ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಫೋರ್ಸ್ ಮೋಟಾರ್ಸ್(Force Motors) ಕಂಪನಿಯು ತನ್ನ ಜನಪ್ರಿಯ ಆಫ್ ರೋಡ್ ಎಸ್‌ಯುವಿ ಕಾರು ಮಾದರಿಯಾದ ಗೂರ್ಖಾ(Gurkha) ಮಾದರಿಯನ್ನು ನಿನ್ನೆಯಷ್ಟೇ ಅನಾವರಣಗೊಳಿಸಿದ್ದು, ಹೊಸ ಕಾರಿನ ಬೆಲೆ ಮಾಹಿತಿ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಹೊಸ ಗೂರ್ಖಾ ಎಸ್‌ಯುವಿ ಮಾದರಿಯ ಉತ್ಪಾದನಾ ಆವೃತ್ತಿಯ ಅನಾವರಣದೊಂದಿಗೆ ಹೊಸ ಕಾರಿನ ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿರುವ ಫೋರ್ಸ್ ಮೋಟಾರ್ಸ್ ಕಂಪನಿಯು ಇದೇ ತಿಂಗಳು 27ರಂದು ಬೆಲೆ ಮಾಹಿತಿಯನ್ನು ಘೋಷಣೆ ಮಾಡುವುದಾಗಿ ಹೇಳಿಕೊಂಡಿದ್ದು, ಬೆಲೆ ಘೋಷಣೆಯೊಂದಿಗೆ ಹೊಸ ಕಾರಿನ ಖರೀದಿ ಅಧಿಕೃತ ಬುಕ್ಕಿಂಗ್ ಕೂಡಾ ಅಂದೇ ಆರಂಭಗೊಳ್ಳಲಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಬುಕ್ಕಿಂಗ್ ಆರಂಭಗೊಂಡ ನಂತರ ಅಕ್ಟೊಬರ್ 15ರಿಂದ ಹೊಸ ಕಾರಿನ ವಿತರಣೆಯು ಆರಂಭಗೊಳ್ಳಲಿದ್ದು, ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಯು ಈ ಬಾರಿ ಹೊಸ ಸೌಲಭ್ಯಗಳೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಕಾರು ವಿತರಣೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಕಂಪನಿಯೇ ಮಾಹಿತಿ ಹಂಚಿಕೊಂಡಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಇನ್ನು ಬಿಎಸ್-6 ಎಮಿಷನ್‌ಗೆ ಅನುಗುಣವಾಗಿ ಹೊಸ ಗೂರ್ಖಾ ಎಸ್‌ಯುವಿ ಮಾದರಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಉನ್ನತೀಕರಿಸಿದ್ದು, ಹೊಸ ಕಾರು ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳೊಂದಿಗೆ ಅಭಿವೃದ್ದಿಗೊಂಡಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ನವೀಕೃತ ಗೂರ್ಖಾ ಎಸ್‌ಯುವಿ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಮಾದರಿಯನ್ನು ಉಳಿಸಿಕೊಳ್ಳಲಾಗಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

2021ರ ಗೂರ್ಖಾ ಕಾರಿನ ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ಗಳು ಆಫ್ ರೋಡ್ ಎಸ್‌ಯುವಿ ಪ್ರೀಯರನ್ನು ಸೆಳೆಯಲಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ ಜೊತೆ ಎಲ್ಇಡಿ ಡಿಆರ್‌ಎಲ್ಎಸ್, ಬ್ಲ್ಯಾಕ್ ಔಟ್ ಫ್ರಂಟ್ ಬಂಪರ್, ಎಂಜಿನ್ ಬಾಷ್ ಪ್ಲೇಟ್, ಫಾಗ್ ಲ್ಯಾಂಪ್, ಬಾಡಿ ಕ್ಲ್ಯಾಡಿಂಗ್, ಸ್ನೋರ್ಕಲ್ ಸೌಲಭ್ಯವಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಹೊಸ ಕಾರಿನ ಕ್ಯಾಬಿನ್ ಕೂಡಾ ಆಕರ್ಷಕವಾಗಿದ್ದು, ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ 7 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಮ್ಯಾನುವಲ್ ಎಸಿ ವೆಂಟ್ಸ್ , 12V ಚಾರ್ಜಿಂಗ್ ಸಾಕೆಟ್ ಮತ್ತು ಡ್ಯುಯಲ್ ಯುಎಸ್‌ಬಿ ಸಾಕೆಟ್ ನೀಡಲಾಗಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಫೋರ್ಸ್ ಮೋಟಾರ್ಸ್ ಕಂಪನಿಯು ಕಾರು ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಕಾರಿನಲ್ಲಿ ನೀಡಲಾಗಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಹೊಸ ಕಾರು ಆಫ್-ರೋಡ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಥಾರ್ ಮಾದರಿಗೆ ಪ್ರಬಲ ಪೈಪೋಟಿ ನೀಡಲಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಹೊಸ ಗೂರ್ಖಾ ಆವೃತ್ತಿಯು 4116 ಎಂಎಂ ಉದ್ದ, 1812 ಎಂಎಂ ಎತ್ತರ, 2400 ವ್ಹೀಲ್ ಬೆಸ್ ಮತ್ತು 210 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರು ಡೀಸೆಲ್ ಮಾದರಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಬಿಎಸ್-6 ಜಾರಿಯಾಗಿರುವ ಹಿನ್ನಲೆಯಲ್ಲಿ ಸಂಪೂರ್ಣವಾಗಿ ಹೊಸ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿರುವ ಹೊಸ ಗೂರ್ಖಾ ಮಾದರಿಯು ನ್ಯೂ ಜನರೇಷನ್ ಆಫ್-ರೋಡ್ ಪ್ರಿಯರನ್ನು ಸೆಳೆಯಲಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

2.6 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 90 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 4X4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಕ್ಸೆಸರಿಸ್‌ಗಳನ್ನು ಹೊರತುಪಡಿಸಿ ಆಸಕ್ತ ಗ್ರಾಹಕರಿಗೆ ಹೆಚ್ಚುವರಿ ಮೌಲ್ಯದ ಆಕ್ಸೆಸರಿಸ್ ಪ್ಯಾಕೇಜ್ ಆಯ್ಕೆ ನೀಡಲಿದ್ದು, ಹೆಚ್ಚುವರಿ ಆಕ್ಸೆಸರಿಸ್‌ನಲ್ಲಿ ವಿಂಡ್ ಸ್ಕೀನ್ ಬಾರ್, ರೂಫ್ ಕ್ಯಾರಿಯರ್, ರಿಯರ್ ರ್ಯಾಡರ್, ಅಲಾಯ್ ವೀಲ್ಹ್ ಮತ್ತು ರಿಯರ್ ಸೈಡ್ ಫೇಸಿಂಗ್ ಚೈಲ್ಡ್ ಸೀಟ್ ನೀಡಲಾಗಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಇದರೊಂದಿಗೆ ಹೊಸ ಕಾರು ರೆಡ್, ಗ್ರಿನ್, ವೈಟ್, ಆರೇಂಜ್, ಗ್ರೆ ಎಂಬ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಆಫ್ ರೋಡ್ ಎಸ್‌ಯುವಿಯು ಮಹೀಂದ್ರಾ ಥಾರ್ ಕಾರಿಗೆ ಪೈಪೋಟಿಯಾಗಿ ರೂ. 11 ಲಕ್ಷದಿಂದ ರೂ. 15 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ನೀರಿಕ್ಷಿಸಲಾಗಿದೆ.

ಹೊಸ ಗೂರ್ಖಾ ಕಾರಿನ ಬುಕ್ಕಿಂಗ್, ವಿತರಣೆ ಮಾಹಿತಿಯನ್ನು ಬಹಿರಂಗಪಡಿಸಿದ ಫೋರ್ಸ್ ಮೋಟಾರ್ಸ್

ಫೋರ್ಸ್ ಮೋಟಾರ್ಸ್ ಕಂಪನಿಯಯು ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 3 ಡೋರ್ ಜೊತೆಗೆ 5 ಡೋರ್ ವರ್ಷನ್‌ಗಳನ್ನು ಸಹ ಬಿಡುಗಡೆ ಮಾಡಲಿದ್ದು, ಆರಂಭಿಕವಾಗಿ 3 ಡೋರ್ ಮಾದರಿಯ ಮಾರಾಟಕ್ಕೆ ಚಾಲನೆ ನೀಡಲಿರುವ ಕಂಪನಿಯು ಕೆಲ ತಿಂಗಳ ನಂತರ 5 ಡೋರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಎನ್ನಲಾಗಿದೆ.

Most Read Articles

Kannada
English summary
Bs6 force gurkha bookings price reveal delivery date details
Story first published: Thursday, September 16, 2021, 10:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X