ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ದೇಶಿಯ ಮಾರುಕಟ್ತೆಯಲ್ಲಿ ದಿನದಂದ ದಿನಕ್ಕೆ 7-ಸೀಟರ್ ಕಾರುಗಳ ಬೇಡಿಕೆ ಹೆಚ್ಚಾಗುತ್ತಿದೆ. ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು 7-ಸೀಟರ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದ್ದಾರೆ. ಇದರಿಂದ ಭಾರತದಲ್ಲಿ 7-ಸೀಟರ್ ಮಾದರಿಗಳ ವಿಭಾಗದಲ್ಲಿ ಗ್ರಾಹಕರಿಗೆ ಹಲವು ಆಯ್ಕೆಗಳಿವೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಹ್ಯಾರಿಯರ್ ಎಸ್‍ಯುವಿಯ 7-ಸೀಟರ್ ಮಾದರಿಯಾಗಿ ಸಫಾರಿ ಹೆಸರಿನಲ್ಲಿ ಬಿಡುಗಡೆಗೊಳಿಸಲಾಗಿದೆ. ಇದೇ ಸಾಲಿಗೆ ಹೆಕ್ಟರ್ ಪ್ಲಸ್ ಎಸ್‍ಯುವಿಯು ಕೂಡ ಸೇರುತ್ತದೆ. ಭಾರತದಲ್ಲಿ ಹೆಚ್ಚಿನ ಸದಸ್ಯರನ್ನು ಒಳಗೊಂಡಿರುವ ದೊಡ್ಡ ಕುಟುಂಬಗಳು ಹೆಚ್ಚು ಇವೆ. ಎಲ್ಲರೂ ಒಟ್ಟಿಗೆ ಪ್ರಯಾಣ ಮಾಡಲು 7-ಸೀಟರ್ ಕಾರುಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆದರೆ 7-ಸೀಟರ್ ಕಾರು ಹೆಚ್ಚು ದುಬಾರಿ ಎಂದುಕೊಂಡು ಹೆಚ್ಚಿನ ಜನರು ಖರೀದಿಸಲು ಹಿಂದೇಟು ಹಾಕುತ್ತಾರೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಆದರೆ ಬಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ಕಾರು ತಯಾರಕ ಕಂಪನಿಗಳ 7-ಸೀಟರ್ ಕಾರುಗಳನ್ನು ಕೈಗೆಡುಕುವ ದರದಲ್ಲಿ ಲಭ್ಯವಿದೆ. ಭಾರತದಲ್ಲಿ ಲಭ್ಯವಿರುವ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿರುವ 7-ಸೀಟರ್ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ರೆನಾಲ್ಟ್ ಟ್ರೈಬರ್

ಫ್ರೆಂಚ್ ವಾಹನ ತಯಾರಕ ರೆನಾಲ್ಟ್ ಪ್ರಸ್ತುತ ಟ್ರೈಬರ್ ಮಲ್ಟಿ-ಯುಟಿಲಿಟಿ ವಾಹನವನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಈ ಮಾದರಿಯು 7 ಆಯ್ಕೆಯನ್ನು ಹೊಂದಿದೆ. ಈ ರೆನಾಲ್ಟ್ ಟ್ರೈಬರ್ ಕಾರಿನ ಆರಂಭಿಕ ಬೆಲೆಯು ರೂ.5.50 ಲಕ್ಷಗಳಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಈ ಟ್ರೈಬರ್ ಎಂಪಿವಿ ಮಾದರಿಯಲ್ಲಿ 1.0-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 70 ಬಿಎಚ್‌ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ದಟ್ಸನ್ ಗೋ ಪ್ಲಸ್

