ಇವಿ ಚಾರ್ಜಿಂಗ್ ಸೌಲಭ್ಯ ತೆರೆಯಲು ಭಾರತ್ ಪೆಟ್ರೋಲಿಯಂ ಕಂಪನಿಯಿಂದ ಭಾರೀ ಪ್ರಮಾಣದ ಹೂಡಿಕೆ
ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗುತ್ತಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ವಿವಿಧ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಸಬ್ಸಡಿ ಜೊತೆಗೆ ರಾಜ್ಯ ಮಟ್ಟದಲ್ಲೂ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ವಿವಿಧ ರಾಜ್ಯಗಳಲ್ಲಿ ಇವಿ ವಾಹನಗಳ ನೋಂದಣಿ ಸಂಖ್ಯೆಯಲ್ಲಿ ಸಾಕಷ್ಟು ಏರಿಕೆಯಾಗಿದೆ.

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಸಾಕಷ್ಟು ಸಹಕಾರಿಯಾಗಿದ್ದರೂ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದೆ.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇವಿ ವಾಹನಗಳ ಹೆಚ್ಚಳ ಯೋಜನೆಗೆ ಪೂರಕವಾಗಿ ಇಂಧನ ಪೂರೈಕೆ ಕಂಪನಿಗಳು ಕೂಡಾ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯವನ್ನು ಹೆಚ್ಚಿಸುತ್ತಿದ್ದು, ಅಸ್ತಿತ್ವದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಚಾರ್ಜಿಂಗ್ ಸೌಲಭ್ಯ ಹೆಚ್ಚಿಸಲು ದೇಶದ ಎರಡನೇ ಅತಿದೊಡ್ಡ ಪೆಟ್ರೋಲಿಯಂ ಚಿಲ್ಲರೆ ವ್ಯಾಪಾರಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡಿದೆ.

ಪೆಟ್ರೋಲ್ ಬಂಕ್ ಆವರಣದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಪ್ರತ್ಯೇಕವಾದ ಚಾರ್ಜಿಂಗ್ ಸ್ಥಾನವನ್ನು ಕಲ್ಪಿಸುವ ಮೂಲಕ ಇವಿ ವಾಹನಗಳನ್ನು ಪ್ರೋತ್ಸಾಹಿಸುವ ಗುರಿಹೊಂದಿದ್ದು, ದೇಶಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ ತನ್ನ ಅಧೀನದ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ನಿಲ್ದಾಣ ತೆರೆಯುವ ಯೋಜನೆಗಾಗಿ ಸುಮಾರು ರೂ. 1 ಲಕ್ಷ ಕೋಟಿ ಹೂಡಿಕೆ ಮಾಡಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಮೂಲಸೌಕರ್ಯವನ್ನು ಸ್ಥಾಪಿಸಲು ತನ್ನ ಪೆಟ್ರೋಲ್ ಬಂಕ್ ಜಾಲವನ್ನೇ ಬಳಸಿಕೊಳ್ಳುತ್ತಿದ್ದು, ತೈಲ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ-ಹಂತವಾಗಿ ರೂ. 1 ಲಕ್ಷ ಕೋಟಿ ಹೂಡಿಕೆ ಮಾಡಲಿದೆ.

ಸಾಂಪ್ರದಾಯಿಕ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಮಾನವಾಗಿ ಹೊಂದುತ್ತಿರುವ ಸಮಯದಲ್ಲಿ ಹೊಸ ಹೂಡಿಕೆಯು ಬಿಪಿಸಿಎಲ್ ಕಂಪನಿಯು ಉತ್ತಮ ಆದಾಯ ತಂದುಕೊಡುವ ನೀರಿಕ್ಷೆಯಿದೆ.

ಬಿಪಿಸಿಎಲ್ ಕಂಪನಿಯು 1000 ಮೆಗಾವ್ಯಾಟ್ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ನೆಟ್ವರ್ಕ್ ಸ್ಥಾಪಿಸುವ ಗುರಿಯನ್ನು ಹೊಂದಿದ್ದು, ಇವಿ ವಾಹನಗಳ ಜೊತೆಗೆ ಕಂಪನಿಯು ಜೈವಿಕ ಇಂಧನ ಮತ್ತು ಹೈಡ್ರೋಜನ್ ಫ್ಯೂಲ್ ಸೆಲ್ಸ್ ಮೇಲೂ ಹೂಡಿಕೆ ಮಾಡುತ್ತಿದೆ.

ಇದರೊಂದಿಗೆ ಸರ್ಕಾರಿ ಸ್ವಾಮ್ಯದ ಕನ್ವರ್ಜೆನ್ಸ್ ಎನರ್ಜಿ ಸರ್ವೀಸಸ್ ಲಿಮಿಟೆಡ್ (ಸಿಇಎಸ್ಎಲ್) ಸಂಸ್ಥೆಯು ಕೂಡಾ ದೇಶಾದ್ಯಂತ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿದ್ದು, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೆಷನ್ ಲಿಮಿಟೆಡ್(ಹೆಚ್‌ಪಿಸಿಎಲ್)ನೊಂದಿಗೆ ಹೊಸ ಒಪ್ಪಂದ ಮಾಡಿಕೊಂಡಿದೆ.

ಹೊಸ ಒಪ್ಪಂದದ ಪ್ರಕಾರ ಸಿಇಎಸ್ಎಲ್ ಸಂಸ್ಥೆಯು ಹೆಚ್‌ಪಿ ಪೆಟ್ರೋಲ್ ಬಂಕ್‌ಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದ್ದು, ಮುಂದಿನ 10 ವರ್ಷಗಳ ಹೊಸ ಒಪ್ಪಂದ ಚಾಲ್ತಿಯಲ್ಲಿರಲಿದೆ.

ಸಿಇಎಸ್ಎಲ್ ಸಂಸ್ಥೆಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಡಿಸಿ ಫಾಸ್ಟ್ ಚಾರ್ಜಿಂಗ್ ಮತ್ತು ಎಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಮುಂದಿನ 2 ವರ್ಷದಲ್ಲಿ 2 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.


Click it and Unblock the Notifications