ಮುಂದಿನ ಆರು ತಿಂಗಳಿನಲ್ಲಿ ಮೂರು ಹೊಸ ಇವಿ ಕಾರುಗಳನ್ನು ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಬಿಎಂಡಬ್ಲ್ಯು ಇಂಡಿಯಾ(BMW India) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ಕಾರು ಮಾರಾಟವನ್ನು ತೀವ್ರಗೊಳಿಸುತ್ತಿದ್ದು, ಮರ್ಸಿಡಿಸ್ ಬೆಂಝ್ ಕಂಪನಿಗೆ ಪೈಪೋಟಿಯಾಗಿ ಮತ್ತಷ್ಟು ಹೊಸ ಕಾರುಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಭಾರತದಲ್ಲಿ ಸದ್ಯ ಐಷಾರಾಮಿ ಕಾರುಗಳ ಮಾರಾಟ ವಿಭಾಗದಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಗೆ ಮತ್ತು ಬಿಎಂಡಬ್ಲ್ಯು ಕಂಪನಿಯ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಬಿಎಂಡಬ್ಲ್ಯು ಹೊಸ ಕಾರು ಉತ್ಪನ್ನಗಳು ಮರ್ಸಿಡಿಸ್‌ಗೆ ಪೈಪೋಟಿ ನೀಡುವ ತವಕದಲ್ಲಿವೆ. ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ಭಾರತದಲ್ಲಿ 2021ರ ಅವಧಿಗಾಗಿ 8 ಹೊಚ್ಚ ಹೊಸ ಕಾರು ಮಾದರಿಗಳನ್ನು, 9 ಫೇಸ್‌ಲಿಫ್ಟ್ ಕಾರು ಮಾದರಿಗಳನ್ನು ಮತ್ತು 8 ಹೊಸ ವೆರಿಯೆಂಟ್‌ಗಳನ್ನು ಪರಿಚಯಿಸಲಾಗುತ್ತಿದ್ದು, ಹೊಸ ಕಾರುಗಳ ಐಷಾರಾಮಿ ವಿಭಾಗದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿವೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಭಾರತದಲ್ಲಿ ಸದ್ಯ ವಿವಿಧ ಸರಣಿಗಳಲ್ಲಿ ಒಟ್ಟು 16 ಕಾರುಗಳ ಮಾರಾಟ ಹೊಂದಿರುವ ಬಿಎಂಡಬ್ಲ್ಯು ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಪ್ರಮುಖ ಆಕರ್ಷಣೆಯಾಗಿವೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಡೀಸೆಲ್ ಮತ್ತು ಪೆಟ್ರೋಲ್ ಚಾಲಿತ ಕಾರುಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ವಾಹನಗಳ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ಕೂಡಾ ಈಗಾಗಲೇ ವಿವಿಧ ಮಾದರಿಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಜ್ಜುಗೊಂಡಿದ್ದು, 2022ರ ವೇಳೆಗೆ ಶೇ.20 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳ ಮಾರಾಟವನ್ನು ಹೊಂದಿರುವುದಾಗಿ ಸ್ಪಷ್ಟಪಡಿಸಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಸ್ಪಷ್ಟನೆ ನೀಡಿರುವ ಬಿಎಂಡಬ್ಲ್ಯು ಕಂಪನಿಯು ಚಾರ್ಜಿಂಗ್ ಸೌಲಭ್ಯಗಳ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿದ್ದು, ಮುಂದಿನ ಆರು ತಿಂಗಳ ಅವಧಿಯಲ್ಲಿ ಪ್ರಮುಖ ಮೂರು ಇವಿ ಮಾದರಿಗಳನ್ನು ಬಿಡುಗಡೆ ಮಾಡುತ್ತಿರುವುದಾಗಿ ಲೈವ್‌ಮಿಂಟ್ ಸುದ್ದಿ ಸಂಸ್ಥೆಯೊಂದಿನ ಸಂದರ್ಶನದಲ್ಲಿ ಹೊಸ ಯೋಜನೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ದೇಶಿಯ ಮಾರುಕಟ್ಟೆಯಲ್ಲಿನ ಇವಿ ಕಾರುಗಳ ಬಿಡುಗಡೆಯ ವಿಳಂಬ ಕುರಿತು ಮಾತನಾಡಿರುವ ಬಿಎಂಡಬ್ಲ್ಯು ಇಂಡಿಯಾ ಮುಖ್ಯಸ್ಥರು ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯದ ಆಧಾರದ ಮೇಲೆ ಇವಿ ವಾಹನಗಳ ಭವಿಷ್ಯ ನಿಂತಿದ್ದು, ಹೆಚ್ಚಿನ ಸಂಖ್ಯೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಇವಿ ವಾಹನ ಮಾರಾಟಕ್ಕೆ ಪೂರಕವಾದ ಅಂಶ ಎಂದಿದ್ದಾರೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಭಾರತದಲ್ಲಿ ಇವಿ ಕಾರುಗಳ ಖರೀದಿಗೆ ಗ್ರಾಹಕರು ಆಸಕ್ತಿ ಹೊಂದಿದ್ದರೂ ಹೆಚ್ಚಿನ ಮಟ್ಟದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಲಭ್ಯವಿರದ ಹಿನ್ನಲೆಯಲ್ಲಿ ಹಿಂದೇಟು ಹಾಕುವಂತೆ ಮಾಡುತ್ತಿರುವ ಬಗ್ಗೆ ಮಾತನಾಡಿರುವ ಬಿಎಂಡಬ್ಲ್ಯು ಮುಖ್ಯಸ್ಥರು ಹೆಚ್ಚಿನ ಸಂಖ್ಯೆಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನು ಹೆಚ್ಚಿನ ಮಟ್ಟದ ಆಸಕ್ತಿ ತೋರುವ ಅವಶ್ಯಕತೆಯಿದೆ ಎಂದಿದ್ದಾರೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಸದ್ಯ ಕಳೆದ ವರ್ಷಕ್ಕಿಂತಲೂ ಪ್ರಸಕ್ತ ವರ್ಷದಲ್ಲಿ ಇವಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯು ದ್ವಿಗುಣಗೊಂಡಿರುವ ಬಗೆಗೆ ಹರ್ಷ ವ್ಯಕ್ತಪಡಿಸಿರುವ ಬಿಎಂಡಬ್ಲ್ಯು ಇಂಡಿಯಾ ಮುಖ್ಯಸ್ಥರು ಮೊದಲ ಹಂತವಾಗಿ ಪ್ರಮುಖ ಮೂರು ಇವಿ ಕಾರು ಮಾದರಿಗಳು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಮೊದಲ ಹಂತವಾಗಿ ಐಎಕ್ಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದ್ದು, ಎರಡನೇ ಕಾರು ಮಾದರಿಯಾಗಿ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಮತ್ತು ಮೂರನೇ ಕಾರು ಮಾದರಿಯಾಗಿ ಐ4 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಬಿಡುಗಡೆ ಮಾಡಲಿದೆ. ಹೊಸ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯು ಜರ್ಮನಿಯ ಡಿಂಗೋಲ್ಫಿಂಗ್ ಘಟಕದಲ್ಲಿ ನಿರ್ಮಾಣಗೊಂಡಿದ್ದು, ಹೊಸ ಇವಿ ಕಾರುಗಳನ್ನು ಬಿಎಂಡಬ್ಲ್ಯು ಕಂಪನಿಯು ಸದ್ಯ ಸಿಬಿಯು ಆಮದು ನೀತಿ ಅಡಿಯಲ್ಲಿಯೇ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡಲಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಹೊಸ ಐಎಕ್ಸ್ ಎಲೆಕ್ಟ್ರಿಕ್ ಎಸ್‌ಯುವಿ ಎರಡು ಎಲೆಕ್ಟ್ರಿಕ್ ಮೋಟಾರ್‌ಗಳನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಐದನೇ ತಲೆಮಾರಿನ ಪವರ್‌ಟ್ರೇನ್ ಅನ್ನು ಬಳಸುತ್ತದೆ ಎಂದು ಬಿಎಂಡಬ್ಲ್ಯು ಹೇಳಿದೆ. ಈ ಎಲೆಕ್ಟ್ರಿಕ್ ಎಸ್‍ಯುವಿಯು ಎಕ್ಸ್‌ಡ್ರೈವ್50 ಮತ್ತು ಎಕ್ಸ್‌ಡ್ರೈವ್40 ಎಂಬ ಎರಡು ರೂಪಾಂತರಗಳನ್ನು ಹೊಂದಿರುತ್ತದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಇದರಲ್ಲಿ 523 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಮೋಟಾರ್ ಅನ್ನು ನೀಡಲಾಗುತ್ತದೆ. ಯುರೋಪಿಯನ್ ಡಬ್ಲ್ಯುಎಲ್‌ಟಿಪಿ ವ್ಹೀಲ್ ಪ್ರಕಾರ ಬಿಎಂಡಬ್ಲ್ಯು ಐಎಕ್ಸ್ ಸಿಂಗಲ್ ಚಾರ್ಜ್‌ನಲ್ಲಿ 600ಕ್ಕೂ ಹೆಚ್ಚು ಕಿಲೋ ಮೀಟರ್ ಚಲಿಸುವಷ್ಟು ಸಮರ್ಥವಾಗಿದೆ ಎಂದು ಹೇಳಲಾಗಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಹಾಗೆಯೇ ಹೊಸ ಐ4 ಸೆಡಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಎಲೆಕ್ಟ್ರಿಕ್ ಮಾದರಿಗಳಿಂತಲೂ ಉತ್ತಮ ಮೈಲೇಜ್ ಮತ್ತು ತಂತ್ರಜ್ಞಾನ ಸೌಲಭ್ಯ ಹೊಂದಿದ್ದು, ಸ್ಪೋಟಿ ವಿನ್ಯಾಸದೊಂದಿಗೆ ಅಭಿವೃದ್ದಿಗೊಂಡಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

ಐ4 ಕಾರು ಮಾದರಿಯನ್ನು ಗ್ರ್ಯಾನ್ ಕೂಪೆ ಸರಣಿ ಮಾದರಿಗಳನ್ನು ವಿನ್ಯಾಸವನ್ನು ನಿರ್ಮಾಣ ಮಾಡಿರುವ ಬಿಎಂಡಬ್ಲ್ಯು ಕಂಪನಿಯು ಹೊಸ ಕಾರಿನ ಮೊದಲ ಚಿತ್ರವನ್ನು ಹಂಚಿಕೊಂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದೆ. ಹೊಸ ಐ4 ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಡ್ರೈವ್35, ಇಡ್ರೈವ್40 ಮತ್ತು ಟಾಪ್ ಎಂಡ್ ಮಾದರಿಯಾಗಿ ಎಂ50 ಪರ್ಫಾಮೆನ್ಸ್ ವೆರಿಯೆಂಟ್ ಹೊಂದಿರಲಿದ್ದು, ಪ್ರತಿ ಚಾರ್ಚ್‌ಗೆ ಗರಿಷ್ಠ 590 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ಇವಿ ಬಿಡುಗಡೆ ಮಾಡಲಿದೆ ಬಿಎಂಡಬ್ಲ್ಯು

390kW ಪವರ್ ಔಟ್‌ಪುಟ್‌ನೊಂದಿಗೆ 530 ಬಿಎಚ್‌ಪಿ ಉತ್ಪಾದನೆ ಹೊಂದಿರುವ ಹೊಸ ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಮೈಲೇಜ್ ವಿಚಾರದಲ್ಲೂ ಗಮನಸೆಳೆಯಲಿದ್ದು, ಕೇವಲ ನಾಲ್ಕು ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಪಡೆದುಕೊಳ್ಳುವ ಪರ್ಫಾಮೆನ್ಸ್ ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

More from DriveSpark

Article Published On: Friday, November 26, 2021, 13:06 [IST]
English summary
Bmw india to launch three electric vehicles in next 6 months details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+