ಡೀಸೆಲ್ ಆಟೋಮ್ಯಾಟಿಕ್ ಆಯ್ಕೆ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ವೈಯಕ್ತಿಕ ಕಾರು ಬಳಕೆದಾರರು ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಆವೃತ್ತಿಗಳ ಆಯ್ಕೆ ಆದ್ಯತೆ ನೀಡುತ್ತಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ ಪ್ರಮುಖ ಮೂರು ಬಜೆಟ್ ಕಾರುಗಳ ಡೀಸೆಲ್ ಆವೃತ್ತಿಯ ಮಾಹಿತಿ ಇಲ್ಲಿ ನೀಡಲಾಗಿದೆ.

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಹೆಚ್ಚಿನ ಮಟ್ಟದ ಇಂಧನ ದಕ್ಷತೆಗಾಗಿ ಡೀಸೆಲ್ ಎಂಜಿನ್ ಮತ್ತು ನಗರದೊಳಗಿನ ಟ್ರಾಫಿಕ್ ದಟ್ಟಣೆಯಲ್ಲೂ ಆರಾಮದಾಯ ಕಾರು ಚಾಲನೆಗಾಗಿ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಗಳು ಹೆಚ್ಚು ಬೇಡಿಕೆ ಹೊಂದಿದ್ದು, ಹಲವಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಲ್ಲಿ ಈ ಮಾದರಿಯ ಎಂಜಿನ್ ಆಯ್ಕೆ ಹೊಂದಿದ್ದರು ಬೆಲೆಯಲ್ಲಿ ತುಸು ದುಬಾರಿಯಾಗಿವೆ. ಆದರೆ ಇತ್ತೀಚೆಗೆ ಮಾರುಕಟ್ಟೆ ಪ್ರವೇಶಿಸಿರುವ ಹಲವು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೂ ಡೀಸೆಲ್ ಆಟೋಮ್ಯಾಟಿಕ್ ಆಯ್ಕೆ ನೀಡುತ್ತಿರುವುದು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ ಹಾಗಾದ್ರೆ ಡೀಸೆಲ್ ಆಟೋಮ್ಯಾಟಿಕ್ ಮಾದರಿಗಳ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಟಾಟಾ ನೆಕ್ಸಾನ್

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.09 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಬಹುತೇಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯ ಸೌಲಭ್ಯವನ್ನು ನೀಡಲಾಗಿದ್ದು, ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.92 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿದೆ.

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಕಿಯಾ ಸೊನೆಟ್

ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಸದ್ಯ ನಂ. 1 ಸ್ಥಾನದಲ್ಲಿರುವ ಕಿಯಾ ಸೊನೆಟ್ ಕಾರು ಗ್ರಾಹಕರ ಬೇಡಿಕೆಯೆಂತೆ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.19 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯ ಸೌಲಭ್ಯವನ್ನು ನೀಡಲಾಗಿದೆ.

MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.92 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.19 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಮಹೀಂದ್ರಾ ಎಕ್ಸ್‌ಯುವಿ300

ಎಕ್ಸ್‌ಯುವಿ 300 ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಮಾದರಿಯು ಆರಂಭಿಕವಾಗಿ ರೂ. 7.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.45 ಲಕ್ಷ ಬೆಲೆ ಹೊಂದಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಡೀಸೆಲ್ ಎಟಿ ಹೊಂದಿರುವ ಬಜೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿವು..!

ಬಹುತೇಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯ ಸೌಲಭ್ಯವನ್ನು ನೀಡಲಾಗಿದ್ದು, ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.45 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Affordable Diesel-Automatic Compact SUVs. Read in Kannada.
Story first published: Saturday, February 13, 2021, 20:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X