ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಭಾರತದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ದೇಶದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ರೂ.100ರ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು ಹಲವೆಡೆ ಪ್ರತಿಭಟನೆ ನಡೆಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಲಾಗುತ್ತಿದೆ.

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಹಿಂದಿನ ಯುಪಿಎ ಆಡಳಿತದ ಅವಧಿಯಲ್ಲಿ ಏರುತ್ತಿರುವ ಬೆಲೆಗಳನ್ನು ಪ್ರತಿಭಟಿಸಿ ಬಿಜೆಪಿ ಮಂಡಿಸಿದ್ದ ಮೀಮ್ಸ್ ಹಾಗೂ ಪ್ರತಿಭಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಉಲ್ಲೇಖಿಸುವ ಮೂಲಕ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಈ ಸನ್ನಿವೇಶದಲ್ಲಿ ಮಾತನಾಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಪಾರಾಗಲು ಇಂಧನ ಚಾಲಿತ ವಾಹನಗಳ ಬಳಕೆಯನ್ನು ತ್ಯಜಿಸಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಿ ಎಂದು ಜನರಿಗೆ ಸಲಹೆ ನೀಡಿದ್ದಾರೆ.

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದನ್ನು ಒಪ್ಪಿಕೊಂಡ ಅವರು, ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗುವುದು ಉತ್ತಮ ಮಾರ್ಗವಾಗಿದೆ. ಜೊತೆಗೆಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿಯಾಗಿವೆ ಎಂದು ಹೇಳಿದರು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಈ ಹಿಂದೆ ನಿತಿಶ್ ಕುಮಾರ್ ರವರು ಎಲೆಕ್ಟ್ರಿಕ್ ವಾಹನವನ್ನು ಬಳಸಿ ಉಳಿದ ರಾಜಕಾರಣಿಗಳಿಗೆ ಆದರ್ಶಪ್ರಾಯರಾಗಿದ್ದರು. ಅವರು ಟಾಟಾ ಟಿಗೊರ್ ಇವಿ ಎಲೆಕ್ಟ್ರಿಕ್ ಕಾರನ್ನು ಬಳಸಿದ್ದರು.

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಟಾಟಾ ಮೋಟಾರ್ಸ್ ಕಂಪನಿಯು ಈ ಎಲೆಕ್ಟ್ರಿಕ್ ಕಾರನ್ನು ಕಮರ್ಷಿಯಲ್ ವಾಹನ ವಿಭಾಗದಲ್ಲಿ ಮಾರಾಟ ಮಾಡುತ್ತದೆ. ಇದರ ಜೊತೆಗೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ವೈಯಕ್ತಿಕ ಬಳಕೆಗಾಗಿ ಮಾರಾಟ ಮಾಡುತ್ತದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಟಾಟಾ ಮೋಟಾರ್ಸ್ ಕಂಪನಿಯು ಈ ಎಲೆಕ್ಟ್ರಿಕ್ ಕಾರ್ ಅನ್ನು ಎಕ್ಸ್‌ಎಂ, ಎಕ್ಸ್‌ ಝಡ್ ಹಾಗೂ ಎಕ್ಸ್‌ ಝಡ್ ಪ್ಲಸ್ ಎಂಬ ಮಾದರಿಗಳಲ್ಲಿ ಮಾರಾಟ ಮಾಡುತ್ತದೆ. ಈ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ ರೂ.13.99 ಲಕ್ಷಗಳಾದರೆ, ಗರಿಷ್ಠ ಬೆಲೆ ರೂ.16.25 ಲಕ್ಷಗಳಾಗಿದೆ.

ಪೆಟ್ರೋಲ್, ಡೀಸೆಲ್ ವಾಹನಗಳನ್ನು ತ್ಯಜಿಸಲು ಕರೆ ನೀಡಿದ ಮುಖ್ಯಮಂತ್ರಿ

ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ದರಗಳಾಗಿವೆ. ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 312 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Bihar Chief Minister asks people to use electric vehicles instead of petrol diesel vehicles. Read in Kannada.
Story first published: Friday, February 19, 2021, 20:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X