ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಬಾಲಿವುಡ್ ಸಿನಿಮಾ ರಂಗ ಎಂಬ ಕಲರ್‍‍‍ಫುಲ್ ದುನಿಯಾದಲ್ಲಿರುವ ಸೆಲಬ್ರಿಟಿಗಳಿಗೆ ವಿಭಿನ್ನ ಕ್ರೇಜ್‍‍ಗಳಿವೆ. ಅದರಲ್ಲೂ ದುಬಾರಿ ಕಾರುಗಳನ್ನು ಕೊಂಡುಕೊಳ್ಳುವ ಕ್ರೇಜ್ ಸ್ವಲ್ಪ ಹೆಚ್ಚೆ ಇದೆ. ಬಾಲಿವುಡ್ ಸೂಪರ್ ಸ್ಟಾರ್‌‍ಗಳು ಪೈಪೋಟಿಗೆ ಬಿದ್ದ ರೀತಿಯಲ್ಲಿ ಮಾರುಕಟ್ಟೆಯಲ್ಲಿರುವ ಲಭ್ಯವಿರುವ ಅತಿ ದುಬಾರಿ ಕಾರುಗಳನ್ನು ಖರೀದಿಸುತ್ತಾರೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಇತ್ತೀಚೆಗೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಹೊಸ ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಪರ್ಲ್ ಕ್ಯಾಪ್ಸುಲ್ ಎಡಿಷನ್ ಅನ್ನು ಖರೀದಿಸಿದ್ದಾರೆ. ಈ ಹೊಸ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.3.43 ಕೋಟಿಯಾಗಿದೆ. ನಟ ರಣವೀರ್ ಸಿಂಗ್ ಅವರು 2019ರ ಕೊನೆಯಲ್ಲಿ ಕೆಂಪು ಬಣ್ಣದ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ್ದರು. ಈ ಲ್ಯಾಂಬೊರ್ಗಿನಿ ಉರುಸ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜನಪ್ರಿಯ ಐಷಾರಾಮಿ ಕಾರುಗಳಲ್ಲಿ ಒಂದಾಗಿದೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ನಟ ರಣವೀರ್ ಸಿಂಗ್ ಅವರ ಉರುಸ್ ಪರ್ಲ್ ಕ್ಯಾಪ್ಸುಲ್ ಎಡಿಷನ್ ಹೊರಭಾಗವು ಅರಾನ್ಸಿಯೋ ಬೋರಿಯಾಲಿಸ್ ಶೇಡ್ ಪಿನಿಶಿಂಗ್ ನಿಂದ ಕೂಡಿದೆ. ಈ ಕಾರು 22 ಇಂಚಿನ ನಾಥ್ ವ್ಹೀಲ್ ಗಳನ್ನು ಪಡೆಯುತ್ತದೆ.

MOST READ: ಐಷಾರಾಮಿ ಬಿಎಂಡಬ್ಲ್ಯು ಎಕ್ಸ್7 ಕಾರು ಚಾಲನೆ ವೇಳೆ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ರಣವೀರ್ ಅವರ ಸೂಪರ್ ಎಸ್‌ಯುವಿ ಡ್ಯೂಯಲ್ ಟೋನ್ ಬಣ್ಣವನ್ನು ಹೊಂದಿದೆ. ಇದು ಆರೇಂಜ್ ಬಣ್ಣದೊಂದಿಗೆ ಬ್ಲ್ಯಾಕ್ ಬಣ್ಣದ ರೂಫ್ ಅನ್ನು ಹೊಂದಿದೆ. ಇದರ ಶೈನಿ ಬ್ಲ್ಯಾಕ್ ಥೀಮ್ ಬಂಪರ್, ರಾಕರ್ ಕವರ್‌ಗಳು, ಹಿಂಭಾಗದ ಡಿಫ್ಯೂಸರ್ ಮತ್ತು ಸ್ಪಾಯ್ಲರ್ ಲಿಪ್ ಮತ್ತು ಟೈಲ್‌ಗೇಟ್ ರಿಮ್‌ಗಳಿಗೆ ವಿಸ್ತರಿಸುತ್ತದೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಉರುಸ್ ಪರ್ಲ್ ಕ್ಯಾಪ್ಸುಲ್ ಎಡಿಷನ್ ಅನ್ನು ಲ್ಯಾಂಬೊರ್ಗಿನಿ ಅವರು ನಟನ ಮುಂಬೈ ನಿವಾಸಕ್ಕೆ ತಲುಪಿಸಿದ್ದಾರೆ. ರಣವೀರ್ ಮತ್ತು ಅವರ ಪತ್ನಿ ನಟಿ ದೀಪಿಕಾ ಪಡುಕೋಣೆ ಭಾನುವಾರ ರಾತ್ರಿ ಬೆಂಗಳೂರಿನಿಂದ ಮುಂಬೈಗೆ ಮರಳಿದ್ದಾರೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಲ್ಯಾಂಬೊರ್ಗಿನಿ ಉರುಸ್ ಪರ್ಲ್ ಕ್ಯಾಪ್ಸುಲ್ ಎಡಿಷನ್ ಕಾರಿನಲ್ಲಿ 4.0 ಲೀಟರಿನ 8-ಸಿಲಿಂಡರ್ ಟ್ವಿನ್-ಟರ್ಬೊ ವಿ8 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 650 ಬಿಹೆಚ್‌ಪಿ ಪವರ್ ಹಾಗೂ 850 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಉರುಸ್ ಲ್ಯಾಂಬೊರ್ಗಿನಿ ಕಂಪನಿಯ ಅತ್ಯಂತ ಪವರ್ ಫುಲ್ ಕಾರುಗಳಲ್ಲಿ ಒಂದಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಈ ಐಷಾರಾಮಿ ಕಾರು ಕೇವಲ 3.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 305 ಕಿ.ಮೀಗಳಾಗಿದೆ. ಭಾರತದಲ್ಲಿ ಉದ್ಯಮಿ ಮುಖೇಶ್ ಅಂಬಾನಿ, ನಟ ಕಾರ್ತಿಕ್ ಆರ್ಯನ್, ನಟ ಜೂನಿಯರ್ ಎನ್​ಟಿಆರ್ ಮತ್ತು ನಟ ರಣವೀರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಹೊಂದಿದ್ದಾರೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಲ್ಯಾಂಬೊರ್ಗಿನಿ ಉರುಸ್ ಫೋಕ್ಸ್‌ವ್ಯಾಗನ್ ಗ್ರೂಪ್‌ನ ಎಂಎಲ್‌ಬಿ ಇವೊ ಪ್ಲಾಟ್‌ಫಾರಂ ಅನ್ನು ಆಧರಿಸಿದೆ. ಲ್ಯಾಂಬೊರ್ಗಿನಿ ಉರುಸ್ ಸ್ಲಿಮ್ ಆಗಿರುವ ಎಲ್‌ಇಡಿ ಹೆಡ್‌ಲೈಟ್ ಹಾಗೂ ಟೇಲ್ ಲೈಟ್‌ಗಳನ್ನು ಹೊಂದಿದೆ.

ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಉರುಸ್ ಕಾರಿನ ವಿನ್ಯಾಸವು ಲ್ಯಾಂಬೊರ್ಗಿನಿ ಹುರಾಕನ್ ಸೂಪರ್ ಕಾರ್ ನಿಂದ ಸ್ಫೂರ್ತಿ ಪಡೆದಿದೆ. ಈ ಎಸ್‌ಯುವಿಯಲ್ಲಿ 22 ಹಾಗೂ 23 ಇಂಚಿನ ಅಲಾಯ್ ವ್ಹೀಲ್'ಗಳನ್ನು ಅಳವಡಿಸಬಹುದು. ಉರುಸ್, ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಲ್ಯಾಂಬೊರ್ಗಿನಿ ಕಂಪನಿಯ ಕಾರ್ ಆಗಿದೆ.

Image Courtesy: Supercars India/Instagram

Most Read Articles

Kannada
English summary
Bollywood Actor Ranveer Singh Buys Lamborghini Urus Pearl Capsule Edition. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X