ಶೀಘ್ರದಲ್ಲಿಯೇ ದೇಶಿಯ ಮಾರುಕಟ್ಟೆಗಾಗಿ ವಿವಿಧ ಮಾದರಿಯ ಇವಿ ವಾಹನಗಳನ್ನು ಬಿಡುಗಡೆ ಮಾಡಲಿದೆ BYD
ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೆಚ್ಚಿಸಲು ಕೇಂದ್ರ ಮತ್ತ ರಾಜ್ಯ ಸರ್ಕಾರಗಳು ಹಲವಾರು ಹೊಸ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ವಾಹನ ಕಂಪನಿಗಳು ತಮ್ಮ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸಿ ಮಾರಾಟಕ್ಕೆ ಚಾಲನೆ ನೀಡುತ್ತಿವೆ.

ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ಧನ ಘೋಷಿಸಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದ ಪರಿಣಾಮ ಸಾಂಪ್ರಾದಾಯಿಕ ವಾಹನ ಉತ್ಪಾದನಾ ಕಂಪನಿಗಳ ಜೊತೆ ಸ್ಟಾರ್ಟ್ಅಪ್ ಕಂಪನಿಗಳು ಕೂಡಾ ಹೊಸ ಇವಿ ಮಾದರಿಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಮುಂದಿನ ಕೆಲವೇ ತಿಂಗಳಿನಲ್ಲಿ ಹಲವಾರು ಹೊಸ ಇವಿ ವಾಹನಗಳು ಮಾರುಕಟ್ಟೆ ಪ್ರವೇಶಿಸಲಿವೆ.

ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಕಾರ್ಯನಿರ್ವಹಣೆಯಲ್ಲಿರುವ ಚೀನಿ ಮೂಲದ ಜನಪ್ರಿಯ ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪನಿಯಾಗಿರುವ BYD ಕೂಡಾ ತನ್ನ ಬಹುಬೇಡಿಕೆಯ ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳನ್ನು ಭಾರತದಲ್ಲೂ ಬಿಡುಗಡೆಯ ಯೋಜನೆಯಲ್ಲಿದೆ.

ಹೊಸ ಯೋಜನೆಗಾಗಿ ಈಗಾಗಲೇ ಭಾರತದಲ್ಲಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆಯೊಂದಿಗೆ ವಿವಿಧ ವಾಣಿಜ್ಯ ವಾಹನಗಳ ಕಂಪನಿಗಳೊಂದಿಗೆ ಸಹಭಾಗೀತ್ವ ಯೋಜನೆ ಹೊಂದಿರುವ BYD ಕಂಪನಿಯು ಎಲೆಕ್ಟ್ರಿಕ್ ಬಸ್‌ಗಳನ್ನು ಸಿದ್ದಪಡಿಸುತ್ತಿದ್ದು, ವಾಣಿಜ್ಯ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಅಂತಿಮ ಹಂತದ ಸಿದ್ದತೆಯಲ್ಲಿರುವ ಬಿವೈಡಿ ಕಂಪನಿಯು ಚೀನಿ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಇ6 ಎಂಪಿವಿ ಮಾದರಿಯನ್ನು ಈಗಾಗಲೇ ಭಾರತದಲ್ಲೂ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಕೈಗೊಂಡಿದ್ದು, ಆರಂಭದಲ್ಲಿ ವಾಣಿಜ್ಯ ಮಾದರಿಗಳ ಇವಿ ವಾಹನಗಳಿಗೆ ಆದ್ಯತೆ ನೀಡಲು ಮುಂದಾಗಿದೆ.

ಇತ್ತೀಚೆಗೆ ಇ6 ಎಂಪಿವಿ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ್ದ BYD ಕಂಪನಿಯು ಆರಂಭದಲ್ಲಿ ಬಿಟುಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಟಿ3 ವ್ಯಾನ್ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಡಿಸಿ ಚಾರ್ಜರ್ ಸೌಲಭ್ಯದೊಂದಿಗೆ ಕೇವಲ 90 ನಿಮಿಷಗಳಲ್ಲಿ ಪೂರ್ಣ ಪ್ರಮಾಣದ ಚಾರ್ಜ್ ಪಡೆದುಕೊಳ್ಳುವ ಟಿ3 ವ್ಯಾನ್ ಪ್ರತಿ ಚಾರ್ಜ್‌ಗೆ ಗರಿಷ್ಠ 300 ಕಿ.ಮೀ ಮೈಲೇಜ್ ಹಿಂದಿರುಗಸಲಿದ್ದು, ಅತ್ಯುತ್ತಮ ಒಳಾಂಗಣ ಸೌಲಭ್ಯದೊಂದಿಗೆ ಗರಿಷ್ಠ ಸರಕು ಸಾಗಿಸಲು ಅನುಕೂಲಕರವಾಗಿದೆ.

