ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಬಿಎಂಡಬ್ಲ್ಯ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಜಾಗತಿಕ ಮಾರುಕಟ್ಟೆಗಾಗಿ ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ವಾಹನಗಳ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ಕೂಡಾ ಈಗಾಗಲೇ ವಿವಿಧ ಮಾದರಿಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಜ್ಜುಗೊಂಡಿದ್ದು, 2023ರ ವೇಳೆಗೆ ಶೇ.20 ರಷ್ಟು ಕಾರುಗಳಲ್ಲಿ ಎಲೆಕ್ಟ್ರಿಕ್ ಮಾದರಿಗಳ ಮಾರಾಟವನ್ನು ಹೊಂದಿರುವ ಭರವಸೆ ನೀಡಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಬಿಎಂಡಬ್ಲ್ಯು ಗ್ರೂಪ್ ಕಂಪನಿಗಳ ಸಮ್ಮೆಳನದಲ್ಲಿ ತನ್ನ ಹೊಚ್ಚ ಹೊಸ ಐ4 ಎಲೆಕ್ಟ್ರಿಕ್ ಸೆಡಾನ್ ಮಾದರಿಯನ್ನು ಅನಾವರಣಗೊಳಿಸಲಾಗಿದ್ದು, ಹೊಸ ಕಾರು ಮಾದರಿಯನ್ನು ಜಾಗತಿಕ ಮಾರುಕಟ್ಟೆಗಳಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಪರಿಚಯಿಸುವ ಸುಳಿವು ನೀಡಿದೆ. ಹೊಸ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಎಲೆಕ್ಟ್ರಿಕ್ ಮಾದರಿಗಳಿಂತಲೂ ಉತ್ತಮ ಮೈಲೇಜ್ ಮತ್ತು ತಂತ್ರಜ್ಞಾನ ಸೌಲಭ್ಯ ಹೊಂದಿದ್ದು, ಸ್ಪೋಟಿ ವಿನ್ಯಾಸದೊಂದಿಗೆ ಅನಾವರಣಗೊಂಡಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಐ4 ಕಾರು ಮಾದರಿಯನ್ನು ಗ್ರ್ಯಾನ್ ಕೂಪೆ ಸರಣಿ ಮಾದರಿಗಳನ್ನು ವಿನ್ಯಾಸವನ್ನು ನಿರ್ಮಾಣ ಮಾಡಿರುವ ಬಿಎಂಡಬ್ಲ್ಯು ಕಂಪನಿಯು ಹೊಸ ಕಾರಿನ ಮೊದಲ ಚಿತ್ರವನ್ನು ಹಂಚಿಕೊಂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸುವುದಾಗಿ ಹೇಳಿಕೊಂಡಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಹೊಸ ಐ4 ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಡ್ರೈವ್35, ಇಡ್ರೈವ್40 ಮತ್ತು ಟಾಪ್ ಎಂಡ್ ಮಾದರಿಯಾಗಿ ಎಂ50 ಪರ್ಫಾಮೆನ್ಸ್ ವೆರಿಯೆಂಟ್ ಹೊಂದಿರಲಿದ್ದು, ಪ್ರತಿ ಚಾರ್ಚ್‌ಗೆ ಗರಿಷ್ಠ 590 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

390kW ಪವರ್ ಔಟ್‌ಪುಟ್‌ನೊಂದಿಗೆ 530 ಬಿಎಚ್‌ಪಿ ಉತ್ಪಾದನೆ ಹೊಂದಿರುವ ಹೊಸ ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಮೈಲೇಜ್ ವಿಚಾರದಲ್ಲೂ ಗಮನಸೆಳೆಯಲಿದ್ದು, ಕೇವಲ ನಾಲ್ಕು ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಪಡೆದುಕೊಳ್ಳುವ ಪರ್ಫಾಮೆನ್ಸ್ ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

MOST READ: ದಿನೇ ದಿನೇ ಜನಪ್ರಿಯವಾಗುತ್ತಿರುವ ಆಂಡ್ರಾಯ್ಡ್ ಆಟೋದ ಬಗೆಗಿನ ವಿವರಗಳಿವು

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಜೊತೆಗೆ ಬಿಎಂಡಬ್ಲ್ಯು ಕಂಪನಿಯು ಅಭಿವೃದ್ದಿಪಡಿಸಿರುವ ಐಡ್ರೈವ್ 8 ಟೆಕ್ನಾಲಜಿ ಸೌಲಭ್ಯವು ಕೂಡಾ ಐಷಾರಾಮಿ ಕಾರುಗಳ ಬಳಕೆಗೆ ಹೊಸ ಅನುಭವ ಒದಗಿಸುತ್ತಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಬಿಎಂಡಬ್ಲ್ಯು ಕಂಪನಿಯು ಮುಂಚೂಣಿ ಸಾಧಿಸುವ ತವಕದಲ್ಲಿದೆ.

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಕುರಿತಂತೆ ಸ್ಪಷ್ಟನೆ ನೀಡಿರುವ ಬಿಎಂಡಬ್ಲ್ಯು ಕಂಪನಿಯು ಚಾರ್ಜಿಂಗ್ ಸೌಲಭ್ಯಗಳ ಆಧಾರದ ಮೇಲೆ ಇವಿ ಕಾರುಗಳ ಪರಿಚಯಿಸುವುದಾಗಿ ಹೇಳಿಕೊಂಡಿದ್ದು, ಭಾರತದಲ್ಲಿ ಸದ್ಯ ಕೆಲವೇ ಕೆಲವು ನಗರಗಳಲ್ಲಿ ಸಾರ್ವಜನಿಕ ಬಳಕೆಯ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ಸೌಲಭ್ಯಗಳಿರುವುದು ಎಲೆಕ್ಟ್ರಿಕ್ ವಾಹನಗಳ ಬಿಡುಗಡೆ ವಿಳಂಬಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರತಿ ಚಾರ್ಜ್‌ಗೆ 590 ಕಿ.ಮೀ ಮೈಲೇಜ್ ನೀಡುವ ಬಿಎಂಡಬ್ಲ್ಯು ಐ4 ಎಲೆಕ್ಟ್ರಿಕ್ ಸೆಡಾನ್ ಅನಾವರಣ

ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಸೌಲಭ್ಯಗಳಿಲ್ಲದೆ ಎಲೆಕ್ಟ್ರಿಕ್ ವಾಹನಗಳ ಬಿಡುಗಡೆಯು ನಷ್ಟ ಉಂಟು ಮಾಡಬಹುದು ಎನ್ನುವ ಲೆಕ್ಕಾಚಾರದಲ್ಲಿರುವ ಆಟೋ ಕಂಪನಿಗಳು ಹೆಚ್ಚಿನ ಮಟ್ಟದ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣಕ್ಕೆ ಕಾಯುತ್ತಿವೆ.

More from DriveSpark

Article Published On: Wednesday, March 17, 2021, 20:56 [IST]
English summary
BMW i4 electric sport sedan unveiled. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+