Just In
- 10 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 12 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 13 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುರೋ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡ ಬಿಎಂಡಬ್ಲ್ಯು ಐಎಕ್ಸ್ ಇವಿ ಕಾರು
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ತನ್ನ ಹೊಸ ಐಎಕ್ಸ್ ಇವಿ ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಪರಿಚಯಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಐಎಕ್ಸ್ ಸೇಫ್ಟಿ ರೇಟಿಂಗ್ಸ್ ಬಹಿರಂಗಪಡಿಸಲಾಗಿದೆ.
ಬಿಎಂಡಬ್ಲ್ಯು ಐಎಕ್ಸ್ ಇವಿ ಕಾರು ಮಾದರಿಯು ಭಾರತದಲ್ಲೂ ಇದೇ ತಿಂಗಳು 13ರಂದು ಅನಾವರಣಗೊಳ್ಳುತ್ತಿದ್ದು, ಹೊಸ ಕಾರು ಹಲವಾರು ಐಷಾರಾಮಿ ವೈಶಿಷ್ಟ್ಯತೆಗಳೊಂದಿಗೆ ಗರಿಷ್ಠ ಮೈಲೇಜ್ ಹಾಗೂ ಪ್ರಯಾಣಿಕ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ. ಯುರೋ ಎನ್ಸಿಎಪಿಯಲ್ಲಿ ಹೊಸ ಕಾರು ಮಾದರಿಯು ಗರಿಷ್ಠ 5 ಅಂಕಗಳನ್ನು ತನ್ನದಾಗಿಸಿಕೊಂಡಿದ್ದು, ಹೈ ಸ್ಪೀಡ್ ಅಪಘಾತದಲ್ಲೂ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸುವಲ್ಲಿ ಯಶಸ್ವಿಯಾಗಿದೆ.
ಯುರೋ ಎನ್ಸಿಎಪಿಯಲ್ಲಿ ಹೊಸ ಐಎಕ್ಸ್ ಕಾರು ಮಾದರಿಯು ವಯಸ್ಕ ಪ್ರಯಾಣಿಕರಿಗೆ ಶೇ.91 ರಷ್ಟು ಸುರಕ್ಷತೆ ಒದಗಿಸಿದರೆ ಮಕ್ಕಳಿಗೆ ಶೇ.87 ರಷ್ಟು ಸುರಕ್ಷತೆ ಖಾತ್ರಿಪಡಿಸುತ್ತದೆ. ಹಾಗೆಯೇ ಪಾದಾಚಾರಿಗಳಿಗೆ ಆಗಬಹುದಾದ ಹಾನಿ ತಡೆಗಟ್ಟುವ ವಿಚಾರದಲ್ಲಿ ಹೊಸ ಕಾರು ಶೇ. 73 ರಷ್ಟು ಹಾನಿ ತಪ್ಪಿಸಲು ಶಕ್ತವಾಗಿದ್ದು, ಸೇಫ್ಟಿ ಅಸಿಸ್ಟ್ ಅಳವಡಿಕೆಯಲ್ಲಿ ಶೇ. 81 ಅಂಕಪಡೆದುಕೊಂಡಿದೆ.
ಹೊಸ ಕಾರು ಸದ್ಯ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಮುಂದಿನ ಕೆಲವೇ ತಿಂಗಳಿನಲ್ಲಿ ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.
ಹೊಸ ಐಎಕ್ಸ್ ಎಲೆಕ್ಟ್ರಿಕ್ ಎಸ್ಯುವಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್6 ಎಸ್ಯುವಿ ಮಾದರಿಗೆ ಸರಿಸಮನಾದ ವಿನ್ಯಾಸದೊಂದಿಗೆ ಅಭಿವೃದ್ದಿಗೊಂಡಿದ್ದು, ಅತ್ಯಾಧುನಿಕ ಪ್ಲಾಟ್ಫಾರ್ಮ್ ಆಧರಿಸಿರುವ ಐಎಕ್ಸ್ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಕೆನಕ್ಟಿವಿಟಿ ಸೌಲಭ್ಯಗಳನ್ನು ಹೊಂದಿರಲಿದೆ.
