Just In
- 58 min ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 1 hr ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2021ರ ಇಸುಝು ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಬಿಡುಗಡೆ ಮಾಹಿತಿ ಬಹಿರಂಗ
ಕೋವಿಡ್ ಪರಿಣಾಮ ಆಟೋ ಉದ್ಯಮದಲ್ಲಿನ ಏರಿಳಿತದಿಂದಾಗಿ ಬಿಎಸ್-6 ಡಿ-ಕ್ರಾಸ್ ವಿ-ಕ್ರಾಸ್ ಲೈಫ್ಸ್ಟೈಲ್ ಪಿಕ್ಅಪ್ ಟ್ರಕ್ ಮಾದರಿಯ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದ್ದ ಇಸುಝು ಕಂಪನಿಯು ಇದೇ ತಿಂಗಳು 8ರಂದು ಬಿಡುಗಡೆ ಮಾಡುವ ಸುಳಿವು ನೀಡಿದೆ.
ಹೊಸ ಕಾರಿನ ಬಿಡುಗಡೆಯ ಸನಿಯದಲ್ಲೂ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಮುಂದುವರಿಸಿರುವ ಇಸುಝು ಕಂಪನಿಯು ಈಗಾಗಲೇ ಉತ್ಪಾದನಾ ಮಾದರಿಯ ಟೀಸರ್ ಚಿತ್ರವನ್ನು ಹಂಚಿಕೊಂಡಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಆವೃತ್ತಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಿದ್ದಗೊಂಡಿದೆ.
ಬಿಎಸ್-6 ವಿ-ಕ್ರಾಸ್ ಪಿಕ್ಅಪ್ ಎಸ್ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸದ್ಯ ಸ್ಟ್ಯಾಂಡರ್ಡ್, ಹೈ ಜೆಡ್, ಜೆಡ್ ಪ್ರೆಸ್ಟಿಸ್ ಮಾದರಿಗಳನ್ನು ಹೊಂದಿದ್ದು, ಗ್ರಾಹಕರ ಬೇಡಿಕೆ ಅನುಸಾರವಾಗಿ ಹೊಸದಾಗಿ ಹೈ ಲ್ಯಾಂಡರ್ ಬೆಸ್ ವೆರಿಯೆಂಟ್ ಪಡೆದುಕೊಳ್ಳಲಿದೆ.
ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಯು ಸದ್ಯ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದ್ದು, ಹೊಸ ವಾಹನ ಬಿಡುಗಡೆಗೂ ಮುನ್ನ ಪ್ರಮುಖ ಡೀಲರ್ಸ್ ಯಾರ್ಡ್ಗಳಲ್ಲಿ ಹೊಸ ವಾಹನವನ್ನು ಸ್ಟಾಕ್ ಮಾಡುತ್ತಿರುವುದು ಕಂಡುಬಂದಿದೆ.
ಹೊಸ ಪಿಕ್ಅಪ್ ವಾಹನದಲ್ಲಿ ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಟೈಲ್ಗೆಟ್ ವಿಭಾಗವನ್ನು ಬದಲಾವಣೆಯಾಗಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಪಿಕ್ಅಪ್ ಎಸ್ಯುವಿಯ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಬದಲಾವಣೆ ಮಾಡಲಾಗಿದೆ. ಡೀಲರ್ಸ್ ಯಾರ್ಡ್ ನಲ್ಲಿ ಕಂಡುಬಂದ ಬೆಸ್ ವೆರಿಯೆಂಟ್ನಲ್ಲೇ ಹಲವಾರು ಪ್ರೀಮಿಯಂ ಫೀಚರ್ಸ್ಗಳಿದ್ದು, ಹೈ ಎಂಡ್ ಮಾದರಿಯಲ್ಲಿ ಮತ್ತಷ್ಟು ಹೊಸ ಫೀಚರ್ಸ್ ಜೋಡಣೆಯಾಗಿರಲಿವೆ.
