Just In
Don't Miss!
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- News
ಖಾತೆ ಹಂಚಿಕೆ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಅವಧಿಯ ಮಾರಾಟ ವರದಿಯನ್ನು ಬಹಿರಂಗಪಡಿಸಿದ ಬಿಎಂಡಬ್ಲು ಗ್ರೂಪ್
ಬಿಎಂಡಬ್ಲ್ಯು ಗ್ರೂಪ್ ಭಾರತೀಯ ಮಾರುಕಟ್ಟೆಯಲ್ಲಿ 2020ರ ಅವಧಿಯ ವಾಹನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ವರ್ಷ ಬಿಎಂಡಬ್ಲ್ಯು ಮತ್ತು ಮಿನಿ ಬ್ರ್ಯಾಂಡ್‌ಗಳು ಸುಮಾರು 6,604 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

2020ರ ಅವಧಿಯಲ್ಲಿ ಬಿಎಂಡಬ್ಲ್ಯು ಬ್ರ್ಯಾಂಡ್ 6,092 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದರೆ, ಮಿನಿ ಇಂಡಿಯಾ ಬ್ರ್ಯಾಂಡ್ 512 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಬಿಎಂಡಬ್ಲ್ಯು ಮೋಟೊರಾಡ್ ಬ್ರ್ಯಾಂಡ್ ಕಳೆದ ವರ್ಷ ಬೈಕುಗಳ 2,563 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಬಿಎಂಡಬ್ಲ್ಯು ಕಂಪನಿಯು ಭಾರತೀಯ ಮಾರುಕಟ್ಟೆ ಹಲವು ಜನಪ್ರಿಯ ಕಾರುಗಳು ಮಾರಾಟ ಮಾಡಲಾಗುತ್ತಿದೆ. ಬಿಎಂಡಬ್ಲ್ಯು ಸಿಬಿಯು ಯುನಿಟ್ ಗಳಾಗಿ ಅಮದು ಮಾಡಿಕೊಂಡು ಕೂಡ ಮಾರಾಟ ಮಾಡುತ್ತಾರೆ.

ಬಿಎಂಡಬ್ಲ್ಯು ಸರಣಿಯಲ್ಲಿ 2 ಸೀರಿಸ್ ಜಿಟಿ, 3 ಸೀರಿಸ್ ಜಿಟಿ, 5 ಸೀರಿಸ್, 6 ಸೀರಿಸ್ ಜಿಟಿ, 7 ಸೀರಿಸ್, ಎಕ್ಸ್ 1, ಎಕ್ಸ್ 3, ಎಕ್ಸ್ 4, ಎಕ್ಸ್ 5, ಎಕ್ಸ್ 7 ಮತ್ತು ಮಿನಿ ಕಂಟ್ರಿಮ್ಯಾನ್ ಕಂಪನಿಯ ಸ್ಥಳೀಯವಾಗಿ ಉತ್ಪಾದಿಸುವ ಮಾದರಿಗಳ ಭಾಗವಾಗಿದೆ.
MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಇನ್ನು ಬಿಎಂಡಬ್ಲ್ಯು ಕಂಫನಿಯು 8 ಸೀರಿಸ್ ಜಿಸಿ, ಎಕ್ಸ್ 6, ಎಂ 2 ಕಾಂಪಿಟೀಷನ್, ಎಂ 5 ಸ್ಪರ್ಧೆ, ಎಂ 8 ಕೂಪೆ, ಎಕ್ಸ್ 3 ಎಂ ಮತ್ತು ಎಕ್ಸ್ 5 ಎಂ ಮಾದರಿಗಳನ್ನು ಸಿಬಿಯು (ಕಂಪ್ಲೀಟ್ ಬಿಲ್ಟ್ ಯುನಿಟ್) ಮಾರ್ಗದ ಮೂಲಕ ಆಮದು ಮಾಡಿಕೊಳ್ಳುತ್ತದೆ.

ತ್ತೀಚೆಗೆ ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.94 ಕೋಟಿಗಳಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಪರ್ಫಾಮೆನ್ಸ್-ಆಧಾರಿತ ಎಸ್‍ಯುವಿಯಾಗಿದೆ. ಈ ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಈ ಹೊಸ ಎಸ್‍ಯುವಿಗಾಗಿ ಯಾವುದೇ ಬಿಎಂಡಬ್ಲ್ಯು ಅಧಿಕೃತ ಡೀಲರ್ ಬಳಿ ಅಥವಾ ಆನ್‌ಲೈನ್ ಮೂಲಕ ಬುಕ್ಕಿಂಗ್ ಅನ್ನು ಮಾಡಬಹುದು.

ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಸಿಬಿಯು(ಕಂಪ್ಲೀಟ್ ಬಿಲ್ಟ್ ಯುನಿಟ್) ಆಗಿ ಭಾರತೀಯ ಮಾರುಕಟ್ಟೆಗೆ ಆಮದು ಮಾಡಿಕೊಳ್ಳಲಾಗುವುದು. ಶೀಘ್ರದಲ್ಲೇ ಬಿಎಂಡಬ್ಲ್ಯು ತನ್ನ ಈ ಹೊಸ ಎಕ್ಸ್5 ಎಂ ಕಾಂಪಿಟೇಷನ್ ಎಸ್‍ಯುವಿಯ ವಿತರಣೆಯನ್ನು ಪ್ರಾರಂಭಿಸಬಹುದು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಹೊಸ ಬಿಎಂಡಬ್ಲ್ಯು ಎಕ್ಸ್5 ಎಂ ಕಾಂಪಿಟೇಷನ್ ಭಾರತೀಯ ಮಾರುಕಟ್ಟೆಯಲ್ಲಿ ರೇಂಜ್ ರೋವರ್ ಸ್ಪೋರ್ಟ್ ಎಸ್‌ವಿಆರ್, ಪೋರ್ಷೆ ಕೇಯೆನ್ ಟರ್ಬೊ ಮತ್ತು ಮರ್ಸಿಡಿಸ್-ಎಎಂಜಿ ಜಿ63 ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಇನ್ನು ಮಿನಿ ಬ್ರ್ಯಾಂಡ್ ತನ್ನ ಕೂಪರ್ ಮಾದರಿಯ ಸ್ಪೆಷಲ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇನ್ನು ಬಿಎಂಡಬ್ಲ್ಯು ಮೋಟೊರಾಡ್ ಭಾರತದಲ್ಲಿ ತನ್ನ ಆರ್ 18, ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳನ್ನು ಮಾರಾಟಗೊಳಿಸುತ್ತಿದಾರೆ.