Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್‌ಯುವಿ700 ಎಸ್‍ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಇಂಡಿಯಾ ತನ್ನ ಹೊಸ ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಮಾದರಿ ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಬಿಎಂಡಬ್ಲ್ಯು ತನ್ನ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಬಿಡುಗಡೆಗೊಳಿಸಿದ ನಂತರ ಮತ್ತೊಂದು ಜನಪ್ರಿಯ ಎಂ340ಐ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಲು ಸಜ್ಜಾಗಿದೆ. ಈ ಐಷಾರಾಮಿ ಬಿಎಂಡಬ್ಲ್ಯು ಕಾರು ಮಾರ್ಚ್ 10 ರಂದು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಇದೀಗ ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ.

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಕಂಪನಿಯ ಡೀಲರ್ ಬಳಿ ಅಥವಾ ಆನ್‌ಲೈನ್ ಮೂಲಕ ಟೋಕರ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಈ ಕಾರಿನ ಹೆಸರನ್ನು ಬ್ರ್ಯಾಂಡ್‌ನ ಇಂಡಿಯನ್ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಸ್ಪೋರ್ಟ್ಸ್ ಸೆಡಾನ್ ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳೊಂದಿಗೆ ನಯವಾದ-ಕಾಣುವ ಹೆಡ್‌ಲ್ಯಾಂಪ್‌ಗಳು, ಬ್ರ್ಯಾಂಡ್‌ನ ವಿಶಿಷ್ಟವಾದ ಕಿಡ್ನಿ ಗ್ರಿಲ್, ಎರಡೂ ಕಡೆಗಳಲ್ಲಿ ಅಗ್ರೇಸುವ್ ಬಂಪರ್‌ಗಳು, ರಿಯರ್ ಸ್ಪಾಯ್ಲರ್ ಮತ್ತು 18-ಇಂಚಿನ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ;

ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಸ್ಪೋರ್ಟ್ಸ್ ಒಳಭಾಗದಲ್ಲಿ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು 10.25-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಸೆಡಾನ್ ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜಿಂಗ್, ಹೆಡ್-ಅಪ್ ಡಿಸ್ ಪ್ಲೇ, 16-ಸ್ಪೀಕರ್ ಹರ್ಮನ್ ಕಾರ್ಡನ್ ಪ್ರೀಮಿಯಂ ಆಡಿಯೊ ಸಿಸ್ಟಂ, ವಾಯ್ಸ್ ಅಸಿಸ್ಟೆಂಟ್, ಗೆಸ್ಚರ್ ಕಂಟ್ರೋಲ್, ಮಲ್ಟಿ-ಜೋನ್ ಕ್ಲೈಮೇಟ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಈ ಎಂ ಪರ್ಫಾರ್ಮೆನ್ಸ್ ನಂತೆ ಡೈನಾಮಿಕ್ಸ್ ನೀಡುವುದರೊಂದಿಗೆ ಹೆಚ್ಚಿನ ಕಾರ್ಯಕ್ಷಮತೆಯನ್ನು ಒದಗಿಸುವ ಮಾದರಿಯಂತೆ ರೀ ಟ್ಯೂನ್ ಮಾಡಲಾಗಿದೆ. ಆದರೆ ಇದು ಸಂಪೂರ್ಣವಾದ ಪರ್ಫಾರ್ಮೆನ್ಸ್ ಕಾರು ಆಗಿರುವುದಿಲ್ಲ.

ಈ ಎಂ340ಐ ಕಾರಿನಲ್ಲಿ 3.0-ಲೀಟರ್, ಆರು ಸಿಲಿಂಡರ್ ಮೋಟರ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಇನ್ನು ಬಿಎಂಡಬ್ಲ್ಯುನ ಚೆನ್ನೈ ಸ್ಥಾವರದಲ್ಲಿ ಸ್ಥಳೀಯವಾಗಿ ಎಂ340ಐ ಕಾರನ್ನು ಜೋಡಿಸಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಎಂಡಬ್ಲ್ಯು ಎಂ340ಐ ಕಾರು ಆಲ್-ವ್ಹೀಲ್-ಡ್ರೈವ್ (ಎಡಬ್ಲ್ಯೂಡಿ) ಸೆಟಪ್ ಪಡೆಯುವ ಸಾಧ್ಯತೆಯಿದೆ. ಇನ್ನು ಇದರಲ್ಲಿ ನೀಡುವ 3.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 385 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಬಹುದು.

ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರಿನಲ್ಲಿ ಎಬಿಎಸ್ ಮತ್ತು ಡೈನಾಮಿಕ್ ಟ್ರ್ಯಾಕ್ಷನ್ ಕಂಟ್ರೋಲ್ ನೊಂದಿಗೆ ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್, ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, ಡೈನಾಮಿಕ್ ಬ್ರೇಕ್ ಕಂಟ್ರೋಲ್, ಪರ್ಫಾರ್ಮೆನ್ಸ್ ಕಂಟ್ರೋಲ್, ಡ್ರೈ ಬ್ರೇಕಿಂಗ್ ಫಂಕ್ಷನ್, ಸ್ಟಾರ್ಟ್-ಆಫ್ ಅಸಿಸ್ಟೆಂಟ್ ಮತ್ತು ಎಂ ಸ್ಪೋರ್ಟ್ ಡಿಫರೆನ್ಷಿಯಲ್ ಅನ್ನು ಒಳಗೊಂಡಿದೆ;

ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಲಿರುವ ಸ್ಪೋರ್ಟಿಸ್ಟ್ ಸೆಡಾನ್‌ಗಳಲ್ಲಿ ಒಂದಾಗಿದೆ. ಈ ಹೊಸ ಬಿಎಂಡಬ್ಲ್ಯು ಎಂ340ಐ ಎಕ್ಸ್‌ಡ್ರೈವ್ ಕಾರು ಪ್ರೀಮಿಯಂ ಲುಕ್ ಮತ್ತು ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಒಳಗೊಂಡಿರುತ್ತದೆ.