ಬಿಎಸ್-6 ವಿ-ಕ್ರಾಸ್ ಮಾದರಿಯು 1.9-ಲೀಟರ್ 4-ಸಿಲಿಂಡರ್ ಕಾಮನ್ ರೈಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದ್ದು, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ 161 ಬಿಹೆಚ್ಪಿ ಮತ್ತು 360 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಯಲ್ಲಿ ಕಂಪನಿಯು 2 ವೀಲ್ಹ್ ಡ್ರೈವ್ ಸಿಸ್ಟಂ ಮತ್ತು ಆಲ್ ವೀಲ್ಹ್ ಡ್ರೈವ್ ಆಯ್ಕೆ ನೀಡಿದ್ದು, ಆಲ್ ವೀಲ್ಹ್ ಡ್ರೈವ್ನೊಂದಿಗೆ ಟಾರ್ಕ್ ಮೋಡ್ ಮೂಲಕ ಶಿಫ್ಟ್-ಆನ್-ದಿ-ಫ್ಲೈ ಸಿಸ್ಟಂ ಅನ್ನು ಪಡೆಯುತ್ತದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!
ಹೊಸ ಡಿ-ಮ್ಯಾಕ್ಸ್ ಟ್ರಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಕಾಯಿಲ್ ಸ್ಪ್ರಿಂಗ್ ಮತ್ತು ಆಂಟಿ-ರೋಲ್ ಬಾರ್ ಮತ್ತು ಸಾಫ್ಟ್ ರೈಡ್, ಹಿಂಭಾಗದಲ್ಲಿ ಲೀಫ್ ಸ್ಪಿರ್ಗ್ ಡಬಲ್ ವಿಷ್ಬೋನ್ ಅನ್ನು ಒಳಗೊಂಡಿದೆ.
ಹೊಸ ಕಾರಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ ಇದರಲ್ಲಿ ವ್ಯಾಕ್ಯೂಮ್ ಅಸಿಸ್ಟೆಡ್ ಹೈಡ್ರಾಲಿಕ್ ಬ್ರೇಕ್, ಮುಂಭಾಗದಲ್ಲಿ ಡಿಸ್ಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಹೊಂದಿರಲಿದ್ದು, 3,095 ಎಂಎಂ ಉದ್ದದ ವ್ಹೀಲ್ಬೇಸ್ನೊಂದಿಗೆ 5,295 ಎಂಎಂ ಉದ್ದ, 1,860 ಎಂಎಂ ಅಗಲ ಮತ್ತು 1,840 ಎಂಎಂ ಎತ್ತರ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಟ್ರಕ್ ಸ್ಪೈನೆಲ್ ರೆಡ್, ಟೈಟಾನಿಯಂ ಸಿಲ್ವರ್, ಕಾಸ್ಮಿಕ್ ಬ್ಲ್ಯಾಕ್, ಗಲೆನಾ ಗ್ರೇ, ಸಿಲ್ಕಿ ವೈಟ್ ಪರ್ಲ್, ಸರ್ಪೈರ್ ಬ್ಲೂ ಮತ್ತು ಸ್ಪ್ಲಾಷ್ ವೈಟ್ ಎಂಬ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದ್ದು, ಸುರಕ್ಷತೆಗಾಗಿ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ಇಎಸ್ಸಿ ), ಹಿಲ್ ಸ್ಟಾರ್ಟ್ ಅಸಿಸ್ಟ್ (ಎಚ್ಎಎಸ್), ಹಿಲ್ ಡಿಸೆಂಟ್ ಕಂಟ್ರೋಲ್ (ಎಚ್ಡಿಸಿ), ಸೈಡ್ ಏರ್ಬ್ಯಾಗ್, ರೂಫ್ ಕರ್ಟನ್ ಮತ್ತು ಟ್ರಾಸ್ಫರ್ಕೇಸ್ ಪ್ರೊಟೆಕ್ಟರ್ ಫೀಚರ್ ಗಳನ್ನು ಒಳಗೊಂಡಿರುತ್ತದೆ.