Just In
- 19 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 28 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 37 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾದ ಚೀನಿ ಕಂಪನಿ ಬಿವೈಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಪರಿಣಾಮ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಸಾಕಷ್ಟು ಹೆಚ್ಚಳವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ವಾಹನ ಕಂಪನಿಗಳು ವಿವಿಧ ಮಾದರಿಯ ಹಲವಾರು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸಿ ಮಾರಾಟಕ್ಕೆ ಚಾಲನೆ ನೀಡಿದೆ.
ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಧನ ಘೋಷಿಸಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದ ಪರಿಣಾಮ ಸಾಂಪ್ರಾದಾಯಿಕ ವಾಹನ ಉತ್ಪಾದನಾ ಕಂಪನಿಗಳ ಜೊತೆ ಸ್ಟಾರ್ಟ್ ಕಂಪನಿಗಳು ಕೂಡಾ ಗ್ರಾಹಕರನ್ನು ಸೆಳೆಯುತ್ತಿವೆ.
ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಕಾರ್ಯನಿರ್ವಹಣೆಯಲ್ಲಿರುವ ಚೀನಿ ಜನಪ್ರಿಯ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಸಂಸ್ಥೆಯಾದ ಬಿವೈಡಿ ಕೂಡಾ ಬಹುಬೇಡಿಕೆಯ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳನ್ನು ಭಾರತದಲ್ಲೂ ಬಿಡುಗಡೆಯ ಯೋಜನೆಯಲ್ಲಿದೆ.
ಹೊಸ ಯೋಜನೆಗಾಗಿ ಈಗಾಗಲೇ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಯೊಂದಿಗೆ ವಿವಿಧ ವಾಣಿಜ್ಯ ವಾಹನಗಳ ಕಂಪನಿಗಳೊಂದಿಗೆ ಸಹಭಾಗೀತ್ವ ಯೋಜನೆ ಹೊಂದಿರುವ ಬಿವೈಡಿ ಕಂಪನಿಯು ಎಲೆಕ್ಟ್ರಿಕ್ ಬಸ್ಗಳನ್ನು ಸಿದ್ದಪಡಿಸುತ್ತಿದ್ದು, ವಾಣಿಜ್ಯ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆಯಲ್ಲಿರುವ ಬಿವೈಡಿ ಕಂಪನಿಯು ಚೀನಿ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಇ6 ಎಂಪಿವಿ ಮಾದರಿಯನ್ನು ಭಾರತದಲ್ಲೂ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಕೈಗೊಂಡಿದ್ದು, ಹೊಸ ಇ6 ಎಲೆಕ್ಟಿಕ್ ಕಾರು ಮೊದಲ ಬಾರಿಗೆ ಚೆನ್ನೈ ಹೊರವಲಯದಲ್ಲಿ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಹೊಸ ಕಾರಿನ ಹಲವು ಮಾಹಿತಿಗಳು ಲಭ್ಯವಾಗಿವೆ.
ಹೊಸ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಸಂಪೂರ್ಣ ಆಮದು ನೀತಿ ಅನುಸರಿಸಲಿರುವ ಬಿವೈಡಿ ಕಂಪನಿಯು ಮುಂದಿನ ಕೆಲವು ವರ್ಷಗಳ ನಂತರ ಭಾರತದಲ್ಲಿ ನಿರ್ಮಾಣ ಮಾಡುವ ಗುರಿಹೊಂದಿದೆ.
ಕೇಂದ್ರ ಸರ್ಕಾರದ ಹೊಸ ಆಮದು ನೀತಿ ಅಡಿ ವಿದೇಶಿ ವಾಹನ ಕಂಪನಿಗಳು ಪ್ರತಿ ವರ್ಷ 2,500 ಯುನಿಟ್ ವಾಹನಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಳ್ಳಬಹುದಾದ ಹಿನ್ನೆಲೆಯಲ್ಲಿ ಹೊಸ ಕಾರು ಮಾರಾಟಕ್ಕೆ ಬಿವೈಡಿ ಕೂಡಾ ಸಿದ್ದತೆ ನಡೆಸಿದೆ.
ಚೀನಿ ಮಾರುಕಟ್ಟೆಯಲ್ಲಿ ತನ್ನದೇ ಉತ್ಪಾದನೆಯ ಬ್ಯಾಟರಿ ಸೌಲಭ್ಯ ಹೊಂದಿರುವ ಬಿವೈಡಿ ಕಾರು ಮಾದರಿಗಳು ಭಾರತದಲ್ಲೂ ಗ್ರಾಹಕರನ್ನು ಸೆಳೆಯುವ ಸಿದ್ದತೆಯಲ್ಲಿದ್ದು, ಇ6 ಎಂಪಿವಿ ಕಾರು ಮಾದರಿಯು 41kWh ಬ್ಯಾಟರಿ ಪ್ಯಾಕ್ನೊಂದಿಗೆ ಪ್ರತಿ ಚಾರ್ಜ್ಗೆ ಗರಿಷ್ಠ 522 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಅತ್ಯುತ್ತಮ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ಮತ್ತು ಐಷಾರಾಮಿ ಫೀಚರ್ಸ್ ಒಳಗೊಂಡಿರುವ ಹೊಸ ಕಾರು ಭಾರತದಲ್ಲಿ ಎಕ್ಸ್ಶೋರೂಂ ಪ್ರಕಾರ ರೂ.20 ಲಕ್ಷದಿಂದ ರೂ.25 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಲ್ಲಿದ್ದು, ಭಾರತದಲ್ಲೇ ಪೂರ್ಣ ಪ್ರಮಾಣದ ಉತ್ಪಾದನೆ ನಂತರವಷ್ಟೇ ಹೊಸ ಕಾರಿನ ಬೆಲೆಗಳು ತುಸು ಕಡಿಮೆಯಾಗಲಿವೆ.
ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರಮುಖ ತಾಂತ್ರಿಕ ಅಂಶವಾಗಿರುವ ಬ್ಯಾಟರಿ ಸಾಧನವು ದುಬಾರಿ ಬೆಲೆ ಹೊಂದಿದ್ದು, ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗಾಗಿ ಬಿವೈಡಿ ಸಂಸ್ಥೆಯು ಸ್ಥಳೀಯವಾಗಿಯೇ ಸಂಪನ್ಮೂಲ ಬಳಸಿಕೊಂಡು ವಾಹನ ನಿರ್ಮಾಣ ಮಾಡಲು ಯೋಜನೆಯಲ್ಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಸದ್ಯ ಹೈದ್ರಾಬಾದ್ ಮೂಲದ ಒಲೆಕ್ಟ್ರಾ ಜೊತೆಗೂಡಿ ಎಲೆಕ್ಟ್ರಿಕ್ ಬಸ್ಗಳನ್ನು ಉತ್ಪಾದನೆ ಕೈಗೊಳ್ಳುತ್ತಿರುವ ಬಿವೈಡಿ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಚೆನ್ನೈ ಬಳಿ ಹೊಸ ಘಟಕ ತೆರೆಯುವ ಸಂಬಂಧ ತಮಿಳುನಾಡು ಸರ್ಕಾರದ ಜೊತೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದೆ.