Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಎಂಡಬ್ಲ್ಯು ವೆಬ್‌ಸೈಟ್‌ನಿಂದ ಮರೆಯಾಯ್ತು 320ಡಿ ಸ್ಪೋರ್ಟ್ ಕಾರಿನ ಹೆಸರು
ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ 320ಡಿ ಸ್ಪೋರ್ಟ್ ವೆರಿಯೆಂಟ್ ಅನ್ನು ಭಾರತದಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಬಿಎಂಡಬ್ಲ್ಯು ಇಂಡೀಯಾ ತನ್ನ ಅಧಿಕೃತ ವೆಬ್‌ಸೈಟ್‌ನಿಂದ 320ಡಿ ಸ್ಪೋರ್ಟ್ ವೆರಿಯೆಂಟ್ ಹೆಸರನ್ನು ತೆಗೆದುಹಕಲಾಗಿದೆ.

ಆದರೆ ಬಿಎಂಡಬ್ಲ್ಯು 320ಡಿ ಐಷಾರಾಮಿ ಲೈನ್ ಟ್ರಿಮ್‌ನಲ್ಲಿ ರೂ.47.9 ಲಕ್ಷ ಗಳ ಎಕ್ಸ್‌ಶೋರೂಂ ಬೆಲೆಯಲ್ಲಿ ಮಾತ್ರ ಖರೀದಿಸಬಹುದು. ಇದರ 320ಡಿ ಸ್ಪೋರ್ಟ್ ವೆರಿಯೆಂಟ್ ಮಾತ್ರ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಬಿಎಂಡಬ್ಲ್ಯು 3 ಸೀರಿಸ್ 330ಐ ಪೆಟ್ರೋಲ್ ವೆರಿಯೆಂಟ್ ಗಳಾದ ಸ್ಪೋರ್ಟ್ ಮತ್ತು ಎಂ ಸ್ಪೋರ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಬಿಎಂಡಬ್ಲ್ಯು 320ಡಿ ಸ್ಪೋರ್ಟ್ ವೆರಿಯೆಂಟ್ ತನ್ನ 3-ಸೀರಿಸ್ ಬ್ರ್ಯಾಂಡ್ ಎಂಟ್ರಿ ಲೆವೆಲ್ ಡೀಸೆಲ್ ರೂಪಾಂತರವಾಗಿದೆ.

ಈ ಬಿಎಂಡಬ್ಲ್ಯು 320ಡಿ ಸ್ಪೋರ್ಟ್ ಮಾದರಿಯಲ್ಲಿ ಎಲ್ಇಡಿ ಹೆಡ್ ಲೈಟ್, ಎಲ್ಇಡಿ ಫಾಗ್ ಲೈಟ್ಸ್, ಪನೋರಮಿಕ್ ಸನ್ ರೂಫ್ ಮತ್ತು ಮೂರು ಹಂತದ ಕ್ಲೈಮೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಈ ಬಿಎಂಡಬ್ಲ್ಯು 320ಡಿ ಸ್ಪೋರ್ಟ್ ವೆರಿಯೆಂಟ್ ಲೆದರ್ ಸ್ಟೀಯರಿಂಗ್ ವ್ಹೀಲ್, ಹತ್ತು-ಸ್ಪೀಕರ್ ಆಡಿಯೊ ಸಿಸ್ಟಂ ಮತ್ತು ಅನಲಾಗ್ ಸ್ಟೈಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಈ ಕಾರು ಆಲ್ಪೈನ್ ವೈಟ್, ಬ್ಲ್ಯಾಕ್ ಸಫೈರ್ ಮತ್ತು ಮೆಡಿಟರೇನಿಯನ್ ಬ್ಲೂ ಎಂಬ ಮೂರು ಬಣ್ಣ ಆಯ್ಕೆಗಳನ್ನು ಒಳಗೊಂಡಿದೆ.

ಈ ಹೊಸ ಬಿಎಂಡಬ್ಲ್ಯು ಕಾರಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ಆಂಬಿಯೆಂಟ್ ಲೈಟಿಂಗ್ ಮತ್ತು ಪಾರ್ಕಿಂಗ್ ಅಸಿಸ್ಟೆಂಟ್‌ನಂತಹ ಹೆಚ್ಚಿನ ತಯಾರಕರು ನೀಡುವ ಫೀಚರುಗಳನ್ನು ಒಳಗೊಂಡಿಲ್ಲ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಬಿಎಂಡಬ್ಲ್ಯು 320ಡಿ ಕಾರಿನಲ್ಲಿ 2.0 ಲೀಟರ್ ನಾಲ್ಕು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 188 ಬಿಹೆಚ್ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಫೀಡ್ ಸ್ಟೆಪ್ಟ್ರಾನಿಕ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಇತ್ತೀಚೆಗೆ ಬಿಡುಗಡೆಗೊಂಡ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಟೈಲ್ ಲೈಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, 12.3 ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, 10.25 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ, 3ಡಿ ನ್ಯಾವಿಗೇಷನ್, ರಿಯರ್ ಪಾರ್ಕ್ ಅಸಿಸ್ಟ್, ಬಿಎಂಡಬ್ಲ್ಯು ಕನೆಕ್ಟಿವಿಟಿ ಕಾರು ತಂತ್ರಜ್ಞಾನ, ವೈರ್‌ಲೆಸ್ ಚಾರ್ಜಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಬಿಎಂಡಬ್ಲ್ಯು 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಮೆಕ್ಯಾನಿಕಲ್‌ಗಳ ವಿಷಯದ ಬಗ್ಗೆ ಹೇಳುವುದಾದರೆ, ಇದರಲ್ಲಿ 2.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 255 ಬಿಹೆಚ್ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಹೊಸ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಅನ್ನು ಈ ಸಾಲಿನಲ್ಲಿ ಸೇರಿಸುವುದರೊಂದಿಗೆ, ಬಿಎಂಡಬ್ಲ್ಯು ಐಷಾರಾಮಿ ಸೆಡಾನ್ ವಿಭಾಗದಲ್ಲಿ ತನ್ನ ಸ್ಥಾನವನ್ನು ಬಲಪಡಿಸಿದೆ. ಇದು ಅತಿ ಉದ್ದದ ಸಲೂನ್ ಆಗಿದ್ದು, ಸಾಕಷ್ಟು ಹಿಂಭಾಗದ ಸೀಟ್ ಮತ್ತು ಡ್ರೈವರ್ ಅಸಿಸ್ಟ್ ಅನ್ನು ಹೊಂದಿದೆ. ಇದರಿಂದ ಬಿಎಂಡಬ್ಲ್ಯು 3 ಸೀರಿಸ್ 320ಡಿ ಸ್ಪೋರ್ಟ್ ವೆರಿಯೆಂಟ್ ಅನ್ನು ಸ್ಥಗಿತಗೊಳಿಸಲಾಗಿದೆ.