ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಪ್ರಸ್ತುತ ಆಟೋಮೊಬೈಲ್ ಉದ್ಯಮವು ಮಂದಗತಿಯಲ್ಲಿ ಸಾಗುತ್ತಿದೆ. ಈ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ವಾಹನ ಮಾರಾಟದ ಮೇಲೆ ಕೊರೋನಾ ಎರಡನೇ ಅಲೆಯು ಭಾರೀ ಪರಿಣಾಮವನ್ನು ಬೀರಿದೆ. ಇದರ ಜೊತೆಗೆ ಸೆಮಿಕಂಡಕ್ಟರ್ ಕೊರತೆಯು ವಾಹನಗಳ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಈ ಎಲ್ಲಾ ಕಾರಣಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ವಾಹನಗಳ ಮಾರಾಟದಲ್ಲಿ ಕುಸಿತ ಕಂಡಿದೆ. ಆದರೆ ಈ ವರ್ಷ ಹಲವಾರು ಜನಪ್ರಿಯ ಕಾರುಗಳು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಈ ಹೊಸ ಆಗಮನಗಳಲ್ಲಿ ಹಲವು ಅದ್ಭುತ ಕಾರುಗಳು, ವಿವಿಧ ವಿಭಾಗಗಳು ಮತ್ತು ಕೈಗೆಟುಕುವ ಬೆಲೆಯಲ್ಲಿಯು ಕಾರುಗಳು ಬಿಡುಗಡೆಯಾಗಿವೆ. ಇನ್ನು ಈ ವರ್ಷ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಹಲವು ಕಾರುಗಳು ಬಿಡುಗಡೆಯಾಗಿವೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಇಲ್ಲಿವೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಮಾರುತಿ ಸೆಲೆರಿಯೊ

ಮಾರುತಿ ಸುಜುಕಿ ಈ ವರ್ಷದ ನವೆಂಬರ್‌ ತಿಂಗಳಿನಲ್ಲಿ ಎರಡನೇ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಕಂಪನಿಯ ಪ್ರಕಾರ, ಇದು ದೇಶದಲ್ಲಿ ಮಾರಾಟದಲ್ಲಿರುವ ಅತ್ಯಂತ ಹೆಚ್ಚು ಮೈಲೇಜ್ ನೀಡುವ ಪೆಟ್ರೋಲ್ ಕಾರು (ARAI ಪ್ರಕಾರ 26.68 kmpl) ಆಗಿದೆ. ಈ ಕಾರಿನ ಆರಂಬಿಕ ಬೆಲೆಯು ರೂ.4.99 ಲಕ್ಷವಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಈ ಕಾರಿನಲ್ಲಿ 1.0-ಲೀಟರ್ NA ಪೆಟ್ರೋಲ್ ಎಂಜಿನ್ ಹೊಂದಿದೆ, ಈ ಎಂಜಿನ್ 66.6 ಬಿಹೆಚ್‌ಪಿ ಪವರ್ ಮತ್ತು 89 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಟಾಟಾ ಪಂಚ್

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಬಹುನಿರೀಕ್ಷಿತ ಟಾಟಾ ಪಂಚ್ ಅನ್ನು ಈ ವರ್ಷದ ಅಕ್ಟೋಬರ್‌ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು, ಈ ಟಾಟಾ ಪಂಚ್ ಕಾರು ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಮೈಕ್ರೋ ಎಸ್‌ಯುವಿಗಳಲ್ಲಿ ಒಂದಾಗಿದೆ. ಈ ಕಾರಿನ ಆರಂಬಿಕ ಬೆಲೆಯು ರೂ.5.48 ಲಕ್ಷವಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಟಾಟಾ ಪಂಚ್ ಮಾದರಿಯು ನೂತನ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿಯಾಗಿದೆ. ಇನ್ನು ಈ ಹೊಸ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದ ಇ ಹೊಸ ಮೈಕ್ರೋ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ. ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಲಭ್ಯವಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಈ ಕಾರಿನಲ್ಲಿ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಟಾಟಾ ಪಂಚ್ ಮೈಕ್ರೋ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸುರಕ್ಷತಾ ರೇಟಿಂಗ್ಸ್ ಪಡೆದುಕೊಂಡಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ರೆನಾಲ್ಟ್ ಕಿಗರ್

ರೆನಾಲ್ಟ್ ಕಂಪನಿಯು ಕಿಗರ್ ಕಾರನ್ನು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಇದು ಭಾರತೀಯ ಮಾರುಕಟ್ಟೆಯಲ್ಲಿ ಖರೀದಿಸಬಹುದಾದ ಅತ್ಯಂತ ಸುಂದರವಾದ ಬಜೆಟ್ ಕಾರುಗಳಲ್ಲಿ ಒಂದಾಗಿದೆ.ಈ ಕಾರಿನ ಆರಂಬಿಕ ಬೆಲೆಯು ರೂ.5.64 ಲಕ್ಷವಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಈ ಕಾರಿನಲ್ಲಿ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಸಾಮಾನ್ಯ ಪೆಟ್ರೋಲ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುತ್ತದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ರೆನಾಲ್ಟ್ ಕಿಗರ್ ಕಾರು ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಈ ಕಿಗರ್ ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಹೊಂದಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಎಂಜಿ ಆಸ್ಟರ್

ಎಂಜಿ ಆಸ್ಟರ್ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿರುವ ಕಾರ್ ಆಗಿದೆ. ಈ ಕಾರಿನಲ್ಲಿ 'iSmart' ಕನೆಕ್ಟಿವಿಟಿ ಸಿಸ್ಟಂ ಮತ್ತು ADAS (ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ.ಈ ಕಾರಿನ ಆರಂಬಿಕ ಬೆಲೆಯು ರೂ.9.78 ಲಕ್ಷವಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಈ ಎಂಜಿ ಆಸ್ಟರ್ ಮಾದರಿಯು ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದ್ದು, ವಿವಿಧ ಆಕ್ಸೆಸರಿಸ್‌ಗಳು ಕಾರಿಗೆ ಐಷಾರಾಮಿ ಲುಕ್ ನೀಡಲಿವೆ. ಈ ಮಾದರಿಯಲ್ಲಿ 1.5 ಲೀಟರ್ ಪೆಟ್ರೋಲ್ ಮತ್ತು 1.3 ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಒಳಗೊಂಡಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಹುಂಡೈ ಐ20 ಎನ್ ಲೈನ್

ಹ್ಯುಂಡೈ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿ ಹುಂಡೈ ಐ20 ಎನ್ ಲೈನ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಹುಂಡೈ ಐ20 ಎನ್ ಲೈನ್ ಪರ್ಫಾಮೆನ್ಸ್ ಕಾರಿನ ಆರಂಬಿಕ ಬೆಲೆಯು ರೂ.9.84 ಲಕ್ಷವಾಗಿದೆ. ಈ ಕಾರಿನಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ವರ್ಷ ಭಾರತದಲ್ಲಿ ಬಿಡುಗಡೆಗೊಂಡ ರೂ.10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಿವು..

ಈ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು ಸ್ಪೀಡ್ iMT ಮತ್ತು 7-ಸ್ಪೀಡ್ DCT ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ,ಈ ಕಾರಿನಲ್ಲಿ ಗಟ್ಟಿಯಾದ ಸಸ್ಪೆಂಕ್ಷನ್ ಸೆಟಪ್, ಉತ್ತಮ ಬ್ರೇಕ್‌ಗಳು ಮತ್ತು ಥ್ರೋಟ್ ಎಕ್ಸಾಸ್ಟ್ ಅನ್ನು ಹೊಂದಿದೆ.

Most Read Articles

Kannada
English summary
Best cars launched in india 2021 under rs 10 lakh details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X