ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ದೇಶಿಯ ಮಾರುಕಟ್ಟೆಯಲ್ಲಿ ಕಳೆದ ಕೆಲ ವರ್ಷಗಳಿಂದ ಎಸ್‌ಯುವಿ ಕಾರು ಮಾರಾಟವು ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಎಸ್‌ಯುವಿ ವಿಭಾಗದಲ್ಲಿ ಹಲವು ಹೊಸ ಕಾರು ಮಾದರಿಗಳು ಬಿಡುಗಡೆಗೊಂಡು ಯಶಸ್ವಿಯಾಗಿವೆ. ಹಾಗಾದ್ರೆ ಮಧ್ಯಮ ಕ್ರಮಾಂಕದಲ್ಲಿರುವ ಪ್ರಮುಖ ಎಸ್‌ಯುವಿ ಮಾದರಿಗಳು ಯಾವುವು? ಮತ್ತು ಅವುಗಳ ವಿಶೇಷತೆಗಳ ಕುರಿತಾಗಿ ಈ ಲೇಖನದಲ್ಲಿ ನೋಡೋಣ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಎಸ್‌ಯುವಿ ವಿಭಾಗದಲ್ಲಿ ಸದ್ಯ ಪ್ರಮುಖ ಕಾರು ಕಂಪನಿಗಳು ಹಲವಾರು ಹೊಸ ಮಾದರಿಗಳನ್ನು ಬಿಡುಗಡೆ ಮಾಡಿವೆ. ಎಸ್‌ಯುವಿಯಲ್ಲಿ ಮಧ್ಯಮ ಕ್ರಮಾಂಕದ ಎಸ್‌ಯುವಿ, ಫುಲ್ ಸೈಜ್ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಸಬ್ ಫೋರ್ ಮೀಟರ್ ಎಸ್‌ಯುವಿ ಮತ್ತು ಮೈಕ್ರೊ ಎಸ್‌ಯುವಿ ವಿಭಾಗಗಳಿದ್ದು, ಇವುಗಳಲ್ಲಿ ನಾವೀಗ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳ ಬಗೆಗೆ ಚರ್ಚಿಸೋಣ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಮಾರುತಿ ಸುಜುಕಿ ಎಸ್-ಕ್ರಾಸ್

ಮಾರುತಿ ಸುಜುಕಿ ನಿರ್ಮಾಣದ ಹೈ ಎಂಡ್ ಕಾರು ಮಾದರಿಯಾಗಿರುವ ಎಸ್-ಕ್ರಾಸ್ ಹಲವಾರು ವಿಶೇಷತೆಗಳೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ವಿಭಾಗದಲ್ಲಿ ವಿಶೇಷ ಬೇಡಿಕೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಎಸ್-ಕ್ರಾಸ್ ಮಾದರಿಯು 1.5 ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.56 ಲಕ್ಷ ಬೆಲೆ ಹೊಂದಿದೆ. ಎಸ್-ಕ್ರಾಸ್ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಪೆಟ್ರೋಲ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಎಂಜಿ ಆಸ್ಟರ್

ಹೊಸ ಎಂಜಿ ಆಸ್ಟರ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್, ವಿವಿಧ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿದೆ. ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಹೊಸ ಕಾರಿನಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಪರಿಚಯಿಸಲಾಗಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಮಹೀಂದ್ರಾ ಎಕ್ಸ್‌ಯುವಿ700

ಹೊಸ ಮಹೀಂದ್ರಾ ಎಕ್ಸ್‌ಯುವಿ700 ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.89 ಲಕ್ಷ ಬೆಲೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಫೋಕ್ಸ್‌ವ್ಯಾಗನ್ ಟೈಗುನ್

ಹೊಸ ಟೈಗುನ್ ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವಿವಿಧ ವೆರಿಯೆಂಟ್‌ಗಳಲ್ಲಿರುವ ತಾಂತ್ರಿಕ ಸೌಲಭ್ಯಕ್ಕೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.50 ಲಕ್ಷ ಬೆಲೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಹೊಸ ಟೈಗುನ್ ಕಾರು ಸಹಭಾಗೀತ್ವ ಸಂಸ್ಥೆಯಾದ ಸ್ಕೋಡಾ ಹೊಸ ಕುಶಾಕ್ ಕಾರು ಮಾದರಿಯಲ್ಲಿರುವಂತೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್‌ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಹ್ಯುಂಡೈ ಕ್ರೆಟಾ

ಸದ್ಯ ಮಾರುಕಟ್ಟೆಯಲ್ಲಿ ಎರಡನೇ ತಲೆಮಾರಿನ ಕ್ರೆಟಾ ಮಾದರಿಯು ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.16 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.87 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಕಿಯಾ ಸೆಲ್ಟೊಸ್

ಕಿಯಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸೆಲ್ಟೊಸ್ ಕಾರಿನ 2021ರ ಆವೃತ್ತಿಯ ಬಿಡುಗಡೆಯ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18.10 ಲಕ್ಷ ಬೆಲೆ ಹೊಂದಿದೆ.

ಮಧ್ಯಮ ಕ್ರಮಾಂಕದ ಅತ್ಯುತ್ತಮ ಎಸ್‌ಯುವಿ ಕಾರುಗಳಿವು..

ಸೆಲ್ಟೊಸ್ ಕಾರು ಹ್ಯುಂಡೈ ಕ್ರೆಟಾ ಮಾದರಿಯೊಂದಿಗೆ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಹಂಚಿಕೊಂಡಿದ್ದು, ಸೆಲ್ಟೊಸ್ ಕಾರಿನಲ್ಲಿ ಕ್ರೆಟಾ ಮಾದರಿಯಲ್ಲಿಯೇ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಜೋಡಿಸಲಾಗಿದೆ.

Most Read Articles

Kannada
English summary
Best mid size suvs available in indian market details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X