ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

2022ರ ಗ್ರಾಹಕ ಎಲೆಕ್ಟ್ರಾನಿಕ್ಸ್ ಶೋ ಶೀಘ್ರದಲ್ಲೇ ಆರಂಭವಾಗಲಿದೆ. ಈ ಪ್ರದರ್ಶನಕ್ಕಾಗಿ ವಾಹನ ತಯಾರಕ ಕಂಪನಿಗಳು ಸಿದ್ಧತೆಗಳನ್ನು ನಡೆಸುತ್ತಿವೆ. ಈ ಪ್ರದರ್ಶನದಲ್ಲಿ ವಾಹನ ತಯಾರಕ ಕಂಪನಿಗಳು ಕೆಲವು ಪ್ರಮುಖ ಉತ್ಪನ್ನಗಳನ್ನು ಬಹಿರಂಗಪಡಿಸುವುದಿಲ್ಲ. ಆದರೆ ಕೆಲವು ಆಸಕ್ತಿದಾಯಕ ಉತ್ಪನ್ನಗಳನ್ನು ಪರಿಚಯಿಸುತ್ತವೆ. ಈ ವಾಹನ ತಯಾರಕ ಕಂಪನಿಗಳಲ್ಲಿ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು (BMW) ಸಹ ಸೇರಿದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಬವೇರಿಯನ್ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಇತ್ತೀಚೆಗಷ್ಟೇ ತನ್ನ iX M60 ಎಲೆಕ್ಟ್ರಿಕ್ ಎಸ್‌ಯು‌ವಿಯನ್ನು ಬಹಿರಂಗಪಡಿಸಿದೆ. ಈಗ ಕಂಪನಿಯು ಬಣ್ಣ ಬದಲಾಯಿಸುವ ತಂತ್ರಜ್ಞಾನವನ್ನು ಪರಿಚಯಿಸಬಹುದು ಎಂದು ನಿರೀಕ್ಷಿಸಲಾಗಿದೆ. ಕೇವಲ ಒಂದು ಬಟನ್ ಪ್ರೆಸ್ ಮಾಡುವ ಮೂಲಕ ಕಾರಿನ ಬಣ್ಣವನ್ನು ಬದಲಿಸಬಹುದು. ಸದ್ಯಕ್ಕೆ, ಬಿಎಂಡಬ್ಲ್ಯು ಕಂಪನಿಯು ಈ ತಂತ್ರಜ್ಞಾನವನ್ನು ಯಾವ ವಾಹನಗಳಲ್ಲಿ ಅಳವಡಿಸಲಿದೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಆದರೆ ಕಂಪನಿಯ ಪ್ರಕಾರ ಈ ಪ್ರದರ್ಶನವು ಈ ತಂತ್ರಜ್ಞಾನದ ಪರಿಚಯದ ಒಂದು ಹಂತವಾಗಲಿದೆ. ಈ ತಂತ್ರಜ್ಞಾನದಿಂದ ಬಟನ್ ಪ್ರೆಸ್ ಮಾಡಿದರೆ ಕಾರು ಸ್ಟಾರ್ಟ್ ಆಗಲಿದೆ. ನಂತರ ಕಾರಿನ ಬಾಹ್ಯ ಬಣ್ಣ ಬದಲಾಗುತ್ತದೆ. ಇದರ ಹೊರತಾಗಿ ವಾಹನವು ಎಷ್ಟು ಬಣ್ಣಗಳನ್ನು ಬದಲಾಯಿಸಲು ಸಾಧ್ಯವಾಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಕಂಪನಿಯು ತನ್ನ ಟಾಪ್ ಎಂಡ್ ಪರ್ಫಾಮೆನ್ಸ್ ನೀಡುವ iX M60 ಎಲೆಕ್ಟ್ರಿಕ್ ಕಾರಿನಲ್ಲಿ ಈ ತಂತ್ರಜ್ಞಾನವನ್ನು ಅಳವಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಆದರೂ ಬಿಎಂಡಬ್ಲ್ಯು ಕಂಪನಿಯ ಎಲ್ಲಾ ಯೋಜನೆಗಳ ಬಗ್ಗೆ ತಿಳಿಯಲು ಈ ಪ್ರದರ್ಶನವು ಆರಂಭವಾಗುವವರೆಗೆ ಕಾಯಬೇಕಾಗಿದೆ. ಬಿಎಂಡಬ್ಲ್ಯು iX M60 ಕಾರು iX xDrive 50 ಕಾರಿನಲ್ಲಿರುವಂತಹ 111.5 ಕಿ.ವ್ಯಾ ಬ್ಯಾಟರಿ ಪ್ಯಾಕ್ ಹಾಗೂ ಡ್ಯುಯಲ್ ಮೋಟಾರ್‌ಗಳನ್ನು ಬಳಸುತ್ತದೆ ಎಂದು ಹೇಳಲಾಗಿದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಆದರೂ ಬಿಎಂಡಬ್ಲ್ಯು iX M60 ಹೆಚ್ಚಿನ ಪವರ್ ಹೊಂದಿರಬಹುದು ಎಂದು ಊಹಿಸಲಾಗಿದೆ. ಬಿಎಂಡಬ್ಲ್ಯು iX xDrive50 ಬಗ್ಗೆ ಹೇಳುವುದಾದರೆ ಈ ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟರ್ 516 ಬಿ‌ಹೆಚ್‌ಪಿ ಪವರ್ ಹಾಗೂ 765 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಮೋಟರ್ ಪ್ರತಿ ಆಕ್ಸಲ್ ಅನ್ನು ಪವರ್ ಮಾಡುತ್ತದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಇದರ 111.5 ಕಿ.