ಪ್ರತಿ ಚಾರ್ಜ್‌ಗೆ 425 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐಎಕ್ಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ
ಬಿಎಂಡಬ್ಲ್ಯು ಇಂಡಿಯಾ(BMW India) ಕಂಪನಿಯು ತನ್ನ ಹೊಚ್ಚ ಹೊಸ ಐಎಕ್ಸ್(iX) ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಐಎಕ್ಸ್(iX) ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಎಕ್ಸ್‌ಡ್ರೈವ್40 ಎನ್ನುವ ಒಂದೇ ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದ್ದು, ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1.16 ಕೋಟಿ ಬೆಲೆ ಹೊಂದಿದೆ. ಹೊಸ ಐಎಕ್ಸ್ ಕಾರು ಮಾದರಿಯು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳಲ್ಲಿ ಅಭಿವೃದ್ದಿಗೊಂಡಿರುವುದರಿಂದ ಭಾರತದಲ್ಲಿ ಸಿಬಿಯು ಆಮದು ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರು ಹಲವಾರು ಅತ್ಯಾಧುನಿಕ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಐಎಕ್ಸ್ ಎಕ್ಸ್‌ಡ್ರೈವ್40 ಮಾದರಿಯಲ್ಲಿ ಬಿಎಂಡಬ್ಲ್ಯು ಕಂಪನಿಯು ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೊತೆ ಡ್ಯುಯಲ್ ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಇದಕ್ಕಾಗಿ ಕಂಪನಿಯು ಹೊಸ ಕಾರಿನಲ್ಲಿ 76.6kWh ಬ್ಯಾಟರಿ ಪ್ಯಾಕ್ ನೀಡಲಾಗಿದೆ.

ಬಿಎಂಡಬ್ಲ್ಯು ಕಂಪನಿಯು ಐಎಕ್ಸ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಮಾರಾಟ ಮಾಡುತ್ತಿದ್ದು, ಹೊಸ ಕಾರನ್ನು ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಡ್ರೈವ್40 ಮತ್ತು ಎಕ್ಸ್‌ಡ್ರೈವ್50 ವೆರಿಯೆಂಟ್‌ಗಳಲ್ಲಿ ಮಾರಾಟ ಮಾಡುತ್ತಿದೆ.

ಎಕ್ಸ್‌ಡ್ರೈವ್40 ಮಾದರಿಯು 76.6kWh ಬ್ಯಾಟರಿ ಪ್ಯಾಕ್ ಮೂಲಕ ಗರಿಷ್ಠ 425 ಕಿ.ಮೀ ಮೈಲೇಜ್ ರೇಂಜ್ ಹೊಂದಿದ್ದರೆ ಎಕ್ಸ್‌ಡ್ರೈವ್50 ಮಾದರಿಯು ಪ್ರತಿ ಚಾರ್ಜ್‌ಗೆ 611 ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಂಡಿದೆ. ಆದರೆ ಬಿಎಂಡಬ್ಲ್ಯು ಕಂಪನಿಯು ಸದ್ಯಕ್ಕೆ ಭಾರತದಲ್ಲಿ ಎಕ್ಸ್‌ಡ್ರೈವ್40 ಮಾದರಿಯನ್ನು ಮಾತ್ರವೇ ಮಾರಾಟ ಮಾಡಲು ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆ ಆಧರಿಸಿ ಹೈ ಎಂಡ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ಐಎಕ್ಸ್ ಎಕ್ಸ್‌ಡ್ರೈವ್40 ಮಾದರಿಯು ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಬಿಡುಗಡೆಯೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿರುವ ಬಿಎಂಡಬ್ಲ್ಯು ಕಂಪನಿಯು ಹೊಸ ಕಾರನ್ನು ಮುಂಬರುವ 2022ರ ಏಪ್ರಿಲ್‌ನಿಂದ ವಿತರಣೆ ಮಾಡುವುದಾಗಿ ಹೇಳಿಕೊಂಡಿದೆ.

ಐಎಕ್ಸ್ ಎಕ್ಸ್‌ಡ್ರೈವ್40 ಮಾದರಿಗಾಗಿ ಬಿಎಂಡಬ್ಲ್ಯು ಮೂರು ಮಾದರಿಯ ಚಾರ್ಜಿಂಗ್ ಸರ್ಪೊಟ್ ನೀಡಿದ್ದು, ಗ್ರಾಹಕರು 150kW ಡಿಸಿ ಫಾಸ್ಟ್ ಚಾರ್ಜ್‌ರ್, 50kW ಡಿಸಿ ಚಾರ್ಜ್‌ರ್ ಮತ್ತು 11 kW ಹೋಂ ಚಾರ್ಜರ್ ಆಯ್ಕೆ ನೀಡಿದೆ. 150kW ಡಿಸಿ ಫಾಸ್ಟ್ ಚಾರ್ಜ್‌ರ್ ಮೂಲಕ ಶೇ.80 ಚಾರ್ಜ್‌ಗೆ 31 ನಿಮಿಷ ತೆಗೆದುಕೊಂಡರೆ, 50kW ಡಿಸಿ ಚಾರ್ಜ್‌ರ್ ಮೂಲಕ ಚಾರ್ಜ್ ಮಾಡಲು 73 ನಿಮಿಷ ಮತ್ತು 11 kW ಹೋಂ ಚಾರ್ಜರ್ ಮೂಲಕ ಪೂರ್ತಿಯಾಗಿ ಚಾರ್ಜ್ ಮಾಡಲು ಗರಿಷ್ಠ 7 ಗಂಟೆಗಳ ಕಾಲಾವಕಾಶ ತೆಗದುಕೊಳ್ಳುತ್ತದೆ.

