Just In
Don't Miss!
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- News
ಸಮೀಕ್ಷೆ: ಅಸ್ಸಾಂನಲ್ಲಿ ಕಾಂಗ್ರೆಸ್ ಮಣಿಸಿ ಬಿಜೆಪಿ ಅಧಿಕಾರಕ್ಕೆ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಿಎಂಡಬ್ಲ್ಯು ಎಂ340ಐ ಕಾರು ಬಿಡುಗಡೆ ದಿನಾಂಕ ಬಹಿರಂಗ
ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಂ340ಐ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಬಿಎಂಡಬ್ಲ್ಯು ಎಂ340ಐ ಮಾದರಿ ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಬಿಎಂಡಬ್ಲ್ಯು ತನ್ನ 3 ಸೀರಿಸ್ ಗ್ರ್ಯಾನ್ ಲಿಮೋಸಿನ್ ಬಿಡುಗಡೆಗೊಳಿಸಿದ ನಂತರ ಮತ್ತೊಂದು ಜನಪ್ರಿಯ ಎಂ340ಐ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಲು ಸಜ್ಜಾಗಿದೆ. ಇನ್ನು ಈ ಹೊಸ ಬಿಎಂಡಬ್ಲ್ಯು ಎಂ340ಐ ಕಾರಿನ ಬಿಡುಗಡೆ ದಿನಾಂಕವು ಬಹಿರಂಗವಾಗಿದೆ. ಅದರಂತೆ ಈ ಐಷಾರಾಮಿ ಬಿಎಂಡಬ್ಲ್ಯು ಕಾರು ಮಾರ್ಚ್ 10 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಈ ಎಂ ಪರ್ಫಾರ್ಮೆನ್ಸ್ ನಂತೆ ಡೈನಾಮಿಕ್ಸ್ ನೀಡುವುದರೊಂದಿಗೆ ಉತ್ತಮ ಕಾರ್ಯಕ್ಷಮತೆಯನ್ನು ಒದಗಿಸುವ ಮಾದರಿಯಂತೆ ರೀ ಟ್ಯೂನ್ ಮಾಡಲಾಗಿದೆ. ಆದರೆ ಇದು ಸಂಪೂರ್ಣವಾದ ಪರ್ಫಾರ್ಮೆನ್ಸ್ ಕಾರು ಆಗಿರುವುದಿಲ್ಲ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಎಂ340ಐ ಕಾರಿನಲ್ಲಿ 3.0-ಲೀಟರ್, ಆರು ಸಿಲಿಂಡರ್ ಮೋಟರ್ ಎಂಜಿನ್ ಅನ್ನು ಅಳವಡಿಸಬಹುದು. ಇನ್ನು ಬಿಎಂಡಬ್ಲ್ಯುನ ಚೆನ್ನೈ ಸ್ಥಾವರದಲ್ಲಿ ಸ್ಥಳೀಯವಾಗಿ ಎಂ340ಐ ಕಾರನ್ನು ಜೋಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಎಂಡಬ್ಲ್ಯು ಎಂ340ಐ ಕಾರು ಆಲ್-ವ್ಹೀಲ್-ಡ್ರೈವ್ (ಎಡಬ್ಲ್ಯೂಡಿ) ಸೆಟಪ್ ಪಡೆಯುವ ಸಾಧ್ಯತೆಯಿದೆ. ಇನ್ನು ಇದರಲ್ಲಿ ನೀಡುವ ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 370 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸ್ಟ್ಯಾಂಡರ್ಡ್ ಆಗಿ ಅಳವಡಿಸಬಹುದು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಹೊಸ ಬಿಎಂಡಬ್ಲ್ಯು ಎಂ340ಐ ಸ್ಪೋರ್ಟಿ ಲುಕ್ ಅನ್ನು ಹೊಂದಿರುತ್ತದೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಂ340ಐ ಮಾದರಿಯು ನವೀಕರಿಸಿದ ಬಂಪರ್, ಬಿಎಂಡಬ್ಲ್ಯು ಝಡ್ ಪ್ರೇರಿತ ಕ್ರೋಮ್ ಸ್ಟಡ್ಡ್ ಗ್ರಿಲ್, ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್ ಗಳು ಅನ್ನು ಹೊಂದಿದೆ.

ಇನ್ನು ಈ ಕಾರಿನಲ್ಲಿ ಕಡಿಮೆ ಪ್ರೊಫೈಲ್ ಟೈರ್‌ಗಳಲ್ಲಿ ಪರಿಷ್ಕೃತ ಹಿಂಭಾಗದ ಡಿಫ್ಯೂಸರ್ ಮತ್ತು ದೊಡ್ಡ ಎಕ್ಸಾಸ್ಟ್ ಅನ್ನು ಹೊಂದಿದೆ. ನಂತರ ಎಂ ಸ್ಪೋರ್ಟ್ ಸಸ್ಪೆಂಕ್ಷನ್ ಮುಂಭಾಗದಲ್ಲಿ ದೊಡ್ಡ 348 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 345 ಎಂಎಂ ಡಿಸ್ಕ್ ಬ್ರೇಕ್ ಅನ್ನು ಒಳಗೊಂಡಿರುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಎಂಡಬ್ಲ್ಯು ಎಂ340ಐ ಕಾರಿನ ಒಳಭಾಗದಲ್ಲಿ ಮೂರು-ಝೋನ್ ಕ್ಲೈಮೇಟ್ ಕಂಟ್ರೋಲ್, ಅಂಬೈಟ್ ಲೈಟ್ ಮತ್ತು ರೇರ್ ಮೀರರ್ ಸ್ಟ್ಯಾಂಡರ್ಡ್ ಫಿಟ್‌ಮೆಂಟ್ ಆಗಿ ಪಡೆಯುತ್ತದೆ. ಇನ್ನು ಮುಂಭಾಗ ಮತ್ತು ಹಿಂಭಾಗದಲ್ಲಿ ಪಾರ್ಕಿಂಗ್ ಸೆನ್ಸರ್ ಗಳನ್ನು ಹೊಂದಿವೆ.

ಇನ್ನು ಈ ಹೊಸ ಐಷಾರಾಮಿ ಕಾರಿನಲ್ಲಿ ನ್ಯಾವಿಗೇಷನ್ ಸಿಸ್ಟಮ್‌ನೊಂದಿಗೆ ಬಿಎಂಡಬ್ಲ್ಯು ಲೈವ್ ಕಾಕ್‌ಪಿಟ್ ಪ್ಲಸ್ ರಿಯಲ್ ಟೈಮ್ ಟ್ರಾಫಿಕ್ ಡೀಟಲ್ಸ್, ರಿಮೋಟ್ ಸರ್ವೀಸಸ್, ಕನ್ಸೈರ್ಜ್ ಸರ್ವಿಸ್ ಸೇರಿದಂತೆ ಕನೆಕ್ಟಿವಿಟಿ ಪ್ಯಾಕೇಜ್ ಪ್ಲಸ್‌ನೊಂದಿಗೆ 8.8-ಇಂಚಿನ ಕಂಟ್ರೋಲ್ ಡಿ ಪ್ಲೇಯನ್ನು ಹೊಂದಿರುತ್ತದೆ.