ವ್ಯಾ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ 105.2 ಕಿ.ವ್ಯಾ ಸಾಮರ್ಥ್ಯವನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 483 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಬಿಎಂಡಬ್ಲ್ಯು ಕಂಪನಿಯು ಇತ್ತೀಚೆಗಷ್ಟೇ ತನ್ನ ಬಿಎಂಡಬ್ಲ್ಯು iX ಎಲೆಕ್ಟ್ರಿಕ್ ಎಸ್‌ಯು‌ವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಈ ಎಲೆಕ್ಟ್ರಿಕ್ ಎಸ್‌ಯು‌ವಿಯ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ. 1.16 ಕೋಟಿಗಳಾಗಿದೆ. ಈ ಎಸ್‌ಯು‌ವಿಯನ್ನು ಕೇವಲ ಬಿಎಂಡಬ್ಲ್ಯು iX xDrive 40 ಎಂಬ ಒಂದು ಮಾದರಿಯಲ್ಲಿ ಮಾತ್ರ ಬಿಡುಗಡೆ ಮಾಡಲಾಗಿದೆ, ಈ ಎಸ್‌ಯು‌ವಿಯನ್ನು ಕಂಪ್ಲೀಟ್ಲಿ ಬಿಲ್ಟ್ ಯುನಿಟ್ ಆಗಿ ಬಿಡುಗಡೆಗೊಳಿಸಲಾಗಿದೆ. ಈ ಎಲೆಕ್ಟ್ರಿಕ್ ಎಸ್‌ಯು‌ವಿಯ ವಿತರಣೆಯು 2022ರ ಏಪ್ರಿಲ್ ನಿಂದ ಆರಂಭವಾಗಲಿದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಈ ಮಾದರಿಯು 326 ಬಿ‌ಹೆಚ್‌ಪಿ ಪವರ್ ಹಾಗೂ 630 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಲೆಕ್ಟ್ರಿಕ್ ಎಸ್‌ಯು‌ವಿಯು ಪೂರ್ತಿಯಾಗಿ ಚಾರ್ಜ್ ಆದ ನಂತರ ಸುಮಾರು 414 ಕಿ.ಮೀಗಳವರೆಗೆ ಚಲಿಸುತ್ತದೆ. ಬಿಎಂಡಬ್ಲ್ಯು iX ಎಲೆಕ್ಟ್ರಿಕ್ ಎಸ್‌ಯು‌ವಿಯ ಮುಂಭಾಗ ಹಾಗೂ ಹಿಂಭಾಗದ ಆಕ್ಸಲ್‌ಗಳಲ್ಲಿ ಎರಡು ಎಲೆಕ್ಟ್ರಿಕ್ ಮೋಟರ್‌ಗಳನ್ನು ನೀಡಲಾಗಿದೆ. ಈ ಎಸ್‌ಯು‌ವಿಯು ಕೇವಲ 6.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಈ ಎಸ್‌ಯು‌ವಿಯಲ್ಲಿರುವ ಬ್ಯಾಟರಿಯನ್ನು 11 ಕಿ.ವ್ಯಾ ಎಸಿ ಚಾರ್ಜರ್‌ನೊಂದಿಗೆ ಸುಮಾರು 7 ಗಂಟೆಗಳಲ್ಲಿ 100% ನಷ್ಟು ಚಾರ್ಜ್ ಮಾಡಬಹುದು. 2.5 ಗಂಟೆಗಳಲ್ಲಿ ಈ ಎಸ್‌ಯು‌ವಿಯು 100 ಕಿ.ಮೀ ದೂರ ಚಲಿಸುವಷ್ಟು ಚಾರ್ಜ್ ಆಗುತ್ತದೆ. ಈ ಎಲೆಕ್ಟ್ರಿಕ್ ಎಸ್‌ಯು‌ವಿಯನ್ನು ಡಿಸಿ ಚಾರ್ಜರ್ನೊಂದಿಗೆ 73 ನಿಮಿಷಗಳಲ್ಲಿ 10 - 80% ನಷ್ಟು ಚಾರ್ಜ್ ಮಾಡಬಹುದು.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಈ ಚಾರ್ಜರ್ 50 ಕಿ.ವ್ಯಾ ಸಾಮರ್ಥ್ಯವನ್ನು ಹೊಂದಿದ್ದು, 150 ಕಿ.