ಕೋವಿಡ್ ಸಂಕಷ್ಟ: ಕೇಂದ್ರ ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಹರಸಾಹಸಪಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್‌ನೊಂದಿಗೆ ಲೌಕ್‌ಡೌನ್ ಮುಂದುವರಿಸಲಾಗುತ್ತಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ವಿವಿಧ ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಮೊಬೈಲ್ ಕಂಪನಿಗಳು ಸಾಕಷ್ಟು ಸಹಕಾರ ನೀಡುತ್ತಿದೆ.

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಆರ್ಥಿಕ ಸಂಕಷ್ಟದ ನಡುವೆಯೂ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಬಿಎಂಡಬ್ಲ್ಯು ಗ್ರೂಪ್ ಕೂಡಾ ಕೋವಿಡ್ ನಿಯಂತ್ರಣಕ್ಕಾಗಿ ಹಣಕಾಸಿನ ನೆರವು ನೀಡಿದೆ.

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಕಳೆದ ವರ್ಷ ಕೋವಿಡ್ ಹೆಚ್ಚಳವಾಗಿದ್ದ ಸಂದರ್ಭದಲ್ಲೂ ಕೇಂದ್ರ ಸರ್ಕಾರಕ್ಕೆ ಸುಮಾರು ರೂ. 3 ಕೋಟಿ ಆರ್ಥಿಕ ನೆರವು ನೀಡಿದ್ದ ಬಿಎಂಡಬ್ಲ್ಯು ಗ್ರೂಪ್ ಇದೀಗ 2ನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಸೇವೆಗಳಿಗಾಗಿ ರೂ.5 ಕೋಟಿ ದೇಣಿಗೆ ನೀಡಿದ್ದು, ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಇನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ಬಿಎಂಡಬ್ಲ್ಯು ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ನೆರವು ನೀಡಿವೆ.

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಕೋವಿಡ್ ನಿಯಂತ್ರಣಕ್ಕಾಗಿ ಪ್ರಮುಖ ವಾಹನ ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿರುವುದಲ್ಲದೆ ಕೋವಿಡ್ ಕೇರ್‌ಗಳಿಗೆ ಚಾಲನೆ ನೀಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಸರ್ಕಾರಕ್ಕೆ ರೂ.8 ಕೋಟಿ ದೇಣಿಗೆ ನೀಡಿದ ಬಿಎಂಡಬ್ಲ್ಯು ಗ್ರೂಪ್

ಸಾಂಕ್ರಾಮಿಕ ರೋಗದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ಆಟೋ ಕಂಪನಿಗಳ ಸಾಮಾಜಿಕ ಕಳಕಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ದೇಶಿಯ ವಾಹನ ಉತ್ಪಾದನಾ ಕಂಪನಿಗಳು ಹೆಚ್ಚಿನ ಮಟ್ಟದ ಸಹಕಾರ ನೀಡುತ್ತಿವೆ.

Most Read Articles

Kannada
English summary
BMW Group India Pledges Rs 8 Crore To Fight Against Ongoing Covid-19 Pandemic
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X