ಪೋಸ್ಟಲ್ ಸಾಗಾಣಿಕೆಗಾಗಿ, ಬೇಕರಿ ಉದ್ಯಮಗಳಿಗೆ, ಆ್ಯಂಬುಲೆನ್ಸ್ ಬಳಕೆಯ ಉದ್ದೇಶಕ್ಕಾಗಿ ಟಿ3 ವ್ಯಾನ್ ಉತ್ತಮ ಬಾಡಿ ವಿನ್ಯಾಸ ಹೊಂದಿದ್ದು, ಅತಿ ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಹೆಚ್ಚಿನ ಮಟ್ಟದ ಲಾಭಾಂಶ ತಂದುಕೊಡಲಿವೆ.

ಆರಂಭಿಕವಾಗಿ ವಾಣಿಜ್ಯ ಬಳಕೆದಾರರಿಗೆ ಇವಿ ವಾಹನಗಳನ್ನು ಮಾರಾಟ ಮಾಡಲಿರುವ BYD ಕಂಪನಿಯು ಗ್ರಾಹಕರ ಬೇಡಿಕೆ ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ಆಧರಿಸಿ ಪ್ರಯಾಣಿಕ ಇವಿ ವಾಹನಗಳನ್ನು ಬಿಡುಗಡೆ ಮಾಡಲಿದೆ.

BYD ನಿರ್ಮಾಣದ ಇ6 ಎಲೆಕ್ಟಿಕ್ ಕಾರು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, 41kWh ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 522 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಚೀನಿ ಮಾರುಕಟ್ಟೆಯಲ್ಲಿ ತನ್ನದೇ ಉತ್ಪಾದನೆಯ ಬ್ಯಾಟರಿ ಉತ್ಪಾದನಾ ಘಟಕ ಹೊಂದಿರುವ BYD ಕಂಪನಿಯು ಭಾರತದಲ್ಲೂ ವಿವಿಧ ಇವಿ ವಾಹನ ಮಾದರಿಗಳೊಂದಿಗೆ ಗ್ರಾಹಕರನ್ನು ಸೆಳೆಯುವ ಸಿದ್ದತೆಯಲ್ಲಿದ್ದು, ಇವಿ ವಾಣಿಜ್ಯ ವಾಹನಗಳು ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿವೆ.

ಅತ್ಯುತ್ತಮ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ಮತ್ತು ಐಷಾರಾಮಿ ಫೀಚರ್ಸ್ ಒಳಗೊಂಡಿರುವ ಇ6 ಹೊಸ ಕಾರು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ.20 ಲಕ್ಷಕ್ಕಿಂತಲೂ ಕಡಿಮೆ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಲ್ಲಿದ್ದು, ಇವಿ ವಾಣಿಜ್ಯ ವಾಹನಗಳು ರೂ.10 ಲಕ್ಷದೊಳಗೆ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆಯಾಗಲಿವೆ.

ಸದ್ಯ ಭಾರತ ಮತ್ತು ಚೀನಾ ನಡುವಿನ ವಾಣಿಜ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ಭಾರತದಲ್ಲೇ ಪೂರ್ಣ ಪ್ರಮಾಣದ ಉತ್ಪಾದನೆಗಾಗಿ ಸಿದ್ದವಾಗಿರುವ BYD ಕಂಪನಿಯು ತಮಿಳುನಾಡಿನಲ್ಲಿ ಇವಿ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಘಟಕ ತೆರೆಯಲಿದೆ.

ಸದ್ಯ ಹೈದ್ರಾಬಾದ್ ಮೂಲದ Olectra ಜೊತೆಗೂಡಿ ಎಲೆಕ್ಟ್ರಿಕ್ ಬಸ್‌ಗಳನ್ನು ಉತ್ಪಾದನೆ ಕೈಗೊಳ್ಳುತ್ತಿರುವ BYD ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗಾಗಿ ಚೆನ್ನೈ ಬಳಿ ಹೊಸ ಘಟಕ ತೆರೆಯುವ ಸಂಬಂಧ ತಮಿಳುನಾಡು ಸರ್ಕಾರದ ಜೊತೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಿದೆ.


Click it and Unblock the Notifications