ವ್ಯಾ ಚಾರ್ಜರ್‌ನೊಂದಿಗೆ 31 ನಿಮಿಷಗಳಲ್ಲಿ ಚಾರ್ಜ್ ಮಾಡಬಹುದು. ಈ ಎಲೆಕ್ಟ್ರಿಕ್ ಎಸ್‌ಯು‌ವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮೊದಲ ನೋಟದಲ್ಲಿಯೇ ಬಿಎಂಡಬ್ಲ್ಯು iX ಕಾರಿನ ವಿನ್ಯಾಸವನ್ನು ಕಾನ್ಸೆಪ್ಟ್ ನಿಂದ ತೆಗೆದುಕೊಳ್ಳಲಾಗಿದೆ ಎಂದು ತೋರುತ್ತದೆ. ಈ ಕಾನ್ಸೆಪ್ಟ್ ಕಾರ್ ಅನ್ನು 2017ರಲ್ಲಿ ಅನಾವರಣಗೊಳಿಸಲಾಗಿತ್ತು.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ಕಾರು ಮಾರಾಟವನ್ನು ತೀವ್ರಗೊಳಿಸುತ್ತಿದೆ. ಕಂಪನಿಯು ಭಾರತದಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಗೆ ಪೈಪೋಟಿ ನೀಡಲು ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸುತ್ತಿದೆ. ಭಾರತದಲ್ಲಿ ಸದ್ಯ ಐಷಾರಾಮಿ ಕಾರುಗಳ ಮಾರಾಟ ವಿಭಾಗದಲ್ಲಿ ಮರ್ಸಿಡಿಸ್ ಬೆಂಝ್ ಹಾಗೂ ಬಿಎಂಡಬ್ಲ್ಯು ಕಂಪನಿಗಳ ನಡುವೆ ಸಾಕಷ್ಟು ಪೈಪೋಟಿ ನಡೆಯುತ್ತಿದೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಬಿಎಂಡಬ್ಲ್ಯು ಕಂಪನಿಯ ಹೊಸ ಕಾರುಗಳು ಮರ್ಸಿಡಿಸ್‌ಗೆ ಪೈಪೋಟಿ ನೀಡುವ ತವಕದಲ್ಲಿವೆ. ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ಭಾರತದಲ್ಲಿ 2021ರ ಅವಧಿಗಾಗಿ 8 ಹೊಚ್ಚ ಹೊಸ ಕಾರು ಮಾದರಿಗಳನ್ನು, 9 ಫೇಸ್‌ಲಿಫ್ಟ್ ಕಾರು ಮಾದರಿಗಳನ್ನು ಹಾಗೂ 8 ಹೊಸ ವೆರಿಯೆಂಟ್‌ಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರುಗಳ ಐಷಾರಾಮಿ ವಿಭಾಗದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿವೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಭಾರತದಲ್ಲಿ ಸದ್ಯ ವಿವಿಧ ಸರಣಿಗಳಲ್ಲಿ ಒಟ್ಟು 16 ಕಾರುಗಳ ಮಾರಾಟ ಹೊಂದಿರುವ ಬಿಎಂಡಬ್ಲ್ಯು ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಪ್ರಮುಖ ಆಕರ್ಷಣೆಯಾಗಿವೆ.

ಕಾರಿನ ಬಣ್ಣ ಬದಲಿಸುವ ತಂತ್ರಜ್ಞಾನವನ್ನು ಪರಿಚಯಿಸಲಿದೆ BMW

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಡೀಸೆಲ್ ಮತ್ತು ಪೆಟ್ರೋಲ್ ಚಾಲಿತ ಕಾರುಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Bmw to introduce color changing technology for cars in consumer electronics show details
Story first published: Wednesday, December 15, 2021, 13:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X