ಬ್ರ್ಯಾಂಡ್‌ನ ಎಂಟ್ರಿ ಲೆವೆಲ್ ಎಂಯುವಿಯಾದ ದಟ್ಸನ್ ಗೋ ಪ್ಲಸ್ ಕೈಗೆಟಿಕುದರ ದರದಲ್ಲಿ ಲಭ್ಯವಿರುವ 7-ಸೀಟರ್ ಮಾದರಿಯಾಗಿದೆ. ಈ ದಟ್ಸನ್ ಗೋ ಪ್ಲಸ್ ಕಾರಿನ ಆರಂಭಿಕ ಬೆಲೆಯು ರೂ.4.26 ಲಕ್ಷಗಳಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಈ ದಟ್ಸನ್ ಗೋ ಪ್ಲಸ್ ಕಾರಿನಲ್ಲಿ 1.2-ಲೀಟರ್ 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 76 ಬಿಹೆಚ್‍ಪಿ ಪವರ್ ಮತ್ತು 104 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಮಹೀಂದ್ರಾ ಬೊಲೆರೊ

ರಗಡ್ ಲುಕ್ ಹೊಂದಿರುವ ಮಹೀಂದ್ರಾ ಬೊಲೆರೊ ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಭಾರತದ ಹೆಚ್ಚು ಮಾರಾಟವಾದ ಎಸ್‍ಯುವಿಯಾಗಿದೆ. 2000ರಲ್ಲಿ ಬಿಡುಗಡೆಯಾದಗಿನಿಂದ ಕಂಪನಿಯು 13 ಲಕ್ಷ ಯುನಿಟ್ ಗಳನ್ನು ಮಾರಾಟ ಮಾಡಿದೆ. ಈ ಬೊಲೆರೊ ಮಾದರಿಯ ಆರಂಭಿಕ ಬೆಲೆಯು ರೂ.8.62 ಲಕ್ಷಗಳಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಈ ಬೊಲೆರೊ ಮಾದರಿಯಲ್ಲಿ .5-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 75 ಬಿಹೆಚ್‍ಪಿ ಪವರ್ ಮತ್ತು 210 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಮಹೀಂದ್ರಾ ಬೊಲೆರೊ ನಿಯೋ

ಮಹೀಂದ್ರಾ ಹೊಸ ಬೊಲೆರೊ ನಿಯೋ ಆಗಿ ಟಿಯುವಿ 300 ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಮತ್ತೆ ಪರಿಚಯಿಸಿದೆ. ಇದರ ವಿನ್ಯಾಸದಲ್ಲಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಈ ಹೊಸ ಮಹೀಂದ್ರಾ ಬೊಲೆರೊ ನಿಯೋ ಎಸ್‍ಯುವಿ ಮಾದರಿಯ ಆರಂಭಿಕ ಬೆಲೆಯು ರೂ.8.48 ಲಕ್ಷಗಳಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಈ ಬೊಲೆರೊ ನಿಯೋ ಎಸ್‍ಯುವಿಯಲ್ಲಿ 1.5 ಎಲ್, 3-ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 100 ಬಿಹೆಚ್‌ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಸುಜುಕಿ ಎರ್ಟಿಗಾ ಪ್ರಸ್ತುತ ಭಾರತದ ಹೆಚ್ಚು ಮಾರಾಟವಾದ ಎಂಪಿವಿ ಆಗಿದೆ. ಈ ಎರ್ಟಿಗಾ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳಲ್ಲಿ ಲಭ್ಯವಿದೆ. ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ ಆರಂಭಿಕ ಬೆಲೆಯು ರೂ.7.78 ಲಕ್ಷಗಳಾಗಿದೆ.

ಭಾರತದಲ್ಲಿ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಸಿಗುವ 7-ಸೀಟರ್ ಕಾರುಗಳಿವು

ಈ ಎರ್ಟಿಗಾ ಮಾದರಿಯಲ್ಲಿ ಎಸ್‌ಎಚ್‌ವಿಎಸ್ ಮೈಲ್ಡ್ ಸಿಸ್ಟಂ ಹೊಂದಿರುವ 1.5 ಎಲ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 103 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕರ್ನಾವಾಟರ್ ಅನ್ನು ಜೋಡಿಸಲಾಗಿದೆ.

Most Read Articles

Kannada
English summary
Top 7-Seater Cars Under Rs 10 Lakhs. Read In Kannada.
Story first published: Tuesday, July 20, 2021, 22:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X