Just In
- 26 min ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 2 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 4 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 14 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
'ಕೋಟಿಗೊಬ್ಬ' ಸುದೀಪ್ ನೋಡಿ ಅಭಿಮಾನಿಗಳು ಫುಲ್ ಖುಷ್
- News
ಒಕ್ಕಲಿಗರ ಸಂಘದ ಚುನಾವಣೆ ನಡೆಸಲು ಐಎಎಸ್ ಅಧಿಕಾರಿ ನೇಮಕ
- Sports
2ನೇ ಟೆಸ್ಟ್ನಲ್ಲಿ ರೋಹಿತ್ ಸಿಡಿಸಿದ ಶತಕ ಭಾರತಕ್ಕೆ ಸರಣಿಯನ್ನು ನಿರ್ಧರಿಸಿತು: ವಿರಾಟ್ ಕೊಹ್ಲಿ
- Finance
ಕ್ರಿಪ್ಟೋಕರೆನ್ಸಿ ಬಗ್ಗೆ ಕುತೂಹಲದ ಹೇಳಿಕೆ ಕೊಟ್ಟ ಸಚಿವ ಠಾಕೂರ್
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ತನ್ನ ಹೊಸ ಮಾದರಿಯ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಆವೃತ್ತಿಯು ಸ್ಟ್ಯಾಂಡರ್ಡ್ 3 ಸೀರಿಸ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಮಾದರಿಯು ಲಾಂಗ್‌ವೀಲ್ಹ್ ಸೌಲಭ್ಯದೊಂದಿಗೆ ಹೆಚ್ಚಿನ ಮಟ್ಟದ ಒಳಾಂಗಣ ಪಡೆದುಕೊಂಡಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ. ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಮಾದರಿಯನ್ನು ಎರಡು ಪೆಟ್ರೋಲ್ ಆವೃತ್ತಿಗಳಲ್ಲಿ ಮತ್ತು ಡೀಸೆಲ್ ಮಾದರಿಯಲ್ಲಿ ಖರೀದಿ ಮಾಡಬಹುದಾಗಿದೆ.

3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಕಾರು ಮಾದರಿಯು 330ಎಲ್ಐ ಲಗ್ಷುರಿ ಲೈನ್, 330ಎಲ್ ಎಂ ಸ್ಪೋರ್ಟ್ ಮತ್ತು 320ಎಲ್‌ಡಿ ಲಗ್ಷುರಿ ಲೈನ್ ಹೊಂದಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಕಾರು ಮಾದರಿಯು ರೂ.51.50 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 53.90 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಹೊಸ ಕಾರು ಮಾದರಿಯನ್ನು ಇದೇ ತಿಂಗಳಾಂತ್ಯಕ್ಕೆ ವಿತರಣೆ ಆರಂಭಿಸಿರುವ ಬಿಎಂಡಬ್ಲ್ಯು ಕಂಪನಿಯು ರೂ. 50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರು ಖರೀದಿ ಮಾಡುವ ಮೊದಲ 50 ಗ್ರಾಹಕರಿಗೆ ಕಂಪನಿಯು ರೂ. 1 ಲಕ್ಷ ಮೌಲ್ಯದ ಕಂಫರ್ಟ್ ಪ್ಯಾಕೇಜ್ ಘೋಷಣೆ ಮಾಡಿದೆ.

ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಿರುವ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಯೆಂತೆ ವಿನ್ಯಾಸವನ್ನು ಹೊಂದಿದ್ದರೂ ಸಹ ಲಾಂಗ್ ವೀಲ್ಹ್‌ಬೆಸ್ ಸೌಲಭ್ಯದಿಂದಾಗಿ ಹೊಸ ಕಾರಿನ ಒಳಾಂಗಣ ವಿನ್ಯಾಸವು ಸಾಕಷ್ಟು ಆಕರ್ಷಕವಾಗಿದೆ. ಹೊಸ ಕಾರು 4,819 ಎಂಎಂ(ಸ್ಟ್ಯಾಂಡರ್ಡ್ ಮಾದರಿಗಿಂತ 110 ಎಂಎಂ ಹೆಚ್ಚು) ಉದ್ದ, 1,827 ಎಂಎಂ ಅಗಲ, 1,463 ಎಂಎಂ ಎತ್ತರ ಮತ್ತು 2,961 ಎಂಎಂ ವೀಲ್ಹ್‌ಬೆಸ್ ಹೊಂದಿದೆ.

3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಯೆಂತೆ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್, ಟರ್ನ್ ಇಂಡಿಕೇಟರ್, ಆಕರ್ಷಕವಾದ ಫ್ರಂಟ್ ಗ್ರಿಲ್, ಸ್ಟೈಲಿಷ್ ಆಗಿರುವ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, 3ಡಿ ಎಲ್ಇಡಿ ಲೈಟ್ಸ್ ಮತ್ತು ಪನೊರಮಿಕ್ ಸನ್‌ರೂಫ್ ಹೊಂದಿದೆ.

ಹೊಸ ಕಾರಿನ ಒಳಭಾಗವು ಕೂಡಾ ಸಾಕಷ್ಟು ಆಕರ್ಷಕವಾಗಿದ್ದು, ಲಾಂಗ್ ವೀಲ್ಹ್‌ಬೆಸ್ ಪರಿಣಾಮ ಮುಂಭಾಗದ ಮತ್ತು ಹಿಂಭಾಗದ ಪ್ರಯಾಣಿಕರಿಗೆ ಅರಾಮದಾಯಕವಾದ ಕ್ಯಾಬಿನ್, ಪ್ರೀಮಿಯಂ ಲೆದರ್ ಆಸನಗಳು, 10.25 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಐಡ್ರೈವ್ ಟೆಕ್ನಾಲಜಿ ಪ್ರೇರಣೆಯೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೌಲಭ್ಯಗಳಿವೆ.

ಇದಲ್ಲದೆ ಹೊಸ ಕಾರಿನಲ್ಲಿ ಮಲ್ಟಿ ಜೋನ್ ಕ್ಲೈಮೆಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೊಲ್, ಸ್ಟ್ರೀರಿಂಗ್ ಮೌಟೆಂಡ್ ಕಂಟ್ರೋಲ್ಸ್ ಸೇರಿದಂತೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವ ಹಲವಾರು ಫೀಚರ್ಸ್‌ಗಳನ್ನು ಜೋಡಿಸಲಾಗಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಮಾದರಿಯಲ್ಲಿ 330ಎಲ್ಐ ಲಗ್ಷುರಿ ಲೈನ್, 330ಎಲ್ ಎಂ ಸ್ಪೋರ್ಟ್ ಮಾದರಿಗಳು 2.0-ಲೀಟರ್ ಟ್ವಿನ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಮತ್ತು 320ಎಲ್‌ಡಿ ಲಗ್ಷುರಿ ಲೈನ್ ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದೆ.

2.0-ಲೀಟರ್ ಟ್ವಿನ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು 258-ಬಿಎಚ್‌ಪಿ, 400-ಎನ್ಎಂ ಟಾರ್ಕ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 188-ಬಿಎಚ್‌ಪಿ, 400-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಹೊಸ ಕಾರು ಮರ್ಸಿಡಿಸ್ ಬೆಂಝ್ ಸಿ ಕ್ಲಾಸ್ ಮತ್ತು ವೊಲ್ವೊ ಎಸ್60 ಕಾರುಗಳಿಗೆ ಪ್ರಬಲ ಪೈಪೋಟಿ ನೀಡಲಿದೆ.