಬೆಲೆ ಹೆಚ್ಚಳ ಹೊರತಾಗಿ ಇನ್ನುಳಿದ ಆವೃತ್ತಿಗಳ ಬೆಲೆಯನ್ನು ಮೊದಲಿನಂತೆಯೇ ಮುಂದುವರಿಸಲಾಗಿದ್ದು, ಎನ್ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಂಡ ನಂತರ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ. ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಆವೃತ್ತಿ ಹೊಂದಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ಯುವಿ ಜೊತೆಗೆ ಹ್ಯಾಚ್ಬ್ಯಾಕ್ ಕಾರು ಖರೀದಿದಾರನ್ನು ಕೂಡಾ ಸೆಳೆಯುತ್ತಿದೆ.