ದುಬಾರಿ ಬೆಲೆಯ ಮಿನಿ ಕೂಪರ್ ಖರೀದಿಸಿದ ಮಾರ್ಡನ್ ರೈತ

ಬಿಗ್ ಬಾಸ್ ಕನ್ನಡ ಸೀಸನ್ 6ರಲ್ಲಿ ಜನಸಾಮಾನ್ಯರ ವಿಭಾಗದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಶಶಿ ಕುಮಾರ್ ಅವರು ಮಿನಿ ಕೂಪರ್ ಕಾರನ್ನು ಖರೀದಿಸಿದ ಖರೀದಿಸಿದ್ದಾರೆ. ಆಧುನಿಕ ಕೃಷಿ ಪದ್ಧತಿ ಮೂಲಕ ಶಶಿ ಕುಮಾರ್ ಅವರು ಹೆಚ್ಚು ಜನಪ್ರಿಯರಾಗಿದ್ದಾರೆ.

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಅನೂಪ್ ಆ್ಯಂಟೋನಿ ಅವರ ನಿರ್ದೇಶನದ ಮೆಹಬೂಬಾ ಚಿತ್ರದಲ್ಲಿ ಶಶಿ ಕುಮಾರ್ ಅವರು ನಾಯಕ ನಟನಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಅಂತಿಮ ಹಂತದಲ್ಲಿವೆ. ಈ ಚಿತ್ರ ತೆರೆಗೆ ಬರುವುದಕ್ಕೂ ಮುನ್ನವೇ ಶಶಿ ಕುಮಾರ್ ಅವರು ಮತ್ತೊಂದು ಚಿತ್ರದಲ್ಲಿ ಹಚ್ಚಲಿದ್ದಾರೆ. ಶುಗರ್ ಫ್ಯಾಕ್ಟರಿ ಚಿತ್ರದಲ್ಲಿ ಮಹತ್ವವಾದ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಇನ್ನು ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್ ಅವರು ಖರೀದಿಸಿರುವುದು ಮಿನಿ ಕೂಪರ್ ಕಂಟ್ರಿಮ್ಯಾನ್ ಮಾದರಿ ಆಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಅವರು ಖರೀದಿಸುವ ಮಿನಿ ಕಾರು ರೆಡ್ ಬಣ್ಣದಲ್ಲಿದೆ. ಹೊಸ ಕಾರಿನ ಚಿತ್ರವನ್ನು ಶಶಿ ಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಸಂತಸವನ್ನು ಹಂಚಿಕೊಂಡಿದ್ದಾರೆ.

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಮಿನಿ ಕೂಪರ್ ಕಂಟ್ರಿಮ್ಯಾನ್ ಇದರ ಮಾದರಿಯನ್ನು ಅನುಗುಣವಾಗಿ 1598 ಸಿಸಿ - 1998 ಸಿಸಿ ಎಂಜಿನ್ ಆಯ್ಕೆಗಳನ್ನು ಹೊಂದಿರುತ್ತದೆ. ಇದರ ಎಂಜಿನ್ ಗಳು 98.0 - 184.0 ಬಿಎಚ್‌ಪಿವರೆಗೆ ಪವರ್ ಅನ್ನು ಉತ್ಪಾದಿಸುತ್ತದೆ.

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಈ ಕಾರಿನಲ್ಲಿ ಪವರ್ ಸ್ಟೀರಿಂಗ್, ಪವರ್ ವಿಂಡೋಸ್, ಫ್ರಂಟ್ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ, ಏರ್ ಕಂಡಿಷನರ್, ಡ್ರೈವರ್ ಏರ್ ಬ್ಯಾಗ್, ಪಾಸೆಂಜರ್ ಏರ್ ಬ್ಯಾಗ್ ಮತ್ತು ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್ ನಂತಹ ಫೀಚರ್ ಗಳನ್ನು ಒಳಗೊಂಡಿದೆ.

MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಈ ಕಾರಿನಲ್ಲಿ ಆಕರ್ಷಕವಾಗಿರುವ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಈ ಕಾರಿನಲ್ಲಿ 350 ಲೀಟರ್ ಸಾಮರ್ಥ್ಯದ ಬೂಟ್ ಸ್ಪೆಸ್ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ 47 ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ.

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಇನ್ನು ಮಿನಿ ಕಂಪನಿಯು ಇತ್ತೀಚೆಗೆ ಹೊಸ ಕಂಟ್ರಿಮ್ಯಾನ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಮಿಮಿನಿ ಕಂಟ್ರಿಮ್ಯಾನ್ ನಿ ಕಂಟ್ರಿಮ್ಯಾನ್ ಕೂಪರ್ ಎಸ್ ಮತ್ತು ಕಂಟ್ರಿಮ್ಯಾನ್ ಕೂಪರ್ ಎಸ್ ಜೆಸಿಡಬ್ಲ್ಯೂ ಇನ್ಸ್ಪೈರ್ಡ್ ಎಂಬ ಎರಡೂ ವೆರಿಯೆಂಟ್ ಗಳಲ್ಲಿ ಲಭ್ಯವಿರುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

2021ರ ಮಿನಿ ಕಂಟ್ರಿಮ್ಯಾನ್ ಒಂದೇ ರೀತಿಯ ವಿನ್ಯಾಸ ಮತ್ತು ಸಿಲೂಯೆಟ್ ಅನ್ನು ಸಾಗಿಸುವುದರ ಜೊತೆಗೆ ಹಲವಾರು ರಿಫ್ರೆಶ್ ಸ್ಟೈಲಿಂಗ್ ನವೀಕರಣಗಳನ್ನು ಕೂಡ ಪಡೆದುಕೊಂಡಿದೆ. ಹೊಸ ಮಿನಿ ಕಂಟ್ರಿಮ್ಯಾನ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಐಷಾರಾಮಿ ಕಾರುಗಳಲ್ಲಿ ಒಂದಾಗಿದೆ.

ತಮ್ಮ ನೆಚ್ಚಿನ ಮಿನಿ ಕಾರನ್ನು ಖರೀದಿಸಿದ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್

ಮಿನಿ ಕಂಟ್ರಿಮ್ಯಾನ್ ಹಲವಾರು ಫೀಚರ್ ಗಳು ಮತ್ತು ಹಲವಾರು ತಂತ್ರಜ್ಙಾನಗಳನ್ನು ಒಳಗೊಂಡಿದೆ. ಇದು ತನ್ನ ವಿಭಾಗದಲ್ಲಿ ಅತ್ಯಂತ ಆಕರ್ಷಕ ಆಯ್ಕೆಯಾಗಿದೆ. ಮಿನಿ ಕಾರು ಸೆಲಬ್ರಿಟಿಗಳ ಮೆಚ್ಚಿನ ಆಯ್ಕೆಗಳಲ್ಲಿ ಒಂದಾಗಿದೆ.

Most Read Articles

Kannada
English summary
Shashi Kumar Gets Himself His Dream Car. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X