ಬಿಎಂಡಬ್ಲ್ಯು ಐಎಕ್ಸ್ನಲ್ಲಿರುವ ದೊಡ್ಡ ಕಿಡ್ನಿ ಗ್ರಿಲ್ ಅನ್ನು ಇಂಟಿಲಿಜಿಟೆಂಡ್ ಡ್ರೈವ್ಸ್ ಅಸಿಸ್ಟೆನ್ಸ್ ಟೆಕ್ನಾಲಜಿಗೆ ನೆರವಾಗುವಂತೆ ಅಳವಡಿಸಲಾಗಿದ್ದು, ಇದರಲ್ಲಿರುವ ರಾಡಾರ್ ಸಿಸ್ಟಂ, ಸೆನ್ಸಾರ್ ಗಳು ಮತ್ತು ಕ್ಯಾಮೆರಾಗಳು ಕಾರಿಗೆ ಗರಿಷ್ಠ ಸುರಕ್ಷತೆ ನೀಡಲಿವೆ.
ಹೊಸ ಬಿಎಂಡಬ್ಲ್ಯು ಐಎಕ್ಸ್ ವಿನ್ಯಾಸವು ವಿಶಿಷ್ಟವಾದ ಸಂರಚನೆಯೊಂದಿಗೆ ಭವಿಷ್ಯದ ಆಧಾರಿತ ಸ್ಟೈಲಿಂಗ್ ಹೊಂದಿದ್ದು, ಹೊಸ ಐಎಕ್ಸ್ ಬ್ರ್ಯಾಂಡ್ನ ಹೊಸ ಸ್ಕೇಲೆಬಲ್ ಆರ್ಕಿಟೆಕ್ಚರ್ ಅನ್ನು ಸಹ ಪರಿಚಯಿಸುತ್ತದೆ. ಜೊತೆಗೆ ಕಾರಿನ ತೂಕವನ್ನು ಕಡಿತಗೊಳಿಸಲ ಅಲ್ಯುಮಿನಿಯಂ ಸ್ಪೇಸ್-ಫ್ರೇಮ್ ಮತ್ತು ಟಾರ್ಶನಲ್ ಜೋಡಿಸಲಾಗಿದ್ದು, ಆಕರ್ಷಕ ಇಂಟಿರಿಯರ್ ಅನ್ನು ಸಹ ಹೊಂದಿದೆ.
ಯುರೋಪಿಯನ್ ಡಬ್ಲ್ಯುಎಲ್ಟಿಪಿ ವ್ಹೀಲ್ ಪ್ರಕಾರ ಬಿಎಂಡಬ್ಲ್ಯು ಐಎಕ್ಸ್ ಸಿಂಗಲ್ ಚಾರ್ಜ್ನಲ್ಲಿ ಗರಿಷ್ಠ 600 ಕಿಲೋಮೀಟರ್ ಚಲಿಸುವಷ್ಟು ಸಮರ್ಥವಾಗಿದೆ ಎಂದು ಹೇಳಲಾಗಿದ್ದು, ಹೊಸ ಐಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ಎರಡು ಎಲೆಕ್ಟ್ರಿಕ್ ಮೋಟರ್ಗಳನ್ನು ಒಳಗೊಂಡಿರಲಿದೆ.
ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಪ್ರತಿ ಚಕ್ರಕ್ಕೂ ಪ್ರತ್ಯೇಕ ಪವರ್ ಒದಗಿಸಲಾಗಿದ್ದು, ವಿವಿಧ ಹಂತ ಡ್ರೈವ್ ಮೋಡ್ಗಳೊಂದಿಗೆ ಇದು ಗರಿಷ್ಠ 503 ಬಿಹೆಚ್ಪಿ ಪವರ್ ಉತ್ಪಾದನೆ ಮಾಡಬಲ್ಲದು.
