ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಪರಿಸರವನ್ನು ಮಾಲಿನ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಿಹಾರ ಸರ್ಕಾರವು 12 ಹೊಸ ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಆರಂಭಿಸಿದೆ. ಕಳೆದ ಸೋಮವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇವೆಗೆ ಚಾಲನೆ ನೀಡಿದ್ದಾರೆ.

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾವು ಈಗಾಗಲೇ ಎಲೆಕ್ಟ್ರಿಕ್ ಕಾರುಗಳನ್ನು ಬಳಸುತ್ತಿದ್ದೇವೆ ಎಂದು ಹೇಳಿದರು. ಎಲೆಕ್ಟ್ರಿಕ್ ವಾಹನಗಳು ಕಾರ್ಬನ್ ಡೈ ಆಕ್ಸೈಡ್ ಹೊರಸೂಸುವುದಿಲ್ಲ. ಜೊತೆಗೆ ಪರಿಸರ ಸ್ನೇಹಿಯಾಗಿರುತ್ತವೆ. ಈ ಕಾರಣಕ್ಕೆ ಸಾಮಾನ್ಯ ಜನರ ಅನುಕೂಲಕ್ಕಾಗಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರವನ್ನು ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ತಿಳಿಸಿದರು.

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಸಚಿವ ಸಂಪುಟ ಸಭೆಯ ನಿರ್ಧಾರದಂತೆ 12 ಹೊಸ ಎಲೆಕ್ಟ್ರಿಕ್ ಬಸ್ಸುಗಳ ಸೇವೆಗೆ ಚಾಲನೆ ನೀಡಲಾಗಿದೆ. ಈ ಬಸ್ಸುಗಳಲ್ಲಿ ಎರಡು ಬಸ್ಸುಗಳು ಪಾಟ್ನಾ-ರಾಜ್‌ಗೀರ್ ಮಾರ್ಗದಲ್ಲಿ ಹಾಗೂ ಪಾಟ್ನಾ-ಮುಜಾಫರ್ಪುರ ಮಾರ್ಗದಲ್ಲಿ 2 ಎಲೆಕ್ಟ್ರಿಕ್ ಬಸ್‌ಗಳು ಸಂಚರಿಸಲಿವೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಉಳಿದ 8 ಎಲೆಕ್ಟ್ರಿಕ್ ಬಸ್ಸುಗಳು ಪಾಟ್ನಾದ ವಿವಿಧ ಮಾರ್ಗಗಳಲ್ಲಿ ಸಂಚರಿಸಲಿವೆ. ಈ ಎಲೆಕ್ಟ್ರಿಕ್ ಬಸ್ಸುಗಳಿಗೆ ಚಾಲನೆ ನೀಡಿದ ನಂತರ ಬಿಹಾರ ವಿಧಾನಸಭೆ ಆವರಣದಲ್ಲಿ ಬಸ್ ಅನಿರೀಕ್ಷಿತವಾಗಿ ಅಪಘಾತಕ್ಕೀಡಾಗಿದೆ.

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಕೆಲವು ಸಚಿವರು ಹಾಗೂ ಶಾಸಕರನ್ನು ಡ್ರಾಪ್ ಮಾಡಿದ ನಂತರ ಬಸ್‌ ಚಾಲಕ ಅಸೆಂಬ್ಲಿ ವೃತ್ತದಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಬಸ್ ಅನಿರೀಕ್ಷಿತವಾಗಿ ಅಪಘಾತಕ್ಕೀಡಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಈ ಸ್ಥಳವು ಪ್ರಮುಖ ಪ್ರದೇಶವಾದ ಕಾರಣ ಈ ಅಪಘಾತದಿಂದಾಗಿ ಸ್ವಲ್ಪ ಗೊಂದಲ ಉಂಟಾಗಿತ್ತು. ಈ ಅಪಘಾತದಲ್ಲಿ ಯಾರೂ ಗಾಯಗೊಂಡಿಲ್ಲ. ಬಿಹಾರ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವಂತೆ ಜನರಿಗೆ ಉತ್ತೇಜನ ನೀಡುತ್ತಿದೆ.

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಕೇಂದ್ರ ಸರ್ಕಾರದ ಜೊತೆಗೆ ಕರ್ನಾಟಕ, ದೆಹಲಿ, ಗುಜರಾತ್, ಕೇರಳ, ತೆಲಂಗಾಣ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳು ವಾಯುಮಾಲಿನ್ಯದ ಸಮಸ್ಯೆಯನ್ನು ಕಡಿಮೆ ಮಾಡಲು ಹಾಗೂ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಿ ದೇಶದ ಆರ್ಥಿಕತೆಯನ್ನು ಹೆಚ್ಚಿಸಲು ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಉತ್ತೇಜನ ನೀಡುತ್ತಿವೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಇದರ ಅಂಗವಾಗಿ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ, ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವಲ್ಲಿ ದೆಹಲಿ ಸರ್ಕಾರವು ಇತರ ರಾಜ್ಯಗಳಿಗಿಂತ ಮುಂದಿದೆ.

ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಲ್ಲದೆ ಸಿಎನ್‌ಜಿಯಂತಹ ಪರ್ಯಾಯ ಇಂಧನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ನಂತರ ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ಪರಿಚಯಿಸುವ ಸಾಧ್ಯತೆಗಳಿವೆ.

Most Read Articles

Kannada
English summary
Bihar CM flags off low floor electric buses. Read in Kannada.
Story first published: Wednesday, March 3, 2021, 13:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X