ಬಿಎಂಡಬ್ಲ್ಯು ಕಂಪನಿಯು ತನ್ನ ಹೊಸ ಕ್ಲಾರ್(CLAR) ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಐಎಕ್ಸ್ ಮಾದರಿಯನ್ನು ಅಭಿವೃದ್ದಿಪಡಿಸಿದ್ದು, ಹೊಸ ಕಾರು ಬಹುತೇಕ ಬಿಡಿಭಾಗಗಳು ಅಲ್ಯುನಿಯಂ ಮತ್ತು ಕಾರ್ಬನ್ ಫೈಬರ್ ಒಳಗೊಂಡಿದೆ.

ಅಲ್ಯುನಿಯಂ ಮತ್ತು ಕಾರ್ಬನ್ ಫೈಬರ್ ಅಂಶಗಳಿಂದಾಗಿ ಕಾರಿನ ತೂಕ ಇಳಿಕೆಯಾಗುವುದರ ಜೊತೆ ಪರ್ಫಾಮೆನ್ಸ್ ಹೆಚ್ಚಳವಾಗಲೂ ಸಹಕಾರಿಯಾಗಿದ್ದು, ಹೊಸ ಕಾರು ವಿವಿಧ ಡ್ರೈವ್ ಮೋಡ್‌ಗಳ ಮೂಲಕ 326 ಬಿಎಚ್‌ಪಿ, 630 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 6.1 ಸೆಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ವೇಗಪಡೆದುಕೊಂಡು ಪ್ರತಿ ಗಂಟೆಗೆ 200 ಕಿ.ಮೀ ಟಾಪ್ ಸ್ಪೀಡ್ ತಲುಪಬಲ್ಲದು.

ಹೊಸ ಐಎಕ್ಸ್ ಎಲೆಕ್ಟ್ರಿಕ್ ಎಸ್‍ಯುವಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್6 ಎಸ್‌ಯುವಿ ಮಾದರಿಗೆ ಸರಿಸಮನಾದ ವಿನ್ಯಾಸದೊಂದಿಗೆ ಅಭಿವೃದ್ದಿಗೊಂಡಿದ್ದು, ಅತ್ಯಾಧುನಿಕ ಪ್ಲಾಟ್‌ಫಾರ್ಮ್ ಆಧರಿಸಿರುವ ಐಎಕ್ಸ್ ಕಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಕೆನಕ್ಟಿವಿಟಿ ಸೌಲಭ್ಯಗಳನ್ನು ಹೊಂದಿರಲಿದೆ.

ಬಿಎಂಡಬ್ಲ್ಯು ಐಎಕ್ಸ್‌ನಲ್ಲಿರುವ ದೊಡ್ಡ ಕಿಡ್ನಿ ಗ್ರಿಲ್ ಅನ್ನು ಇಂಟಿಲಿಜಿಟೆಂಡ್ ಡ್ರೈವ್ಸ್ ಅಸಿಸ್ಟೆನ್ಸ್ ಟೆಕ್ನಾಲಜಿಗೆ ನೆರವಾಗುವಂತೆ ಅಳವಡಿಸಲಾಗಿದ್ದು, ಇದರಲ್ಲಿರುವ ರಾಡಾರ್ ಸಿಸ್ಟಂ, ಸೆನ್ಸಾರ್ ಗಳು ಮತ್ತು ಕ್ಯಾಮೆರಾಗಳು ಕಾರಿಗೆ ಗರಿಷ್ಠ ಸುರಕ್ಷತೆ ನೀಡಲಿವೆ.

ಹೊಸ ಬಿಎಂಡಬ್ಲ್ಯು ಐಎಕ್ಸ್ ವಿನ್ಯಾಸವು ವಿಶಿಷ್ಟವಾದ ಸಂರಚನೆಯೊಂದಿಗೆ ಭವಿಷ್ಯದ ಆಧಾರಿತ ಸ್ಟೈಲಿಂಗ್ ಹೊಂದಿದ್ದು, 3ಡಿ ಬ್ಯಾನೆಟ್, ವಿಶಿಷ್ಠ ವಿನ್ಯಾಸದ ವ್ಹೀಲ್ ಆರ್ಚ್, ಹೊಸ ಐಎಕ್ಸ್ ಬ್ರ್ಯಾಂಡ್‌ನ ಹೊಸ ಸ್ಕೇಲೆಬಲ್ ಆರ್ಕಿಟೆಕ್ಚರ್ ಜೊತೆ ಆಕರ್ಷಕ ಇಂಟಿರಿಯರ್ ಅನ್ನು ಸಹ ನೀಡಲಾಗಿದೆ.

ಐಎಕ್ಸ್ ಆಲ್ ವ್ಹೀಲ್ ಡ್ರೈವ್ ಎಲೆಕ್ಟ್ರಿಕ್ ಎಸ್‌ಯುವಿಯು ಮರ್ಸಿಡಿಸ್ ಬೆಂಝ್ ಇಕ್ಯೂಸಿ 400, ಆಡಿ ಇ-ಟ್ರಾನ್ ಮತ್ತು ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮೈಲೇಜ್ ವೈಶಿಷ್ಟ್ಯತೆ ಹೊಂದಿರುವ ಐಎಕ್ಸ್ ಮಾದರಿಯ ಹೈ ಎಂಡ್ ಮಾದರಿಯು ಕೂಡಾ ಬಿಡುಗಡೆಯ ನೀರಿಕ್ಷೆಯಲ್ಲಿದೆ.


Click it and Unblock the Notifications