ಹೊಸ ಬಿಎಂಡಬ್ಲ್ಯು ಐಎಕ್ಸ್ ಆಲ್-ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆಯ ನಂತರ ಮರ್ಸಿಡಿಸ್ ಬೆಂಝ್ ಇಕ್ಯೂಸಿ 400, ಆಡಿ ಇ-ಟ್ರಾನ್ ಮತ್ತು ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ರೂ. 1 ಕೋಟಿಗೂ ಅಧಿಕ ಮೊತ್ತ ಹೊಂದಿರಬಹುದಾದ ಸಾಧ್ಯತೆಗಳಿವೆ.
ಭಾರತದಲ್ಲಿ ಸದ್ಯ ಐಷಾರಾಮಿ ಕಾರುಗಳ ಮಾರಾಟ ವಿಭಾಗದಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಗೆ ಮತ್ತು ಬಿಎಂಡಬ್ಲ್ಯು ಕಂಪನಿಯ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಬಿಎಂಡಬ್ಲ್ಯು ಹೊಸ ಕಾರು ಉತ್ಪನ್ನಗಳು ಮರ್ಸಿಡಿಸ್ಗೆ ಪೈಪೋಟಿ ನೀಡುವ ತವಕದಲ್ಲಿವೆ.
ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ಭಾರತದಲ್ಲಿ 2021ರ ಅವಧಿಗಾಗಿ 8 ಹೊಚ್ಚ ಹೊಸ ಕಾರು ಮಾದರಿಗಳನ್ನು, 9 ಫೇಸ್ಲಿಫ್ಟ್ ಕಾರು ಮಾದರಿಗಳನ್ನು ಮತ್ತು 8 ಹೊಸ ವೆರಿಯೆಂಟ್ಗಳನ್ನು ಪರಿಚಯಿಸಲಾಗುತ್ತಿದ್ದು, ಹೊಸ ಕಾರುಗಳ ಐಷಾರಾಮಿ ವಿಭಾಗದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿವೆ.
ಭಾರತದಲ್ಲಿ ಸದ್ಯ ವಿವಿಧ ಸರಣಿಗಳಲ್ಲಿ ಒಟ್ಟು 16 ಕಾರುಗಳ ಮಾರಾಟ ಹೊಂದಿರುವ ಬಿಎಂಡಬ್ಲ್ಯು ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಪ್ರಮುಖ ಆಕರ್ಷಣೆಯಾಗಿವೆ.
ಬಿಎಂಡಬ್ಲ್ಯು ಕಂಪನಿಯು ಭಾರತದಲ್ಲಿ ಮೊದಲ ಹಂತವಾಗಿ ಐಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದ್ದು, ಎರಡನೇ ಕಾರು ಮಾದರಿಯಾಗಿ ಎಲೆಕ್ಟ್ರಿಕ್ ಹ್ಯಾಚ್ಬ್ಯಾಕ್ ಮತ್ತು ಮೂರನೇ ಕಾರು ಮಾದರಿಯಾಗಿ ಐ4 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಬಿಡುಗಡೆ ಮಾಡಲಿದೆ.
ಹೊಸ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯು ಜರ್ಮನಿಯ ಡಿಂಗೋಲ್ಫಿಂಗ್ ಘಟಕದಲ್ಲಿ ಆರಂಭವಾಗಿದ್ದು, ಹೊಸ ಇವಿ ಕಾರುಗಳನ್ನು ಬಿಎಂಡಬ್ಲ್ಯು ಕಂಪನಿಯು ಸದ್ಯ ಸಿಬಿಯು ಆಮದು ನೀತಿ ಅಡಿಯಲ್ಲಿಯೇ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡಲಿದೆ.